ಟ್ರೇಲರ್ ನಲ್ಲೇ ಗಮನ ಸೆಳೆದ ದೀಕ್ಷಿತ್ ಶೆಟ್ಟಿ ಅಭಿನಯದ “ಬ್ಯಾಂಕ್ of ಭಾಗ್ಯಲಕ್ಷ್ಮಿ

ರೋರಿಂಗ್ ಸ್ಟಾರ್ ಶ್ರೀಮುರಳಿ ಅವರಿಂದ ಟ್ರೇಲರ್ ಅನಾವರಣ .

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ನವೆಂಬರ್ 21 ರಂದು ತೆರೆಗೆ

ರಂಗಿ ತರಂಗ’, ‘ಅವನೇ ಶ್ರೀಮನ್ನಾರಾಯಣ’ ದಂತಹ ಯಶಸ್ವಿ ಚಿತ್ರಗಳ ನಿರ್ಮಾಪಕ ಹೆಚ್.ಕೆ ಪ್ರಕಾಶ್ ನಿರ್ಮಾಣದ, “ದಿಯಾ”, “ಬ್ಲಿಂಕ್” ಸೇರಿದಂತೆ ಯಶಸ್ವಿ ಸಿನಿಮಾಗಳ ಮೂಲಕ ಜನಪ್ರಿಯರಾಗಿರುವ ದೀಕ್ಷಿತ್ ಶೆಟ್ಟಿ ನಾಯಕರಾಗಿ ಮತ್ತು ಬೃಂದಾ ಆಚಾರ್ಯ ನಾಯಕಿಯಾಗಿ ‌ನಟಿಸಿರುವ ಹಾಗೂ ಅಭಿಷೇಕ್ ಎಂ ನಿರ್ದೇಶನದ “ಬ್ಯಾಂಕ್ ಆಫ್ ಭಾಗ್ಯಲಕ್ಷ್ಮೀ” ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ‌ರೋರಿಂಗ್ ಸ್ಟಾರ್ ಶ್ರೀಮುರಳಿ ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನೆನಪಿರಲಿ ಪ್ರೇಮ್ , ಮೇಘನಾ ಗಾಂವ್ಕರ್, ಲಹರಿ ವೇಲು ಮುಂತಾದ ಗಣ್ಯರು ಸಮಾರಂಭಕ್ಕೆ ಆಗಮಿಸಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ಸ್ನೇಹಿತರ ಜೊತೆ ಸೇರಿ “ಪಿನಾಕ” ಎಂಬ ವಿ.ಎಫ್.ಎಕ್ಸ್ ಸ್ಟುಡಿಯೋ ನಡೆಸುತ್ತಿದ್ದೇನೆ. ನಿರ್ದೇಶಕನಾಗಿ ಇದು ಮೊದಲ ಚಿತ್ರ ಎಂದು ಮಾತನಾಡಿದ ನಿರ್ದೇಶಕ ಅಭಿಷೇಕ್, ಕರೋನ ಸಮಯದಲ್ಲಿ ಕಿರುಚಿತ್ರ ಮಾಡಲು ಹೊರಟ ಕಥೆ ಇದು. ಆನಂತರ ಇದನ್ನು ಸಿನಿಮಾ ಮಾಡಿದರೆ ಚೆನ್ನಾಗಿರುತ್ತದೆ ಅನಿಸಿತು. ನಿರ್ಮಾಪಕ ಹೆಚ್ ಕೆ ಪ್ರಕಾಶ್ ಅವರು ಕಥೆ ಮೆಚ್ಚಿಕೊಂಡರು. ದೀಕ್ಷಿತ್ ಶೆಟ್ಟಿ, ಬೃಂದಾ ಆಚಾರ್ಯ ನಾಯಕ – ನಾಯಕಿ ಅಂತ ನಿಗದಿಯಾಯಿತು. ಆನಂತರ ಚಿತ್ರಕ್ಕೆ ಚಾಲನೆ ದೊರೆಯಿತು. ಈಗ ಚಿತ್ರ ಬಿಡುಗಡೆ ಹಂತಕ್ಕೆ ಬಂದು ತಲುಪಿದೆ. ಚಿತ್ರ ಅಂದುಕೊಂಡ ಹಾಗೆ ಬಂದಿರುವುದಕ್ಕೆ ಚಿತ್ರತಂಡದ ಸಹಕಾರವೇ ಪ್ರಮುಖ ಕಾರಣ. ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ಗಣ್ಯರಿಗೆ ಧನ್ಯವಾದ. ನಮ್ಮ ಚಿತ್ರ ನವೆಂಬರ್ 21ರಂದು ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು

“ರಂಗಿತರಂಗ” ಚಿತ್ರದಿಂದ ನಿರ್ಮಾಪಕನಾದೆ. ಇದು ನನ್ನ ನಿರ್ಮಾಣದ ಆರನೇ ಚಿತ್ರ. ಚಿತ್ರತಂಡದ ಸಹಕಾರದಿಂದ ಒಂದೊಳ್ಳೆ ಸಿನಿಮಾ ನಿರ್ಮಾಣವಾಗಿದೆ. ನಮ್ಮ ಎಲ್ಲಾ ಚಿತ್ರಕ್ಕೆ ತಾವುಗಳು ನೀಡಿದ ಪ್ರೋತ್ಸಾಹ ಈ ಚಿತ್ರಕ್ಕೂ ಮುಂದುವರೆಯಲಿ ಎಂದರು ನಿರ್ಮಾಪಕ ಎಚ್.ಕೆ ಪ್ರಕಾಶ್.

ನನ್ನ “ದಿಯಾ” ಹಾಗೂ “ಬ್ಲಿಂಕ್” ಸಿನಿಮಾಗಳಿಗೆ ತಾವೆಲ್ಲಾ ನೀಡಿದ ಪ್ರೋತ್ಸಾಹ ಅಪಾರ. ನನಗೆ ಬೇರೆಬೇರೆ ಜಾನರ್ ನ ಸಿನಿಮಾಗಳಲ್ಲಿ ನಟಿಸಬೇಕೆಂಬ ಆಸೆ. ಅದರಂತೆ ಹಿಂದಿನ ಚಿತ್ರಗಳ ಜಾನರ್ ಬೇರೆ. ಇದೇ ಬೇರೆ. ನಮ್ಮ ಚಿತ್ರ ಗೆದ್ದೆ ಗೆಲ್ಲುತ್ತದೆ ಎನ್ನುವ ಭರವಸೆ ಇದೆ. ಚಿತ್ರದ ಸಕ್ಸಸ್ ಮೀಟ್ ನಲ್ಲಿ ಎಲ್ಲರಿಗೂ ಧನ್ಯವಾದ ಹೇಳುತ್ತೇನೆ. ಇನ್ನೂ, ನವೆಂಬರ್ 21 ರಂದು ಬಿಡುಗಡೆಯಾಗುತ್ತಿರುವ ಈ ಸಿನಿಮಾವನ್ನು ಎಲ್ಲರೂ ಚಿತ್ರಮಂದಿರಗಳಿಗೆ ಬಂದು ನೋಡುವ ಮೂಲಕ ಚಿತ್ರವನ್ನು ಗೆಲ್ಲಿಸಬೇಕೆಂದು ನಾಯಕ ದೀಕ್ಷಿತ್ ಶೆಟ್ಟಿ ಹೇಳಿದರು‌.

ನನ್ನನ್ನು ಎಲ್ಲರೂ ನಿನಗೆ ಯಾರು ಪೈಪೋಟಿ ಅಂತ ಕೇಳುತ್ತಿದ್ದರು. ನನಗೆ ನಾನೇ ಪೈಪೋಟಿ ಅಂತ ಹೇಳುತ್ತಿದ್ದೆ. ಇಗ ಅದು ನಿಜ ಆಗಿದೆ. ನವೆಂಬರ್ 21 ರಂದು ನನ್ನ ಅಭಿನಯದ ಎರಡು ಚಿತ್ರಗಳು ಬಿಡುಗಡೆಯಾಗುತ್ತಿದೆ. ಎರಡರಲ್ಲೂ ವಿಭಿನ್ನ ಪಾತ್ರಗಳು. “ಬ್ಯಾಂಕ್ ಆಫ್ ಭಾಗ್ಯಲಕ್ಷ್ಮೀ” ಚಿತ್ರದಲ್ಲಿ ಅಭಿನಯಿಸಿದ್ದು ಬಹಳ ಸಂತೋಷವಾಗಿದೆ ಎಂದರು ನಾಯಕಿ ಬೃಂದಾ ಆಚಾರ್ಯ.

ನಾಯಕನ ಸ್ನೇಹಿತರಾಗಿ ನಟಿಸಿರುವ ಶ್ರೀವತ್ಸ, ಶ್ರೇಯಸ್ ಶರ್ಮ, ಅಶ್ವಿನ್ ರಾವ್ ಪಲ್ಲಕ್ಕಿ, ವಿನುತ್ ಹಾಗೂ ನಟಿ ಉಷಾ ಭಂಡಾರಿ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

Similar Posts

  • 108 ಗಣಪನ ದರ್ಶನ‌ ಪಡೆದ “ಮಿ.ರಾಣಿ” . ನಿರ್ದೇಶಕ ಮಧುಚಂದ್ರ ಅವರಿಂದ ನೂತನ ಪ್ರಚಾರಕ್ಕೆ ನಾಂದಿ .

    “ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ” ಚಿತ್ರದ ನಿರ್ದೇಶಕ ಮಧುಚಂದ್ರ ತಮ್ಮ ಚಿತ್ರಗಳಲ್ಲಿ ಸಮಾಜಕ್ಕೆ ಒಂದೊಳ್ಳೆ ‌ಸಂದೇಶ ನೀಡುತ್ತಾ ಬಂದಿದ್ದಾರೆ. ಪ್ರಸ್ತುತ ಮಧುಚಂದ್ರ ಅವರು “ಮಿ.ರಾಣಿ” ಎಂಬ ವಿಭಿನ್ನ ಕಾಮಿಡಿ ಜಾನರ್ ನ ಚಿತ್ರ ನಿರ್ದೇಶಿಸಿದ್ದಾರೆ . “ಲಕ್ಷ್ಮೀ ನಿವಾಸ” ಧಾರಾವಾಹಿಯಲ್ಲಿ ಜಯಂತ ಪಾತ್ರದ ಮೂಲಕ‌ ಜನಮನ ಗೆದ್ದಿರುವ ದೀಪಕ್ ಸುಬ್ರಹ್ಮಣ್ಯ ಈ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. ಪ್ರಸ್ತುತ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಈಗ ಪ್ರಚಾರಕಾರ್ಯದಲ್ಲಿ ಭಾಗಿಯಾಗಿದೆ. ಪ್ರಚಾರದ ಮೊದಲೇ ಹೆಜ್ಜೆಯಾಗಿ ನಿರ್ದೇಶಕ ಮಧುಚಂದ್ರ ವಿನೂತನ ಪ್ರಚಾರಕ್ಕೆ ನಾಂದಿ…

  • ‘ರಾಜಸ್ಥಾನ್’ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ “ತಾರಿಣಿ” ಆಯ್ಕೆ.

    _ವಿಭಿನ್ನ ಕಥೆಗಳ ಸಿನಿಮಾಗಳನ್ನು ನಿರ್ದೇಶಿಸಿ ಪ್ರಸಿದ್ದಿ ಪಡೆದಿರುವ ನಿರ್ದೇಶಕ ‘ಸಿದ್ದು ಪೂರ್ಣಚಂದ್ರ’ರವರು ಮತ್ತೊಂದು ಅಂತಹದೇ ಕಥೆ ಚಿತ್ರಕಥೆ ಬರೆದು ನಿರ್ದೇಶಿಸಿರುವ ಚಿತ್ರ “ತಾರಿಣಿ”. ಪ್ರತಿಷ್ಟಿತ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲೊಂದಾದ “ರಾಜಸ್ಥಾನ್ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್” ಗೆ ‘ತಾರಿಣಿ’ ಆಯ್ಕೆಯಾಗಿದೆ ಎಂದು ಚಿತ್ರತಂಡದಿಂದ ಸಂತಸದ ಸುದ್ದಿ ಹೊರಬಂದಿದೆ. ಜನವರಿ ತಿಂಗಳಲ್ಲಿ ರಾಜಸ್ಥಾನದ ‘ಜೈಪುರ್” ನಲ್ಲಿ ತಾರಿಣಿ ಚಿತ್ರ ಪ್ರದರ್ಶನವಾಗುತ್ತದೆ. ದೇಶದ ವಿವಿಧ ಭಾಗಗಳಿಂದ ಬರುವ ಚಿತ್ರ ಪ್ರೇಮಿಗಳು ಈ ಚಿತ್ರವನ್ನು ಕಣ್ತುಂಬಿಕೊಳ್ಳುವರು ಎಂದು ಚಿತ್ರದ ನಿರ್ದೇಶಕ “ಸಿದ್ದು ಪೂರ್ಣಚಂದ್ರ” ರವರು…

