ರಾಷ್ಟ್ರ ಪ್ರಶಸ್ತಿ ವಿಜೇತ ಅನಿರುದ್ಧ್ ಜತಕರ್ ಅವರಿಗೆ ಅಭಿಮಾನಿಗಳಿಂದ ಆತ್ಮೀಯ ಸನ್ಮಾನ .

ಹಿರಿತೆರೆ ಹಾಗೂ ಕಿರುತೆರೆತಲ್ಲಿ ತಮ್ಮದೇ ಆದ ಚಾಪು ಮೂಡಿಸಿರುವ ನಟ ಅನಿರುದ್ಧ್ ಜತಕರ್.

“ಬಾಳೇ ಬಂಗಾರ” ಸಾಕ್ಷ್ಯ ಚಿತ್ರದ ನಿರ್ದೇಶನಕ್ಕಾಗಿ ಅನಿರುದ್ಧ್ ಅವರಿಗೆ ರಾಷ್ಟಪ್ರಶಸ್ತಿ ಮನ್ನಣೆ ದೊರೆತಿದೆ. ಈ ಸಂಭ್ರಮವನ್ನು ಅನಿರುದ್ಧ್ ಅವರ ಅಭಿಮಾನಿಗಳು ಸಂತೋಷದಿಂದ ಸಂಭ್ರಮಿಸಿದ್ದಾರೆ.

ಇತ್ತೀಚೆಗೆ ನಗರದ ಖಾಸಗಿ ಹೋಟೆಲ್ ನಲ್ಲಿ ಅನಿರುದ್ಧ್ ಜತಕರ ಅಭಿಮಾನಿ ಬಳಗದ ನಿಶಾದ್ (ಹೈದರಾಬಾದ್ ), ಗಾಯತ್ರಿ( ತಮಿಳುನಾಡು), ಸೋನಿ(ಸಿಂಗಾಪುರ), ಪುಷ್ಪ(ಬೆಂಗಳೂರು) ಸೇರಿದಂತೆ ಅನೇಕ ಅಭಿಮಾನಿಗಳು ಅನಿರುದ್ದ್ ಅವರಿಗೆ ಆತ್ಮೀಯ ಅಭಿನಂದನಾ ಸಮಾರಂಭವನ್ನು ಆಯೋಜಿಸಿ,‌ ನ್ಯಾಚುರಲ್ ಸ್ಟಾರ್ ಎಂಬ ಬಿರುದು ನೀಡಿದ್ದಾರೆ. ಹಿರಿಯ ನಟ ಬಿ.ಎಂ.ವೆಂಕಟೇಶ್ ಹಾಗೂ ನಿರ್ದೇಶಕ ಎಂ.ಆನಂದರಾಜ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಅನಿರುದ್ಧ್ ಜತಕರ್ ಕುಟುಂಬದ ಸದಸ್ಯರು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಆತ್ಮೀಯ ಸನ್ಮಾನ ಸ್ವೀಕರಿಸಿ ಮಾತನಾಡಿದ ಅನಿರುದ್ಧ್, ಅಭಿಮಾನಿಗಳ ಈ ಪ್ರೀತಿಗೆ ಮನತುಂಬಿ ಬಂದಿದೆ. ಅವರಿಗೆ ನನ್ನ ಧನ್ಯವಾದ ಎಂದರು.

Similar Posts

0 0 votes
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments