ಪ್ರಮೋದ್ ಶೆಟ್ಟಿ ಅಭಿನಯದ “ಜಲಂಧರ” ಚಿತ್ರಕ್ಕೆ ಮಾತಿನ ಮರು ಜೋಡಣೆ(ಡಬ್ಬಿಂಗ್) ಮುಕ್ತಾಯ .

“ಜಲಂಧರ” ಚಿತ್ರತಂಡ ಇತ್ತೀಚೆಗೆ ಪ್ರಮೋದ್ ಶೆಟ್ಟಿ ಅವರ ಹುಟ್ಟು ಹಬ್ಬದ ಉಡುಗೊರೆಯಾಗಿ ಚಿತ್ರದ ಟೈಟಲ್ ಪೋಸ್ಟರ್ ಬಿಡುಗಡೆ ಮಾಡಿ ಶುಭ ಕೋರಿತ್ತು. ಚಿತ್ರದ ಪೋಸ್ಟರ್ ಸೋಶಿಯಲ್ ಮೀಡಿಯಾದಲ್ಲಿ  ಜನಪ್ರಿಯತೆ ಗಳಿಸಿದ ಬೆನ್ನಲ್ಲೆ  “ಜಲಂಧರ” ಚಿತ್ರತಂಡ, ಮಾತಿನ ಮರು ಜೋಡಣೆ ( ಡಬ್ಬಿಂಗ್ ) ಅನ್ನು  ಯಶಸ್ವಿಯಾಗಿ  ಪೂರ್ಣಗೊಳಿಸಿದ ಖುಷಿಯಲ್ಲಿದ್ದಾರೆ.

ಸ್ಟೇಪ್ ಅಪ್ ಲೋಕೇಶ್ ನಟಿಸಿ, ಕತೆ ಬರೆದು ಸ್ಟೇಪ್ ಅಪ್ ಪಿಚ್ಚರ್ ಬ್ಯಾನರ್ ನಲ್ಲಿ ನಿರ್ಮಾಣ ಮಾಡುತ್ತಿರುವ “ಜಲಂಧರ” ಚಿತ್ರಕ್ಕೆ ಮದನ್ ಎಸ್, ಚಂದ್ರ ಮೋಹನ್ ಸಿ ಎಲ್, ರಮೇಶ್ ರಾಮಚಂದರ್ ಹಾಗೂ ಪದ್ಮನಾಭನ್ ಹಣ ಹಾಕಿ ಕೈ ಜೋಡಿಸಿದ್ದಾರೆ. ಹಲವು ಚಿತ್ರಗಳಲ್ಲಿ ಸಹ ನಿರ್ದೇಶಕರಾಗಿ ಕೆಲಸ ಮಾಡಿ ಮೊದಲ ಬಾರಿಗೆ ವಿಷ್ಣು ವಿ ಪ್ರಸನ್ನ ನಿರ್ದೇಶನ ಮಾಡಿದ್ದಾರೆ.

ರಶ್ಮಿತ್ ಕುಮಾರ್  ನಿರ್ಮಾಣ ನಿರ್ವಹಣೆಯ ಕಾರ್ಯವನ್ನು  ವಹಿಸಿಕೊಂಡಿದ್ದು ಇನ್ನು ಚಿತ್ರಕ್ಕೆ ನುರಿತ ಸಂಕಲನಕಾರ ವೆಂಕಿ UDV ಕತ್ತರಿ ಹಾಕಿದ್ದಾರೆ. ಕೇರಳ ಮೂಲದ ಛಾಯಾಗ್ರಹಕರಾದ ವಿದ್ಯಾಶಂಕರ್ ಮತ್ತು ಸರಿನ್ ರವೀಂದ್ರನ್ ಚಿತ್ರದಲ್ಲಿ ಕೆಲಸ ಮಾಡಿದ್ದಾರೆ.
ಯುವ ಸಂಗೀತ ನಿರ್ದೇಶಕ ಜತಿನ್ ದರ್ಶನ್ ಸಂಗೀತ ನೀಡಿರುವ “ಜಲಂಧರ” ಚಿತ್ರದಲ್ಲಿ ಸಹ ನಿರ್ದೇಶಕನಾಗಿ ಅಕ್ಷಯ್ ಕುಮಾರ್ ಎಮ್, ಕಲಾ ನಿರ್ದೇಶನ ರಾಜು ವೈವಿಧ್ಯ, ಸಾಹಸ  ನಿರ್ದೇಶಕರಾದ ಕೌರವ ವೆಂಕಟೇಶ್, ಪತ್ರಿಕಾ ಸಂಪರ್ಕ ಸುದೀಂದ್ರ ವೆಂಕಟೇಶ್ ರವರು ಕೈ ಜೋಡಿಸಿದ್ದಾರೆ.

ಚಿತ್ರದ ಮುಖ್ಯ ಪಾತ್ರದಲ್ಲಿ ಪ್ರಮೋದ್ ಶೆಟ್ಟಿ, ಟಗರು ಖ್ಯಾತಿಯ ರುಷಿಕಾ ರಾಜ್, ರಾಘು ರಾಮನಕೊಪ್ಪ, ಅರೋಹಿತಾ ಗೌಡ, ಬಲ ರಾಜ್ವಡಿ, ಆದಿ ಕೇಶವರೆಡ್ಡಿ, ಭೀಷ್ಮ ರಾಮಯ್ಯ, ಪ್ರತಾಪ ನೆನಪು, ನವೀನ್ ಸಾಗರ್, ವಿಶಾಲ್ ಪಾಟೀಲ್, ಪ್ರಸಾದ್ ಸೂರನಹಳ್ಳಿ, ಅಂಬು, ವಿಜಯ್ ರಾಜ್ ಮತ್ತು ನಂದಿನಿ ರಾಜ್ ಅಭಿನಯಿಸಿದ್ದಾರೆ.

“ಜಲಂಧರ” ಚಿತ್ರ ತಂಡವೂ ತಮ್ಮ ಚಿತ್ರದ ಪ್ರತಿ ಸಣ್ಣ ತುಣುಕುಗಳನ್ನು ವಿಭಿನ್ನವಾಗಿ ಪ್ರಚಾರ ಮಾಡುತ್ತಾ ಸ್ಯಾಂಡಲ್ ವುಡ್ ನಲ್ಲಿ ಹೊಸ ಭರವಸೆ ಹುಟ್ಟಿಸುತ್ತಾ ಚಿತ್ರದ ಅಂತಿಮ ಘಟ್ಟದತ್ತ ಸಾಗಿದೆ.

Similar Posts

0 0 votes
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments