ಮಂತ್ರಾಲಯ ಮಠಾಧೀಶರಾದ ಶ್ರೀಸುಬುಧೇಂದ್ರ ತೀರ್ಥರಿಂದ “ಶ್ರೀಜಗನ್ನಾಥದಾಸರು ಭಾಗ ೨” ಚಿತ್ರದ ಹಾಡುಗಳ ಅನಾವರಣ .

ನಾಡಿನ ಪ್ರಸಿದ್ದ ಹರಿದಾಸರ ಜೀವನ ಚರಿತ್ರೆಯನ್ನು ಮಧುಸೂದನ್ ಹವಾಲ್ದಾರ್ ಅವರು ಸಿನಿಮಾ ಮೂಲಕ ಜನರಿಗೆ ಪರಿಚಯಿಸಿಸುತ್ತಿದ್ದಾರೆ. ದಾಸಶ್ರೇಷ್ಠರಾದ “ಶ್ರೀಜಗನ್ನಾಥದಾಸರು”, ” ಶ್ರೀವಿಜಯದಾಸರು”, “ಶ್ರೀಮಹಿಪತಿದಾಸರು”, ” ಶ್ರೀಪ್ರಸನ್ನವೆಂಕಟದಾಸರು” ಮುಂತಾದ ಮಹಾಮಹಿಮರ ಕುರಿತಾದ ಚಿತ್ರಗಳು ಈಗಾಗಲೇ ಬಿಡುಗಡೆಯಾಗಿದೆ. ಪ್ರಸ್ತುತ “ಶ್ರೀಜಗನ್ನಾಥದಾಸರು ಭಾಗ ೨” ಚಿತ್ರ ಸಹ ತೆರೆಗೆ ಬರಲು ಸಿದ್ದವಾಗಿದ್ದು, ಇತ್ತೀಚೆಗೆ ಹಾಡುಗಳು ಅನಾವರಣವಾಗಿದೆ. ಗಾಯನ ಸಮಾಜದಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಮಂತ್ರಾಲಯ ಮಠಾಧೀಶರಾದ ಶ್ರೀಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು “ಶ್ರೀಜಗನ್ನಾಥದಾಸರು ಭಾಗ ೨” ಚಿತ್ರದ ಹಾಡುಗಳನ್ನು ಲೋಕಾರ್ಪಣೆ ಮಾಡಿದರು. ಮಧುಸೂದನ್ ಹವಾಲ್ದಾರ್ ಹಾಗೂ ರಾಯಚೂರು ಶೇಷಗಿರಿದಾಸ್ ಸಂಗೀತ ಸಂಯೋಜಿಸಿರುವ ಈ ಚಿತ್ರದಲ್ಲಿ ಎಂಟು ಹಾಡುಗಳಿದ್ದು, ಜನಪ್ರಿಯ ಗಾಯಕರು ಹಾಡಿದ್ದಾರೆ. ಸಮಾರಂಭದಲ್ಲಿ ಆರು ಹಾಡುಗಳನ್ನು ಪ್ರದರ್ಶಿಸಲಾಯಿತು.
ಇದೇ ಸಂದರ್ಭದಲ್ಲಿ ನಾಡಿನ ಹೆಸರಾಂತ ದಾಸರಾದ 99 ವಯಸ್ಸಿನ ಶ್ರೀಅನಂತಾಚಾರ್ ಕಟಗೇರಿ ಅವರನ್ನು ಸನ್ಮಾನಿಸಲಾಯಿತು. ಈ ವಯಸ್ಸಿನಲ್ಲೂ ಕಟಗೇರಿ ದಾಸರು ವಿಜಯದಾಸರ ಕೀರ್ತನೆ ಹಾಡಿದ್ದು ಎಲ್ಲರ ಕಣ್ಣುಗಳಲ್ಲಿ ಆನಂದ ಭಾಷ್ಪ ಸುರಿಯಿತು. ಖ್ಯಾತ ಗಾಯಕಿ ಸಂಗೀತ ಕಟ್ಟಿ ಅವರ ಅಮೋಘ ಗಾಯನ ಕೂಡ ಕೇಳುಗರನ್ನು ಬೇರಯದೆ ಲೋಕಕ್ಕೆ ಕರೆದುಕೊಂಡು ಹೋಯಿತು. ನಾಡಿನ ವಿವಿಧ ಕ್ಷೇತ್ರಗಳ ಗಣ್ಯರು ಹಾಗೂ ಚಲನಚಿತ್ರ ತಂಡದವರು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಹಾಡುಗಳನ್ನು ಬಿಡುಗಡೆ ಮಾಡಿ ಅನುಗ್ರಹ ಸಂದೇಶ ನೀಡಿದ ಪೂಜ್ಯ ಶ್ರೀಪಾದರು, ಮಧುಸೂದನ್ ಹವಾಲ್ದಾರ್ ಅವರು ಮಾಡುತ್ತಿರುವ ಕಾರ್ಯ ಬಹಳ ದೊಡ್ಡದು. ಅಶ್ಲೀಲ ಸಂಭಾಷಣೆಯಿಂದ ಕೂಡಿರುವ ಹಾಗೂ ಹೊಡಿಬಡಿ ಚಿತ್ರಗಳೆ ಹೆಚ್ಚು ಬರುತ್ತಿರುವ ಈ ಕಾಲದಲ್ಲಿ ನಾಡಿನ ಹರಿದಾಸರ ಬಗ್ಗೆ ಇಂದಿನ ಜನತೆಗೆ ಪರಿಚಯಿಸುವ ಚಿತ್ರಗಳನ್ನು ಮಧುಸೂದನ್ ಹವಾಲ್ದಾರ್ ಅವರು ನಿರ್ಮಾಣ ಮಾಡುತ್ತಿರುವುದು ನಿಜಕ್ಕೂ ಶ್ಲಾಘನೀಯ. ಇದರ ಉಪಯೋಗವನ್ನು ಹೆಚ್ಚಾಗಿ ಯುವಜನತೆ ಪಡೆದುಕೊಳ್ಳಬೇಕು. “ಶ್ರೀಜಗನ್ನಾಥದಾಸರು ಭಾಗ ೨” ಚಿತ್ರ ಅತ್ಯಂತ ಯಶಸ್ವಿಯಾಗಲಿ ಎಂದರು.

ಮಾತಾಂಬುಜ ಮೂವೀಸ್ ಲಾಂಛನದಲ್ಲಿ ಮಧುಸೂದನ್ ಹವಾಲ್ದಾರ್ ಅವರೆ ನಿರ್ಮಿಸಿ, ನಿರ್ದೇಶಿಸಿರುವ ಈ ಚಿತ್ರ ಆಗಸ್ಟ್ ನಲ್ಲಿ ತೆರೆಗೆ ಬರಲಿದೆ.

Similar Posts

  • RaghavendraChitravani Awards 2024 – Sudheendravenkatesh

    ಈ ಬಾರಿಯ ಪ್ರಶಸ್ತಿಗಳ ವಿವರ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳು ಶ್ರೀಮತಿ ಮೀನಾಕ್ಷಿ ಕೆ.ವಿ. ಜಯರಾಂ (ಹಿರಿಯ ಚಲನಚಿತ್ರ ನಿರ್ಮಾಪಕರು)ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಶ್ರೀ ಕೆ.ಜೆ. ಕುಮಾರ್ ( ಹಿರಿಯ ಪತ್ರಕರ್ತರು )**ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ – ಕುಮಾರಿ ಅನುರಾಧಾ ಭಟ್‍(ಗಾಯಕಿ)ಡಾ. ರಾಜಕುಮಾರ್ ಪ್ರಶಸ್ತಿ, ಶ್ರೀಮತಿ ಪಾರ್ವತಮ್ಮ ರಾಜಕುಮಾರ್ ಕುಟುಂಬದವರಿಂದ (ಖ್ಯಾತ ಹಿನ್ನೆಲೆ ಗಾಯಕರಿಗೆ ನೀಡುವ ಪ್ರಶಸ್ತಿ) ಶ್ರೀ ಓಂಪ್ರಕಾಶ್‍ ರಾವ್‍(ಹಿರಿಯ ನಿರ್ದೇಶಕರು)ಯಜಮಾನ ಚಿತ್ರದ ಖ್ಯಾತಿಯ ಆರ್. ಶೇಷಾದ್ರಿ ಸ್ಮರಣಾರ್ಥ ಪ್ರಶಸ್ತಿ ಶ್ರೀಮತಿ ಭಾರತಿ…

  • ಒಂದು ಉತ್ತಮ ಸಾಕ್ಷ್ಯಚಿತ್ರ ಸಂವಹನ ಆರಂಭಿಸಬೇಕು: ಮಾಯ ಚಂದ್ರ

    ಸಾಕ್ಷ್ಯಚಿತ್ರ ನಿರ್ಮಾಣ ಕುರಿತು ಬೆಳಕು ಚೆಲ್ಲಿದ ಖ್ಯಾತ ಸಾಕ್ಷ್ಯಚಿತ್ರ ನಿರ್ದೇಶಕಿ ಬೆಂಗಳೂರು ಚಿತ್ರೋತ್ಸವ ವೇದಿಕೆ: ‘ಒಂದು ಉತ್ತಮ ಸಾಕ್ಷ್ಯಚಿತ್ರ ಸಂವಹನ ಆರಂಭಿಸಬೇಕು. ಸಾಕ್ಷ್ಯಚಿತ್ರ ಕೊನೆಗೊಂಡ ತಕ್ಷಣ ಸಂವಾದ ಆರಂಭವಾಗುವಂತೆ ಮಾಡಬೇಕು. ಸಾಕ್ಷ್ಯಚಿತ್ರವನ್ನು ಅರ್ಥಪೂರ್ಣವಾಗಿ, ಕಥನಪೂರ್ಣವಾಗಿ ಮಾಡಿದಾಗ ಅದು ಜನರಿಗೆ ತಲುಪುತ್ತದೆ’ ಎಂದು ಖ್ಯಾತ ಸಾಕ್ಷ್ಯಚಿತ್ರ ನಿರ್ದೇಶಕಿ ಮಾಯ ಚಂದ್ರ ಹೇಳಿದರು. ೧೭ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ನಾಲ್ಕನೇ ದಿನ ನಡೆದ ಸಾಕ್ಷ್ಯಚಿತ್ರ ನಿರ್ಮಾಣದ 12 ನಿಯಮಗಳು ಎಂಬ ಗೋಷ್ಠಿಯಲ್ಲಿ ಅವರು ಸಾಕ್ಷ್ಯಚಿತ್ರ ನಿರ್ದೇಶನ, ಚಿತ್ರೀಕರಣ ಸಿದ್ಧತೆ, ಸಾಕ್ಷ್ಯಚಿತ್ರ…

  • ಪ್ರಜ್ವಲ್ ದೇವರಾಜ್ – ಅದಿತಿ ಪ್ರಭುದೇವ ಅಭಿನಯದ “ಮಾಫಿಯಾ” ಚಿತ್ರಕ್ಕೆ ಡಬ್ಬಿಂಗ್ ಮುಕ್ತಾಯ. .

    ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸಿರುವ, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ, ಅದಿತಿ ಪ್ರಭುದೇವ ನಾಯಕಿಯಾಗಿ ನಟಿಸಿರುವ ಹಾಗೂ ಲೋಹಿತ್ ಹೆಚ್ ನಿರ್ದೇಶಿಸಿರುವ “ಮಾಫಿಯಾ” ಚಿತ್ರಕ್ಕೆ ಸಾಧುಕೋಕಿಲ ಅವರ ಲೂಪ್ ಸ್ಟುಡಿಯೋದಲ್ಲಿ ಡಬ್ಬಿಂಗ್ ಮುಕ್ತಾಯವಾಗಿದೆ. ಅಕ್ಟೋಬರ್ ನಲ್ಲಿ ಟೀಸರ್ ಬರಲಿದ್ದು, ನವೆಂಬರ್ ಅಂತ್ಯದ ವೇಳೆಗೆ ಸಿನಿಮಾ ತೆರೆಗೆ ಬರಲಿದೆ. ಆಕ್ಷನ್ ಜಾನರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರು, ಮೈಸೂರು ಹಾಗೂ ಹೈದರಾಬಾದ್ ನಲ್ಲಿ ಚಿತ್ರೀಕರಣ ನಡೆದಿದೆ. ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಈ…

  • ಏಪ್ರಿಲ್ 15ಕ್ಕೆ ಟೊವಿನೋ ಥಾಮಸ್ – ಕಯಾದು ಲೋಹರ್ ಅಭಿನಯದ ‘ಪಳ್ಳಿ ಚಟ್ಟಂಬಿ’ ತೆರೆಗೆ

    ಕರ್ನಾಟಕದಲ್ಲಿ ಹೊಂಬಾಳೆ ಫಿಲಂಸ್ ಹಂಚಿಕೆ ಮಲಯಾಳಂ ನಟ ಟೊವಿನೋ ಥಾಮಸ್ ಹಾಗೂ ಕನ್ನಡದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ಕಯಾದು ಲೋಹರ್ ಅಭಿನಯದ ‘ಪಳ್ಳಿ ಚಟ್ಟಂಬಿ’ ಸಿನಿಮಾ ಏಪ್ರಿಲ್ 15ರಂದು ತೆರೆಗೆ ಬರಲು ಸಿದ್ಧವಾಗಿದೆ. ಮಲಯಾಳಂ ಜೊತೆಗೆ ಕನ್ನಡದಲ್ಲೂ ಈ ಸಿನಿಮಾ ತೆರೆಗೆ ಬರುತ್ತಿರುವುದು ವಿಶೇಷ. ಇತ್ತೀಚೆಗೆ ಸಿನಿಮಾ ತಂಡ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಚಿತ್ರದ ಬಗ್ಗೆ ಮಾಹಿತಿ ನೀಡಿತು. ‘ಪಳ್ಳಿ ಚೆಟ್ಟಂಬಿ’ ಚಿತ್ರವನ್ನು ವರ್ಲ್ಡ್ ವೈಡ್ ಫಿಲಂಸ್, ಸಿ ಕ್ಯೂಬ್ ಬ್ರೋಸ್ ಎಂಟರ್ಟೇನ್ಮೆಂಟ್ ಅಡಿಯಲ್ಲಿ ನೌಫಲ, ಬ್ರಿಜೇಶ್,…

  • “ಗನ್ಸ್ ಅಂಡ್ ರೋಸಸ್” ಚಿತ್ರದಲ್ಲಿ ಖ್ಯಾತ ನಟ ಕಿಶೋರ್ .

    ಹೆಚ್ ಆರ್ ನಟರಾಜ್ ನಿರ್ಮಾಣದ, ಹೆಚ್ ಎಸ್ ಶ್ರೀನಿವಾಸಕುಮಾರ್ ನಿರ್ದೇಶನದಲ್ಲಿ ಅರ್ಜುನ್ ನಾಯಕರಾಗಿ ನಟಿಸಿರುವ “ಗನ್ಸ್ ಅಂಡ್” ರೋಸಸ್ ಚಿತ್ರದಲ್ಲಿ ಖ್ಯಾತ ನಟ ಕಿಶೋರ್ ಅಭಿನಯಿಸಿದ್ದಾರೆ. ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಿಶೋರ್ ಅವರು ಕಾಣಿಸಿಕೊಂಡಿದ್ದು, ಇತ್ತೀಚಿಗೆ ಅವರು ಅಭಿನಯಿಸಿದ ಸನ್ನಿವೇಶಗಳನ್ನು ಬೆಂಗಳೂರಿನಲ್ಲಿ ಚಿತ್ರಿಸಿಕೊಳ್ಳಲಾಗಿದೆ. “ಗನ್ಸ್ ಅಂಡ್ ರೋಸಸ್” ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಒಂದೆರಡು ದಿನಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ಶರತ್ ಅವರು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಈ ಚಿತ್ರಕ್ಕೆ ಶಶಿಕುಮಾರ್ ಸಂಗೀತ ನಿರ್ದೇಶನ,…

  • “ಹಂಸಗೀತೆ”ಗೆ ಹೆಜ್ಜೆ ಹಾಕಲಿದ್ದಾರೆ ಭಾವನಾ ರಾಮಣ್ಣ .

    “ಚಂದ್ರಮುಖಿ ಪ್ರಾಣಸಖಿ” ಸೇರಿದಂತೆ ಅನೇಕ ಚಿತ್ರಗಳ ಮೂಲಕ ಕನ್ನಡಿಗರ ಮನಗೆದ್ದಿರುವ ನಟಿ ಭಾವನಾ ರಾಮಣ್ಣ ಅತ್ಯುತ್ತಮ ನೃತ್ಯಗಾರ್ತಿಯೂ ಹೌದು. ಕನ್ನಡದ ಜನಪ್ರಿಯ ಕಾದಂಬರಿಕಾರ ತ.ರಾ.ಸುಬ್ಬರಾಯರ ‘ಹಂಸಗೀತೆ’ ಕಾದಂಬರಿಯನ್ನು ಜಿ.ವಿ.ಅಯ್ಯರ್ ಅವರು ಚಲನಚಿತ್ರವಾಗಿಸಿದ್ದರು. ಈಗ ನಟಿ ಭಾವನ “ಹಂಸಗೀತೆ” ಯನ್ನು ನೃತ್ಯ ರೂಪಕವಾಗಿ ತರುತ್ತಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ನೀಡಲು ಭಾವನ ರಾಮಣ್ಣ ತಮ್ಮ ಮನೆಯಲ್ಲೇ ಪತ್ರಿಕಾಗೋಷ್ಟಿ ಆಯೋಜಿಸಿದ್ದರು.ನಟಿ ಭಾವನಾ, ಅವರ ಸಹೋದರ ಅರವಿಂದ್ ರಾಮಣ್ಣ, ಸಹೋದರಿ ಶ್ಯಾಲಿನಿ ರಾಮಣ್ಣ ಹಾಗೂ ಬರಹಗಾರ ವಿಕ್ರಂ ಹತ್ವಾರ್ ಪತ್ರಿಕಾಗೋಷ್ಠಿಯಲ್ಲಿ…

0 0 votes
Article Rating
Subscribe
Notify of
guest
0 Comments
Oldest
Newest Most Voted