ಮಾತಿನಮನೆಯಲ್ಲಿ “chef ಚಿದಂಬರ”.

ನಟ ಅನಿರುದ್ಧ್ ಜತಕರ್ ನಾಯಕನಾಗಿ ಅಭಿನಯಿಸಿರುವ ಹಾಗೂ “ರಾಘು” ಚಿತ್ರದ ಖ್ಯಾತಿಯ ನಿರ್ದೇಶಕ ಎಂ.ಆನಂದರಾಜ್ ನಿರ್ದೇಶನದ “chef ಚಿದಂಬರ” ಚಿತ್ರದ ಚಿತ್ರೀಕರಣ ಇತ್ತೀಚಿಗೆ ಮುಕ್ತಾಯವಾಗಿದೆ. ಪ್ರಸ್ತುತ ಲೂಪ್ ಸ್ಟುಡಿಯೋದಲ್ಲಿ ಚಿತ್ರಕ್ಕೆ ಮಾತಿನ ಜೋಡಣೆ (ಡಬ್ಬಿಂಗ್) ನಡೆಯುತ್ತಿದೆ. ನಾಯಕ ಅನಿರುದ್ದ್ ಮಾತಿನ ಮೂಲಕ ತಮ್ಮ ಪಾತ್ರಕ್ಕೆ ಜೀವ ತುಂಬುತಿದ್ದಾರೆ.

ಡಾರ್ಕ್ ಕಾಮಿಡಿ ಜಾನರ್ ನ ಈ ಚಿತ್ರದಲ್ಲಿ ಅನಿರುದ್ಧ್ ಶೆಫ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪಾತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದಾರೆ.
ದಮ್ತಿ ಪಿಕ್ಚರ್ಸ್ ಲಾಂಛನದಲ್ಲಿ ರೂಪ ಡಿ.ಎನ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ನಿರ್ದೇಶಕರೆ ಕಥೆ ಬರೆದಿದ್ದು, ಚಿತ್ರಕಥೆ ಹಾಗೂ ಸಂಭಾಷಣೆ ಗಣೇಶ್ ಪರಶುರಾಮ್ ಬರೆದಿದ್ದಾರೆ. ಉದಯಲೀಲ ಛಾಯಾಗ್ರಹಣ, ರಿತ್ವಿಕ್ ಮುರಳಿಧರ್ ಸಂಗೀತ ನಿರ್ದೇಶನ, ವಿಜೇತ್ ಚಂದ್ರ ಸಂಕಲನ, “ವಿಕ್ರಾಂತ್ ರೋಣ” ಖ್ಯಾತಿಯ ಆಶಿಕ್ ಕುಸುಗೊಳ್ಳಿ ಡಿ.ಐ, ನರಸಿಂಹಮೂರ್ತಿ ಸಾಹಸ ನಿರ್ದೇಶನ ಹಾಗೂ ಮಾಧುರಿ ಪರಶುರಾಮ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ಅನಿರುದ್ಧ್ ಅವರಿಗೆ ನಾಯಕಿಯರಾಗಿ ನಿಧಿ ಸುಬ್ಬಯ್ಯ ಹಾಗೂ “ಲವ್ ಮಾಕ್ಟೇಲ್” ಖ್ಯಾತಿಯ ರೆಚೆಲ್ ಡೇವಿಡ್‌ ಅಭಿನಯಿಸಿದ್ದಾರೆ. ಶರತ್ ಲೋಹಿತಾಶ್ವ, ಕೆ.ಎಸ್ ಶ್ರೀಧರ್‌, ಶಿವಮಣಿ ಮುಂತಾದವರು “chef ಚಿದಂಬರ” ಚಿತ್ರದ ತಾರಾಬಳಗದಲ್ಲಿದ್ದಾರೆ.

Similar Posts

  • ಸಂಗೀತ ಕ್ಷೇತ್ರದಲ್ಲಿ ಅಜನೀಶ್‌ ಲೋಕನಾಥ್ ಹೊಸ ಹೆಜ್ಜೆ; 50 ಚಿತ್ರಗಳಿಗೆ ಸಂಗೀತ ನಿರ್ದೇಶನ

    ಸ್ಯಾಂಡಲ್‌ವುಡ್‌ನ ಖ್ಯಾತ ಸಂಗೀತ ನಿರ್ದೇಶಕ, ಸಾಲು ಸಾಲು ಹಿಟ್‌ ಹಾಡುಗಳ ಮೂಲಕ ಸಂಗೀತ ಪ್ರಿಯರ ಗಮನ ಸೆಳೆದವರು ಕನ್ನಡದ ಅಜನೀಶ್‌ ಲೋಕನಾಥ್.‌ ಇದೀಗ ಇದೇ ಅಜನೀಶ್‌ ತಮ್ಮ ವೃತ್ತಿ ಜೀವನದ ಪ್ರಮುಖ ಘಟ್ಟ ತಲುಪಿದ್ದಾರೆ. ಚಿತ್ರೋದ್ಯಮಕ್ಕೆ ಬಂದು 21 ವರ್ಷಗಳಾದರೂ, ಸ್ವತಂತ್ರ ನಿರ್ದೇಶಕರಾಗಿ ಚಿತ್ರೋದ್ಯಮದಲ್ಲಿ ಸುದೀರ್ಘ ಒಂದು ದಶಕಕ್ಕೂ ಹೆಚ್ಚು ಕಾಲದಿಂದ ಇದ್ದಾರೆ. ಇದೀಗ ಇದೇ ಸಂಗೀತ ನಿರ್ದೇಶಕರು ತಮ್ಮ ಕೆರಿಯರ್‌ನಲ್ಲಿ 50 ಸಿನಿಮಾಗಳಿಗೆ ಸಂಗೀತ ನೀಡಿದ ಗುರಿ ತಲುಪಿದ್ದಾರೆ. ಹೀಗಿರುವಾಗಲೇ 2022ರಲ್ಲಿನ ಕಾಂತಾರ ಸಿನಿಮಾ ಅಜನೀಶ್‌…

  • “X&Y” ಚಿತ್ರದ “ಆoಬು ಆಟೋ ” ಎಂಬ ಆಪ್ತಮಿತ್ರ.

    ಇನ್ನೇನು ಬಿಡುಗಡೆಯ ಅoಚಿಗೆ ಬoದಿರುವ ಕನ್ನಡದ “X&Y” ಚಿತ್ರದಲ್ಲಿ  ಆಟೋರಿಕ್ಷಾ “ಆಂಬು ಆಟೋ ” ಆಗಿ ಬಡ್ತಿ ಪಡೆದು ಎಲ್ಲರ ಗಮನ ಸೆಳೆದಿದೆ.  ಆಂಬುಲೆನ್ಸ್ ನಲ್ಲಿರುವoತೆ ಎಲ್ಲ ಸೌಲಭ್ಯಗಳನ್ನು ಈ ಆಟೋದಲ್ಲಿ ಅಳವಡಿಸಿ ಚಿತ್ರದಲ್ಲಿ ಅದನ್ನೊಂದು ಕಲಾವಿದನೆoಬಂತೆ ಕಲಾತ್ಮಕವಾಗಿ ಬಳಸಲಾಗಿದೆ. ಈ ವಿಷಯ ತಿಳಿದ ಆಟೋ ಚಾಲಕರು ಗುಂಪು-ಗುಂಪಾಗಿ, ಚಿತ್ರ ನಿರ್ದೇಶಕ ಸತ್ಯಪ್ರಕಾಶ್ ಅವರನ್ನು ಖುದ್ದು ಭೇಟಿ ಮಾಡಿ, ‘ಸರ್ ಇಲ್ಲಿತನಕ ‘ಆಟೋರಿಕ್ಷಾ’ ನಮ್ಮ ‘ಮಿತ್ರ’ನಾಗಿತ್ತು. ಈಗದನ್ನು ‘ಆಂಬು ಆಟೋ’ ಆಗಿ ಪರಿವರ್ತಿಸಿ ಎಲ್ಲರ ‘ಆಪ್ತಮಿತ್ರ’ನಾಗಿರುವಂತೆ ಮಾಡಿದ್ದೀರಿ…

  • ‘ದೈಜಿ’ ಡಾ.ರಮೇಶ್ ಅರವಿಂದ್ ಅವರ 106 ನೇ ಚಿತ್ರ.

    ‘ದೈಜಿ’ ಮುಂಬರುವ ಥ್ರಿಲ್ಲರ್-ಹಾರರ್ ಚಿತ್ರವಾಗಿದ್ದು, ಡಾ. ರಮೇಶ್ ಅರವಿಂದ್ ಅವರು ಮುಖ್ಯ ಭೂಮಿಕೆಯಲ್ಲಿ ನಟಿಸಲಿದ್ದಾರೆ ಮತ್ತು ಇದನ್ನು ಆಕಾಶ್ ಶ್ರೀವತ್ಸರವರು ನಿರ್ದೇಶಿಸಲಿದ್ದಾರೆ. ವಿಭಾ ಕಶ್ಯಪ್ ನಿರ್ಮಾಣದ ಬ್ಯಾನರ್ ಅಡಿಯಲ್ಲಿ ರವಿ ಕಶ್ಯಪ್ ಅವರು ಈ ಚಿತ್ರವನ್ನು ನಿರ್ಮಿಸಲಿದ್ದಾರೆ. ಈ ಚಿತ್ರವು ಡಾ.ರಮೇಶ್ ಅರವಿಂದ್ ಅವರ 106 ನೇ ಚಿತ್ರವಾಗಿದ್ದು, ಈ ಹಿಂದೆ ಶಿವಾಜಿ ಸುರತ್ಕಲ್ 1 ಮತ್ತು 2  ಸಿನಿಮಾಗಳನ್ನು ನಿರ್ದೇಶಸಿದ್ದ ನಿರ್ದೇಶಕ ಆಕಾಶ್ ಶ್ರೀವತ್ಸರವರು ಮೂರನೇ ಬಾರಿಗೆ ನಿರ್ದೇಶನದ ಜವಾಬ್ದಾರಿ ಹೊರಲಿದ್ದಾರೆ. ದೈಜಿಯು ಹಾರರ್-ಸೈಕಲಾಜಿಕಲ್ ಥ್ರಿಲ್ಲರ್…

  • “X&Y” ಚಿತ್ರದ “ಆಂಬು ಆಟೋ ” ಗೆ ಫಿದಾ ಆದ ಆಟೋ ಚಾಲಕರು

    ರೀಲ್ಸ್ ಮೂಲಕ ಜನರಿಗೆ ಜಾಗೃತಿ . ಇನ್ನೇನು ಬಿಡುಗಡೆಯ ಹೊಸ್ತಿಲಲ್ಲಿರುವ ಕನ್ನಡದ ಬಹು ನಿರೀಕ್ಷಿತ “X&Y” ಚಿತ್ರತಂಡ ಇತ್ತೀಚೆಗೆ ಆಟೋರಿಕ್ಷಾ “ಆಂಬು ಆಟೋ” ಎಂಬ ವಾಹನದ ಬಗ್ಗೆ ಮಾಹಿತಿ ನೀಡಿತ್ತು. ಇದನ್ನು ಚಿತ್ರದಲ್ಲಿ ಕಲಾವಿದನಂತೆ ಸಹ ನಿರ್ದೇಶಕ ಡಿ.ಸತ್ಯಪ್ರಕಾಶ್ ಬಳಸಿಕೊಂಡಿದ್ದಾರೆ. ಈಗಾಗಲೇ ಎಲ್ಲರ ಗಮನ ಸೆಳೆದಿರುವ “ಆಂಬು ಆಟೋ”ದಲ್ಲಿ ಆಂಬುಲೆನ್ಸ್ ನಲ್ಲಿರುವoತೆ ಎಲ್ಲ ಸೌಲಭ್ಯಗಳಿದೆ. ಆಟೋದಲ್ಲೂ ಇಷ್ಟು ಸೌಲಭ್ಯಗಳನ್ನು ಅಳವಡಿಸಬಹುದು ಎಂಬುದನ್ನು ” ರಾಮಾ ರಾಮಾ ರೆ” ಖ್ಯಾತಿಯ ನಿರ್ದೇಶಕ ಸತ್ಯಪ್ರಕಾಶ್ ತೋರಿಸಿಕೊಟ್ಟಿದ್ದಾರೆ.“ಆಂಬು ಆಟೋ” ಗೆ ಆಟೋ ಚಾಲಕರು…

  • “ಮೇಘ” ಸಂದೇಶ ಹೊತ್ತು ಬರಲಿದ್ದಾರೆ ಕಿರಣ್ ರಾಜ್ . ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಚರಣ್ ನಿರ್ದೇಶನ .

    “ಕನ್ನಡತಿ” ಧಾರಾವಾಹಿ ಮೂಲಕ ಕನ್ನಡಿಗರ ಮನ ಗೆದ್ದಿರುವ ನಟ ಕಿರಣ್ ರಾಜ್ ನಾಯಕನಾಗಿ ನಟಿಸಿರುವ, ಚರಣ್ ನಿರ್ದೇಶನದ “ಮೇಘ” ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ಖ್ಯಾತ ಗೀತರಚನೆಕಾರ ಡಾ||ವಿ.ನಾಗೇಂದ್ರ ಪ್ರಸಾದ್ “ಮೇಘ” ಚಿತ್ರದ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು “ಮೇಘ” ಚಿತ್ರದ ಕುರಿತು ಮಾತನಾಡಿದರು. ನಾನು ಮೂಲತಃ ಐಟಿ ಉದ್ಯೋಗಿ. ಕೋವಿಡ್ ನಂತರ ಐಟಿ ಕೆಲಸ ಬಿಟ್ಟು ಡಾ||ವಿ.ನಾಗೇಂದ್ರಪ್ರಸಾದ್ ಅವರ ಬಳಿ ಸಿನಿಮಾ ಕೆಲಸ ಕಲಿಯಲು ಆರಂಭಿಸಿದೆ. ಇನ್ನು “ಮೇಘ”…

  • ದುಬೈ ನಲ್ಲಿ “ಜಸ್ಟ್ ಪಾಸ್”.

    ರಾಯ್ಸ್ ಎಂಟರ್ ಟೈನ್ಮೆಂಟ್ ಲಾಂಛನದಲ್ಲಿ ಕೆ.ವಿ.ಶಶಿಧರ್ ನಿರ್ಮಿಸುತ್ತಿರುವ, ಕೆ.ಎಂ.ರಘು ನಿರ್ದೇಶನದಲ್ಲಿ ಶ್ರೀ ಹಾಗೂ ಪ್ರಣತಿ ನಾಯಕ- ನಾಯಕಿಯಾಗಿ ನಟಿಸಿರುವ “ಜಸ್ಟ್ ಪಾಸ್” ಚಿತ್ರದ ಟೀಸರ್ ಡಿಸೆಂಬರ್ 10ರಂದು ದುಬೈನಲ್ಲಿ ನಡೆಯಲಿರುವ “ದುಬೈ ದಸರಾ” ಸಂಗೀತ ರಸಸಂಜೆ ಕಾರ್ಯಕ್ರಮದಲ್ಲಿ ಪ್ರಸಾರವಾಗಲಿದೆ. ನಾಡಿನ ಹೆಸರಾಂತ ಕಲಾವಿದರು ಈ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ. ಸಾವಿರಾರು ಕನ್ನಡಿಗರ ಸಮ್ಮುಖದಲ್ಲಿ “ಜಸ್ಟ್ ಪಾಸ್” ಚಿತ್ರದ ಟೀಸರ್ ಪ್ರದರ್ಶನವಾಗಲಿದೆ. ಡಿಸೆಂಬರ್‌ 13‌ ರಂದು ಈ ಚಿತ್ರದ ಟೀಸರ್ A2 ಮ್ಯೂಸಿಕ್ ಮೂಲಕ ಬಿಡುಗಡೆಯಾಗಲಿದೆ. ಶ್ರೀ, ಪ್ರಣತಿ, ರಂಗಾಯಣರಘು…

0 0 votes
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments