ಅಕ್ಟೋಬರ್ 2 ರಂದು ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಬಹು ನಿರೀಕ್ಷಿತ “ಪಿನಾಕ” ಚಿತ್ರ ತೆರೆಗೆ. .

ಪೀಪಲ್ ಮೀಡಿಯಾ ಫ್ಯಾಕ್ಟರಿ ಅದ್ದೂರಿ ನಿರ್ಮಾಣದ ಈ ಚಿತ್ರಕ್ಕೆ ಧನಂಜಯ್ ನಿರ್ದೇಶನ

ಪೀಪಲ್ ಮೀಡಿಯಾ ಫ್ಯಾಕ್ಟರಿ ಲಾಂಛನದಲ್ಲಿ ವಿಶ್ವಪ್ರಸಾದ್ ಅವರು ಅದ್ದೂರಿಯಾಗಿ ನಿರ್ಮಿಸುತ್ತಿರುವ, ಕನ್ನಡ ಚಿತ್ರರಂಗದ ನುರಿತ ಹಾಗೂ ಹೆಸರಾಂತ ನೃತ್ಯ ನಿರ್ದೇಶಕ ಧನಂಜಯ್ ಚೊಚ್ಚಲ ನಿರ್ದೇಶನದ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಗೋಲ್ಟನ್ ಸ್ಟಾರ್ ಗಣೇಶ್‍ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ ‘ಪಿನಾಕ’ ಚಿತ್ರ ಇದೇ ಅಕ್ಟೋಬರ್ 2 ರಂದು ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಗೋಲ್ಡನ್ ಸ್ಟಾರ್ ಗಣೇಶ್ ಅವರ ಹುಟ್ಟುಹಬ್ಬದ ದಿನ ವಿಶೇಷ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ “ಪಿನಾಕ” ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಮಾಡಿ, ಗಣೇಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.

ಪಿನಾಕ’ ಎಂದರೆ ಒಬ್ಬ ರಕ್ಷಕ ಎನ್ನುವ ಅವರು, ‘ಇದೊಂದು ಕಾವಲುಗಾರ ಪರಂಪರೆಯ ಕುರಿತಾದ ಚಿತ್ರ. ಎರಡು ಕಾಲಘಟ್ಟದಲ್ಲಿ ನಡೆಯುವ ಕಥೆ. ಗಣೇಶ್ ಅವರು ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಗಣೇಶ್ ಅವರ ವೃತ್ತಿಜೀವನದಲ್ಲೇ ಇದೊಂದು ಅದ್ಭುತ ಚಿತ್ರವಾಗಲಿದೆ ಹಾಗೂ ಬಿಗ್ ಬಜೆಟ್ ನ ಚಿತ್ರವೂ ಆಗಿದೆ. ಈ ಚಿತ್ರದ ಗಣೇಶ್ ಅವರ ಹೊಸ ಲುಕ್ ಅಭಿಮಾನಿಗಳ ಮನ ಗೆಲ್ಲುತ್ತಿದೆ. ಅದ್ದೂರಿಯಾಗಿ ಮೂಡಿಬರುತ್ತಿರುವ ಈ ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಇದೊಂದು ಪಕ್ಕಾ ಫ್ಯಾಮಿಲಿ ಎಂಟರ್ ಟೈನರ್ ಚಿತ್ರವಾಗಿದೆ. ಅಪಾರವೆಚ್ಚದಲ್ಲಿ ಹಾಕಲಾಗಿರುವ ಅನೇಕ ಸೆಟ್ ಗಳು “ಪಿನಾಕ” ಚಿತ್ರದ ವಿಶೇಷಗಳಲ್ಲಿ ಒಂದಾಗಿದೆ. ಫಸ್ಟ್ ಲುಕ್ ಪೋಸ್ಟರ್, ಹುಟ್ಟುಹಬ್ಬದಂದು ಬಿಡುಗಡೆಯಾಗಿರುವ ಪೋಸ್ಟರ್ ಚಿತ್ರ ನೋಡುವ ಕಾತುರವನ್ನು ಹೆಚ್ಚಿಸಿದೆ. ಯಾವುದೇ ಕೊರತೆ ಬಾರದ ಹಾಗೆ ಪೀಪಲ್ ಮೀಡಿಯಾ ಫ್ಯಾಕ್ಟರಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ಗಣೇಶ್ ಅವರು ನೀಡಿರುವ ಸಹಕಾರಕ್ಕೆ ಚಿತ್ರತಂಡ ಧನ್ಯವಾದ ತಿಳಿಸಿದೆ. ನುರಿತ ತಂತ್ರಜ್ಞರ ಕಾರ್ಯವೈಖರಿ ಹಾಗೂ ಅನುಭವಿ ಕಲಾವಿದರ ತಾರಾಬಳಗ “ಪಿನಾಕ” ಚಿತ್ರಕ್ಕಿದೆ.

Similar Posts

0 0 votes
Article Rating
Subscribe
Notify of
guest
0 Comments
Oldest
Newest Most Voted