  • “X&Y” ಚಿತ್ರದ “ಆಂಬು ಆಟೋ ” ಗೆ ಫಿದಾ ಆದ ಆಟೋ ಚಾಲಕರು

    ರೀಲ್ಸ್ ಮೂಲಕ ಜನರಿಗೆ ಜಾಗೃತಿ . ಇನ್ನೇನು ಬಿಡುಗಡೆಯ ಹೊಸ್ತಿಲಲ್ಲಿರುವ ಕನ್ನಡದ ಬಹು ನಿರೀಕ್ಷಿತ “X&Y” ಚಿತ್ರತಂಡ ಇತ್ತೀಚೆಗೆ ಆಟೋರಿಕ್ಷಾ “ಆಂಬು ಆಟೋ” ಎಂಬ ವಾಹನದ ಬಗ್ಗೆ ಮಾಹಿತಿ ನೀಡಿತ್ತು. ಇದನ್ನು ಚಿತ್ರದಲ್ಲಿ ಕಲಾವಿದನಂತೆ ಸಹ ನಿರ್ದೇಶಕ ಡಿ.ಸತ್ಯಪ್ರಕಾಶ್ ಬಳಸಿಕೊಂಡಿದ್ದಾರೆ. ಈಗಾಗಲೇ ಎಲ್ಲರ ಗಮನ ಸೆಳೆದಿರುವ “ಆಂಬು ಆಟೋ”ದಲ್ಲಿ ಆಂಬುಲೆನ್ಸ್ ನಲ್ಲಿರುವoತೆ ಎಲ್ಲ ಸೌಲಭ್ಯಗಳಿದೆ. ಆಟೋದಲ್ಲೂ ಇಷ್ಟು ಸೌಲಭ್ಯಗಳನ್ನು ಅಳವಡಿಸಬಹುದು ಎಂಬುದನ್ನು ” ರಾಮಾ ರಾಮಾ ರೆ” ಖ್ಯಾತಿಯ ನಿರ್ದೇಶಕ ಸತ್ಯಪ್ರಕಾಶ್ ತೋರಿಸಿಕೊಟ್ಟಿದ್ದಾರೆ.“ಆಂಬು ಆಟೋ” ಗೆ ಆಟೋ ಚಾಲಕರು…

  • ಮೈಸೂರು ಸುತ್ತಮುತ್ತ “ಭಗೀರಥ” ಚಿತ್ರಕ್ಕೆ ಬಿರುಸಿನ ಚಿತ್ರೀಕರಣ .

    ಸಾಯಿ ರಮೇಶ್ ಪ್ರೊಡಕ್ಷನ್ ಲಾಂಛನದಲ್ಲಿ ಕೆ.ರಮೇಶ್ ಹಾಗೂ ಬಿ.ಭೈರಪ್ಪ ಮೈಸೂರು ನಿರ್ಮಿಸುತ್ತಿರುವ ಹಾಗೂ ರಾಮ್ ಜನಾರ್ದನ್ ನಿರ್ದೇಶನದ “ಭಗೀರಥ” ಚಿತ್ರಕ್ಕೆ ಮೈಸೂರು, ಮಡಿಕೇರಿ ಸುತ್ತಮುತ್ತ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಈವರೆಗೂ ಎರಡು ಹಾಡುಗಳ, ನಾಲ್ಕು ಸಾಹಸ ಸನ್ನಿವೇಶಗಳ ಹಾಗೂ ಮಾತಿನ ಭಾಗದ ಚಿತ್ರೀಕರಣ ನಡೆದಿದೆ. ಥ್ರಿಲ್ಲರ್ ಮಂಜು ಅವರ ಸಾಹಸ ನಿರ್ದೇಶನದಲ್ಲಿ ನಾಲ್ಕೂ ಸಾಹಸ ಸನ್ನಿವೇಶಗಳು ಮೂಡಿಬಂದಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ತಾರಾಬಳಗದಲ್ಲಿ ಜಯಪ್ರಕಾಶ್, ಚಂದನ ರಾಘವೇಂದ್ರ, ಸುಧಾ ಬೆಳವಾಡಿ, ಶಿವರಾಜ್ ಕೆ.ಆರ್ ಪೇಟೆ,…

  • ಸದ್ಯದಲ್ಲೇ ನಿಮ್ಮ ಮುಂದೆ “ವಿಕಾಸ ಪರ್ವ” .

    ಕನ್ನಡ ಚಿತ್ರರಂಗದಲ್ಲೀಗ ಉತ್ತಮ ಕಂಟೆಂಟ್ ಚಿತ್ರಗಳು ಯಶಸ್ವಿಯಾಗುತ್ತಿದೆ‌. ಅಂತಹ ಉತ್ತಮ ಕಂಟೆಂಟ್ ನೊಂದಿಗೆ ಬರುತ್ತಿರುವ “ವಿಕಾಸ ಪರ್ವ” ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಅರ್ಹತಾಪತ್ರವನ್ನು ನೀಡಿದೆ. ಚಿತ್ರ ಸದ್ಯದಲ್ಲೇ ರಾಜ್ಯಾದ್ಯಂತ ತೆರೆ ಕಾಣಲಿದೆ. “ವಿಕಾಸ ಪರ್ವ” ಸಾಮಾಜಿಕ ಕಳಕಳಿಯುಳ್ಳ ಚಿತ್ರ. ಉತ್ತಮ ಸಂದೇಶವುಳ್ಳ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ಕಿರುತೆರೆಯಲ್ಲಿ ತಮ್ಮದೇ ಆದ ಚಾಪು ಮೂಡಿಸಿರುವ ರೋಹಿತ್ ನಾಗೇಶ್ ಅಭಿನಯಿಸಿದ್ದಾರೆ. ಸ್ವಾತಿ, ನಿಶಿತಾ ಗೌಡ, ಅಶ್ವಿನ್ ಹಾಸನ್, ಬಾಲ ರಾಜವಾಡಿ, ಕುರಿ ರಂಗ, ಸಮೀರ್…

  • ಅಜಯ್ ರಾಜ್ ಅಭಿನಯದ “ಮನ್ ರೇ ” ಚಿತ್ರ ನವೆಂಬರ್ ನಲ್ಲಿ ಆರಂಭ .

    ಕಳೆದ ತಿಂಗಳು ನಡೆದ ‘ಸೇನಾಪುರ’ ಚಿತ್ರದ ಟ್ರೇಲರ್ ಬಿಡುಗಡೆ ಸಮಯದಲ್ಲೇ ಸದ್ಯದಲ್ಲೇ ಇನ್ನೊಂದು ಹೊಸ ಚಿತ್ರದ ಘೋಷಣೆ ಮಾಡುವುದಾಗಿ ನಿರ್ದೇಶಕ ಗುರು ಸಾವನ್‍ ಹೇಳಿಕೊಂಡಿದ್ದರು. ಅದರಂತೆ ಒಂದು ತಿಂಗಳ ಒಳಗೆ ಅವರು ಇನ್ನೊಂದು ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ಅದೇ ‘ಮನ್ ರೇ’. ಚಿತ್ರದ ಘೋಷಣೆ ಅಧಿಕೃತವಾಗಿ ಸೋಮವಾರದಂದು ಆಗಿದ್ದು, ನವೆಂಬರ್‌ನಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ. ಭೂಮಿಕಾ ಕ್ರಿಯೇಷನ್ಸ್ ನಡಿ ತಿಲಕ್‍ ರಾಜು ಮತ್ತು ರಾಜಣ್ಣ ನಿರ್ಮಿಸುತ್ತಿರುವ ‘ಮನ್‍ರೇ’ ಚಿತ್ರದಲ್ಲಿ ಅಜಯ್‍ ರಾಜ್‍ ನಾಯಕನಾಗಿ ಕಾಣಿಸಿಕೊಂಡರೆ, ಗಾಯಕಿ ಐಶ್ವರ್ಯ ರಂಗರಾಜನ್‍…

0 0 votes
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments