ಫೆಬ್ರವರಿಯಲ್ಲಿ ತೆರೆಗೆ ಬರಲಿದೆ “ಪುರುಷೋತ್ತಮನ‌ ಪ್ರಸಂಗ”. ಇದು ದೇವದಾಸ್ ಕಾಪಿಕಾಡ್ ಅವರ ನಿರ್ದೇಶನದ ಮೊದಲ ಕನ್ನಡ ಚಿತ್ರ

ರಾಷ್ಟ್ರಕೂಟ ಪಿಕ್ಚರ್ಸ್ ಲಾಂಛನದಲ್ಲಿ ವಿ ರವಿ ಕುಮಾರ್ ನಿರ್ಮಾಣದಲ್ಲಿ ಖ್ಯಾತ ನಟ, ನಿರ್ದೇಶಕ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ನಿರ್ದೇಶನದಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ “ಪುರುಷೋತ್ತಮನ‌ ಪ್ರಸಂಗ” ಚಿತ್ರ ಬಿಡುಗಡೆಗೆ ಸಿದ್ದವಾಗಿದ್ದು, ಫೆಬ್ರವರಿಯಲ್ಲಿ ತೆರೆಗೆ ಬರಲಿದೆ. ಈ ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಹೆಚ್ಚಿನ ಮಾಹಿತಿ ನೀಡಿದರು.

ತುಳುವಿನಲ್ಲಿ ಒಂಭತ್ತು ಸಿನಿಮಾಗಳನ್ನು ನಿರ್ದೇಶಿಸಿರುವ ನನಗೆ ಕನ್ನಡದಲ್ಲಿ ಇದು ಮೊದಲ ಚಿತ್ರ ಎಂದು ಮಾತನಾಡಿದ ನಿರ್ದೇಶಕ ದೇವದಾಸ್ ಕಾಪಿಕಾಡ್, ಕನ್ನಡದಲ್ಲಿ ನನಗೆ ಮೊದಲ ಚಿತ್ರವನ್ನು ನಿರ್ದೇಶಿಸಲು ಅವಕಾಶ ನೀಡಿದ ನಿರ್ಮಾಪಕರಿಗೆ ಧನ್ಯವಾದ. “ಪುರುಷೋತ್ತಮನ ಪ್ರಸಂಗ” ಕೌಟುಂಬಿಕ ಕಥಾಹಂದರ ಹೊಂದಿರುವ ನೈಜಘಟನೆ ಆಧಾರಿತ ಚಿತ್ರ. “ಪುರುಷೋತ್ತಮ” ನ ಪಾತ್ರದಲ್ಲಿ ನಿರ್ಮಾಪಕ ರವಿಕುಮಾರ್ ಅವರ ಪುತ್ರ ಅಜಯ್ ಅಭಿನಯಿಸಿದ್ದಾರೆ. ಈ ಪಾತ್ರಕ್ಕೆ ಹೇಳಿಮಾಡಿಸಿದ ನಟ ಅಜಯ್. ಹೊರದೇಶದಲ್ಲಿ ಸಿನಿಮಾ ಕುರಿತು ಅಧ್ಯಯನ ಮಾಡಿ ಬಂದಿದ್ದಾರೆ. ರಿಷಿಕಾ ನಾಯ್ಕ್ ಈ ಚಿತ್ರದ ನಾಯಕಿ. ನವೀನ್ ಡಿ ಪಡೀಲ್, ಅರವಿಂದ್ ಬೋಳಾರ್, ಭೋಜರಾಜ್ ವಾಮಂಜೂರು ಮುಂತಾದ ಕಲಾವಿದರು ಅಭಿನಯಿಸಿದ್ದಾರೆ. ನಾನು ಕೂಡ ನಟಿಸಿದ್ದೇನೆ. ನನ್ನ ಮಗ ಅರ್ಜುನ್ ಸಹ ನಿರ್ದೇಶನ ಮಾಡಿದ್ದಾರೆ. ನಕುಲ್ ಅಭಯಂಕರ್ ಅವರ ಸಂಗೀತ ನಿರ್ದೇಶನದಲ್ಲಿ ನಾಲ್ಕು ಹಾಡುಗಳು ಮೂಡಿಬಂದಿದೆ. ಜಯಂತ ಕಾಯ್ಕಿಣಿ, ದೊಡ್ಡರಂಗೇ ಗೌಡ, ವಿ.ನಾಗೇಂದ್ರ ಪ್ರಸಾದ್ ಹಾಗೂ ನಾನು ಹಾಡುಗಳನ್ನು ಬರೆದಿದ್ದೇವೆ. ವಿಷ್ಣು ಈ ಚಿತ್ರದ ಛಾಯಾಗ್ರಾಹಕರು. ಮಂಗಳೂರು ಹಾಗೂ ದುಬೈನಲ್ಲಿ ಚಿತ್ರೀಕರಣ ಮಾಡಿದ್ದೇವೆ. ಫೆಬ್ರವರಿ ಮಧ್ಯದಲ್ಲಿ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ ಎಂದು ತಿಳಿಸಿದರು.

ನಾನು ಈ ಹಿಂದೆ “ಕಿಸ್”, ” ಮೆಹಬೂಬ “, “ನಾಟ್ ಔಟ್” ಚಿತ್ರಗಳಲ್ಲಿ ಅಭಿನಯಿಸಿದ್ದೇನೆ. ನಾಯಕನಾಗಿ ನಟಿಸಿರುವ ಮೊದಲ. ಚಿತ್ರವಿದು. ತುಳು ರಂಗಭೂಮಿ ಹಾಗೂ ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿರುವ ನಿರ್ದೇಶಕ ದೇವದಾಸ್ ಕಾಪಿಕಾಡ್ ಅವರ ನಿರ್ದೇಶನದಲ್ಲಿ ಚಿತ್ರ ಚೆನ್ನಾಗಿ ಮೂಡಿಬಂದಿದೆ. ನನ್ನ ಪಾತ್ರವೂ ಚೆನ್ನಾಗಿದೆ ಎಂದರು ನಾಯಕ ಅಜಯ್.

ನಾಯಕಿ ರಿಷಿಕಾ ನಾಯ್ಕ್ ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ನಿರ್ಮಾಪಕರಾದ ವಿ.ರವಿಕುಮಾರ್, ಶಂಶುದ್ದೀನ್ ಚಿತ್ರದ ಕುರಿತು ಮಾತನಾಡಿದರು. ಶರ್ಮಿಳಾ ಕಾಪಿಕಾಡ್ ಚಿತ್ರಕ್ಕೆ ಶುಭ ಹಾರೈಸಿದರು.

Similar Posts

0 0 votes
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments