“ಲವ್ ಥಿಯರಿ” ಮೂಲಕ ನಿರ್ದೇಶಕ ಮನೋಜ್ ಪಿ ನಡಲುಮನೆ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ .

ಜಯರಾಮ್ ದೇವಸಮುದ್ರ ನಿರ್ಮಾಣದ ಈ ಚಿತ್ರಕ್ಕೆ ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭ

“ಆನ”, ” ಮೇರಿ” ಹಾಗೂ “ನೀ ನಂಗೆ ಅಲ್ಲವಾ” ಚಿತ್ರಗಳ ನಿರ್ದೇಶಕ ಮನೋಜ್ ಪಿ ನಡಲುಮನೆ ಈಗ ನಾಯಕನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಸುರಮ್ ಮೂವೀಸ್ ಮೂಲಕ ಸದಭಿರುಚಿಯ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬಂದಿರುವ, ಪ್ರಸ್ತುತ “ನೀ ನಂಗೆ ಅಲ್ಲವಾ”, ” ಎಲ್ ಎಸ್ ಡಿ” ಹಾಗೂ ಶ್ರೀಮುರಳಿ ಅಭಿನಯದ “ಉಗ್ರಾಯುಧಮ್” ಚಿತ್ರಗಳ ನಿರ್ಮಾಪಕರೂ ಆಗಿರುವ ಹಾಗೂ ವಿಭಿನ್ನ, ವಿನೂತನ ಪ್ರಯತ್ನಗಳಿಗೆ ಸದಾ ಬೆಂಬಲಿಸುತ್ತಾ ಬಂದಿರುವ ಜಯರಾಮ್ ದೇವಸಮುದ್ರ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ರೊಮ್ಯಾಂಟಿಕ್ ಕಾಮಿಡಿ ಜಾನರ್ ನ ಈ ಚಿತ್ರಕ್ಕೆ “ಲವ್ ಥಿಯರಿ” ಎಂದು ಹೆಸರಿಡಲಾಗಿದೆ. ನಾಯಕನಾಗಿ ನಟಿಸುತ್ತಿರುವ ಮನೋಜ್ ಪಿ ನಡುಲಮನೆ ಅವರೆ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದ್ದು, ಪೋಸ್ಟರ್ ತುಂಬಾ ಆಕರ್ಷಕವಾಗಿದೆ.

ಈವರೆಗೂ ಮೂರು ಚಿತ್ರಗಳನ್ನು ನಿರ್ದೇಶಿಸಿರುವ ನನಗೆ ನಟನಾಗಬೇಕೆಂಬ ಹಂಬಲ ಮೊದಲಿನಿಂದಲೂ ಇತ್ತು. ಆ ನನ್ನ ಆಸೆಯನ್ನು ನಿರ್ಮಾಪಕ ಜಯರಾಮ್ ದೇವಸಮುದ್ರ ಅವರು ಪೂರೈಸುತ್ತಿದ್ದಾರೆ‌. ತಮ್ಮ ಸಂಸ್ಥೆಯ ನಿರ್ಮಾಣದ ನೂತನ ಚಿತ್ರಕ್ಕೆ ನನ್ನನ್ನು ನಾಯಕನಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಅವರಿಗೆ ಧನ್ಯವಾದ. “ಲವ್ ಥಿಯರಿ”, ಶೀರ್ಷಿಕೆ ಕೇಳಿದ ತಕ್ಷಣ ಇದೊಂದು ಪ್ರೇಮ ಕಥೆ ಅನಿಸುವುದು ಸಹಜ.‌ ಇದು ಪ್ರೇಮ ಕಥೆ ಮಾತ್ರ ಅಲ್ಲ. ರೊಮ್ಯಾಂಟಿಕ್ ಕಾಮಿಡಿ ಜಾನರ್ ನ ಚಿತ್ರ. ಅಷ್ಟೇ ಅಲ್ಲದೆ ಮಾನವ ಸಂಬಂಧಗಳನ್ನು ಎತ್ತಿ ಹಿಡಿಯುವ ಚಿತ್ರವೂ ಹೌದು. ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನವನ್ನೂ ಮಾಡುತ್ತಿದ್ದೇನೆ. ಉದಯ್ ಲೀಲಾ‌ ಛಾಯಾಗ್ರಹಣ, ಸೂರಜ್ ಜೋಯಿಸ್ ಸಂಗೀತ ನಿರ್ದೇಶನ ಹಾಗೂ ರಾಷ್ಟ್ರಪ್ರಶಸ್ತಿ ವಿಜೇತ ಸಂಕಲನಕಾರ ನಾಗೇಂದ್ರ ಉಜ್ಜನಿ ಅವರ ಸಂಕಲನ ಈ ಚಿತ್ರಕ್ಕಿದೆ. ಉಳಿದ ಮಾಹಿತಿಯನ್ನು ಸದ್ಯದಲ್ಲೇ ನೀಡುತ್ತೇವೆ. ಮುಂದಿನ ತಿಂಗಳಿನಿಂದ ಚಿತ್ರೀಕರಣ ಆರಂಭವಾಗಲಿದೆ. ಬೆಂಗಳೂರು ಹಾಗೂ ಕೊಡಗಿನಲ್ಲಿ ಚಿತ್ರೀಕರಣ ನಡೆಯಲಿದೆ. ನಾಯಕನಾಗಿ ಮೊದಲ ಬಾರಿಗೆ ಪಾದಾರ್ಪಣೆ ಮಾಡುತ್ತಿದ್ದೇನೆ. ನನ್ನ ಈ ಪ್ರಯತ್ನಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎನ್ನುತ್ತಾರೆ ನಾಯಕ‌ ಹಾಗೂ ನಿರ್ದೇಶಕ ಮನೋಜ್ ಪಿ ನಡಲುಮನೆ.

Similar Posts

0 0 votes
Article Rating
Subscribe
Notify of
guest
0 Comments
Oldest
Newest Most Voted