ಅಭಿಮಾನಿಗಳಿಂದ “ಘೋಸ್ಟ್” ಚಿತ್ರಕ್ಕೆ ಹಾಡಿನ ಉಡುಗೊರೆ. .
ಪ್ರತಿಷ್ಠಿತ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಂದೇಶ್ ನಾಗರಾಜ್ ಅವರು ಅರ್ಪಿಸುವ, ಸಂದೇಶ್ ಎನ್ ನಿರ್ಮಾಣದ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಘೋಸ್ಟ್” ಚಿತ್ರ ಇದೇ ಅಕ್ಟೋಬರ್ 19 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ.
ಈ ಚಿತ್ರದ ಮತ್ತೊಂದು ವಿಶೇಷವೆಂದರೆ ಅಖಿಲ ಕರ್ನಾಟಕ ಡಾ||ಶಿವರಾಜಕುಮಾರ್ ಅಭಿಮಾನಿಗಳ ಸಂಘದವರು ಹಾಡೊಂದನ್ನು ಸಿದ್ದಪಡಿಸಿ “ಘೋಸ್ಟ್” ಚಿತ್ರಕ್ಕೆ ಉಡುಗೊರೆಯಾಗಿ ನೀಡಿದ್ದಾರೆ. ಈ ರೀತಿ ಅಭಿಮಾನಿಗಳು ಚಿತ್ರವೊಂದಕ್ಕೆ ಹಾಡಿನ ಉಡುಗೊರೆ ನೀಡಿರುವುದು ಇದೇ ಮೊದಲು. ಅಭಿಮಾನಿಗಳು ಅಭಿಮಾನದಿಂದ ನೀಡಿರುವ ಈ ಹಾಡನ್ನು ರೋಲಿಂಗ್ ಟೈಟಲ್ಸ್ ನಲ್ಲಿ ಬಳಸಿಕೊಳ್ಳುವುದಾಗಿ ಚಿತ್ರತಂಡ ತಿಳಿಸಿದೆ. ಅಕ್ಟೋಬರ್ 11 ರ ಮಧ್ಯಾಹ್ನ 1ಗಂಟೆಗೆ ಈ ಹಾಡು ಹೊಸಪೇಟೆಯ “ಮೀರ್ ಅಲ್ಲಂ” ಥಿಯೇಟರ್ ನಲ್ಲಿ ಬಿಡುಗಡೆಯಾಗಲಿದೆ.