“chef ಚಿದಂಬರ” ಚಿತ್ರದಲ್ಲಿ “ಅನು” ವಾಗಿ ಕಾಣಿಸಿಕೊಳ್ಳಲಿದ್ದಾರೆ “ಲವ್ ಮಾಕ್ಟೇಲ್” ಹುಡುಗಿ ರೆಚೆಲ್ ಡೇವಿಡ್ .
“ಲವ್ ಮಾಕ್ಟೇಲ್” ಚಿತ್ರದ ಮೂಲಕ ಎಲ್ಲರ ಮನ ಗೆದ್ದಿರುವ ನಟಿ ರೆಚೆಲ್ ಡೇವಿಡ್. ರೆಚೆಲ್ ಅವರು ಎಂ.ಆನಂದರಾಜ್ ನಿರ್ದೇಶನದ ಹಾಗೂ ಅನಿರುದ್ದ್ ಜತಕರ್ ನಾಯಕನಾಗಿ ನಟಿಸಿರುವ “chef ಚಿದಂಬರ” ಚಿತ್ರದ ಪ್ರಮುಖಪಾತ್ರದಲ್ಲಿ ಅಭಿನಯಿಸಿದ್ದಾರೆ. ಈ ಚಿತ್ರದಲ್ಲಿ “ಅನು” ಎಂಬ ಪಾತ್ರದಲ್ಲಿ ರೆಚೆಲ್ ಡೇವಿಡ್ ಕಾಣಿಸಿಕೊಳ್ಳಲಿದ್ದಾರೆ. ರೆಚೆಲ್ ಅವರ ಪಾತ್ರವನ್ನು ಪರಿಚಯಿಸುವ ಪೋಸ್ಟರ್ ಅನ್ನು ಇತ್ತೀಚಿಗೆ ಚಿತ್ರತಂಡ ಬಿಡುಗಡೆ ಮಾಡಿದೆ.
ಪ್ರಸ್ತುತ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿರುವ “chef ಚಿದಂಬರ” ಸದ್ಯದಲ್ಲೇ ತೆರೆಯ ಮೇಲೆ ರಾರಾಜಿಸಲಿದ್ದಾನೆ. ಈಗಾಗಲೇ ಪೋಸ್ಟರ್, ಕ್ಯಾರೆಕ್ಟರ್ ಟೀಸರ್ ಮೂಲಕ ಮನೆಮಾತಾಗಿರುವ ಈ ಚಿತ್ರದ ಬಿಡುಗಡೆಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
ದಮ್ತಿ ಪಿಕ್ಚರ್ಸ್ ಲಾಂಛನದಲ್ಲಿ ರೂಪ ಡಿ.ಎನ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ನಿರ್ದೇಶಕರೆ ಕಥೆ ಬರೆದಿದ್ದು, ಚಿತ್ರಕಥೆ ಹಾಗೂ ಸಂಭಾಷಣೆ ಗಣೇಶ್ ಪರಶುರಾಮ್ ಬರೆದಿದ್ದಾರೆ. ಉದಯಲೀಲ ಛಾಯಾಗ್ರಹಣ, ರಿತ್ವಿಕ್ ಮುರಳಿಧರ್ ಸಂಗೀತ ನಿರ್ದೇಶನ, ವಿಜೇತ್ ಚಂದ್ರ ಸಂಕಲನ, “ವಿಕ್ರಾಂತ್ ರೋಣ” ಖ್ಯಾತಿಯ ಆಶಿಕ್ ಕುಸುಗೊಳ್ಳಿ ಡಿ.ಐ, ನರಸಿಂಹಮೂರ್ತಿ ಸಾಹಸ ನಿರ್ದೇಶನ ಹಾಗೂ ಮಾಧುರಿ ಪರಶುರಾಮ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.
ಅನಿರುದ್ಧ್ ಅವರಿಗೆ ನಾಯಕಿಯರಾಗಿ ನಿಧಿ ಸುಬ್ಬಯ್ಯ ಹಾಗೂ “ಲವ್ ಮಾಕ್ಟೇಲ್” ಖ್ಯಾತಿಯ ರೆಚೆಲ್ ಡೇವಿಡ್ ಅಭಿನಯಿಸಿದ್ದಾರೆ. ಶರತ್ ಲೋಹಿತಾಶ್ವ, ಕೆ.ಎಸ್ ಶ್ರೀಧರ್, ಶಿವಮಣಿ ಮುಂತಾದವರು “chef ಚಿದಂಬರ” ಚಿತ್ರದ ತಾರಾಬಳಗದಲ್ಲಿದ್ದಾರೆ.