ಅಯೋಧ್ಯೆಯಲ್ಲಿ ಶ್ರೀರಾಮ ಪ್ರತಿಷ್ಟಾಪನೆ ದಿನದಂದೇ ಅಂಜನಾದ್ರಿ ಬೆಟ್ಟದಲ್ಲಿ “ಅಯೋಧ್ಯಾ ರಾಮ” ಚಿತ್ರಕ್ಕೆ ಚಾಲನೆ .
ಜನವರಿ 22 ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಟಾಪನೆಯಾದ ಪರ್ವದಿನ. ಅದೇ ಸುಮೂಹರ್ತದಲ್ಲಿ ಆಂಜನೇಯನ ಜನ್ಮಭೂಮಿಯಾದ ಅಂಜನಾದ್ರಿಯಲ್ಲಿ “ಅಯೋಧ್ಯಾ ರಾಮ” ಚಿತ್ರದ ಮುಹೂರ್ತ ಸಮಾರಂಭ ನೆರವೇರಿತು. ಶಾಸಕ ಗಾಲಿ ಜನಾರ್ದನ ರೆಡ್ಡಿ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರುವುದರ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು. ಈ ಹಿಂದೆ “ಶ್ರೀಜಗನ್ನಾಥ ದಾಸರು”, ” ಶ್ರೀ ಪ್ರಸನ್ನವೆಂಕಟದಾಸರು” ಸೇರಿದಂತೆ ಅನೇಕ ದಾಸವರೇಣ್ಯರ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸುವ ಮೂಲಕ ಜನಪ್ರಿಯರಾಗಿರುವ ಡಾ|| ಮಧುಸೂದನ್ ಹವಾಲ್ದಾರ್ ತಮ್ಮ ಮಾತಾಂಬುಜ ಮೂವೀಸ್ ಲಾಂಛನದಲ್ಲಿ ಈ ಚಿತ್ರವನ್ನು ನಿರ್ಮಿಸುತ್ತಿರುವುದಲ್ಲದೆ…