ಮಕರ ಸಂಕ್ರಾಂತಿ ಶುಭದಿನದಂದು ಬಿಡುಗಡೆಯಾಯಿತು ಪ್ರಜ್ವಲ್ ದೇವರಾಜ್ ಅಭಿನಯದ “ಮಾಫಿಯಾ” ಚಿತ್ರದ ಹೊಸ ಪೋಸ್ಟರ್. .

ಮಕರ ಸಂಕ್ರಾಂತಿ ಶುಭದಿನದಂದು ಬಿಡುಗಡೆಯಾಯಿತು ಪ್ರಜ್ವಲ್ ದೇವರಾಜ್ ಅಭಿನಯದ “ಮಾಫಿಯಾ” ಚಿತ್ರದ ಹೊಸ ಪೋಸ್ಟರ್. .

ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸಿರುವ, ಲೋಹಿತ್ ಹೆಚ್ ನಿರ್ದೇಶಿಸಿರುವ ಹಾಗೂ ಪ್ರಜ್ವಲ್ ದೇವರಾಜ್ & ಅದಿತಿ ಪ್ರಭುದೇವ ನಾಯಕ, ನಾಯಕಿಯಾಗಿ ನಟಿಸಿರುವ “ಮಾಫಿಯಾ” ಚಿತ್ರತಂಡದಿಂದ ಮಕರ ಸಂಕ್ರಾಂತಿ ಹಬ್ಬಕ್ಕೆ ಹೊಸ ಪೋಸ್ಟರ್ ಬಿಡುಗಡೆಯಾಗಿದೆ. ಪ್ರಜ್ವಲ್ ಅವರು ಹೊಸ ಲುಕ್ ನಲ್ಲಿರುವ ಈ ಪೋಸ್ಟರ್ ರಿಲೀಸ್ ಮಾಡುವ ಮೂಲಕ “ಮಾಫಿಯಾ” ಚಿತ್ರತಂಡ ರಾಜ್ಯದ ಜನತೆಗೆ ಸಂಕ್ರಾಂತಿ ಶುಭಾಶಯ ಹೇಳಿದೆ.ಬಹು ನಿರೀಕ್ಷಿತ ಈ ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ.

ರಾಯಲ್ ಸ್ಟಾರ್ ವಸಿಷ್ಠ ಸಿಂಹ ಅಭಿನಯದ ಮುಂದಿನ ಚಿತ್ರ “ವಿಐಪಿ” .

ರಾಯಲ್ ಸ್ಟಾರ್ ವಸಿಷ್ಠ ಸಿಂಹ ಅಭಿನಯದ ಮುಂದಿನ ಚಿತ್ರ “ವಿಐಪಿ” .

ತಮ್ಮ ಅಮೋಘ ಅಭಿನಯ ಹಾಗೂ ಕಂಚಿನ ಕಂಠದ ಮೂಲಕ ಕನ್ನಡಿಗರ ಮನಗೆದ್ದಿರುವ ನಟ ವಸಿಷ್ಠ ಸಿಂಹ ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರಕ್ಕೆ ” ವಿಐಪಿ” ಎಂದು ಹೆಸರಿಡಲಾಗಿದೆ. ಮಕರ ಸಂಕ್ರಾಂತಿಯ ಪರ್ವಕಾಲದಲ್ಲಿ ಈ ನೂತನ ಚಿತ್ರದ ಶೀರ್ಷಿಕೆ ಅನಾವರಣವಾಗಿದೆ. ಕಲಾ ಸೃಷ್ಟಿ ಪ್ರೊಡಕ್ಷನ್ಸ್ ನಿರ್ಮಾಣದ, ಬ್ರಹ್ಮ ನಿರ್ದೇಶನದ ಈ ಚಿತ್ರ ವಿಭಿನ್ನ ಕಥಾಹಂದರ ಹೊಂದಿದೆ. ಮತ್ತೊಂದು ವಿಶೇಷವೆಂದರೆ “ವಿಐಪಿ” ಅಭಿಮಾನಿಗಳು ವಸಿಷ್ಠ ಸಿಂಹ ಅವರಿಗೆ ರಾಯಲ್ ಸ್ಟಾರ್ ಎಂಬ ಬಿರುದು ನೀಡಿದ್ದಾರೆ. ವಸಿಷ್ಠ ಸಿಂಹ ಈ ಚಿತ್ರದಿಂದ…

ಸಂಕ್ರಾಂತಿ ಹಬ್ಬಕ್ಕೆ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ, ದಿನಕರ್ ತೂಗುದೀಪ ನಿರ್ದೇಶನದ ನೂತನ ಚಿತ್ರದ ಪೋಸ್ಟರ್ ಬಿಡುಗಡೆ .

ಸಂಕ್ರಾಂತಿ ಹಬ್ಬಕ್ಕೆ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ, ದಿನಕರ್ ತೂಗುದೀಪ ನಿರ್ದೇಶನದ ನೂತನ ಚಿತ್ರದ ಪೋಸ್ಟರ್ ಬಿಡುಗಡೆ .

ದಿನಕರ್ ತೂಗುದೀಪ ಅವರ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಲಿರುವ ನೂತನ ಚಿತ್ರ ಹೊಸವರ್ಷಕ್ಕೆ ಘೋಷಣೆಯಾಗಿತ್ತು. ಸದ್ಯ ಪ್ರೀ ಪ್ರೊಡಕ್ಷನ್ ಕೆಲಸ ಬಿರುಸಿನಿಂದ ಸಾಗಿದೆ. ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿಗೆ ಈ ನೂತನ ಚಿತ್ರದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ರಾಜ್ಯದ ಜನತೆಗೆ ಸಂಕ್ರಾಂತಿ ಶುಭಾಶಯ ತಿಳಿಸಿದೆ‌. ಬಿಂದ್ಯಾ ಮೂವೀಸ್ ಲಾಂಛನದಲ್ಲಿ ಆರ್ ಕೇಶವ್ ಹಾಗೂ ಬಿ.ಎಸ್ ಸುಧೀಂದ್ರ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಪ್ರಿಯದರ್ಶಿನಿ ರಾಮರೆಡ್ಡಿ ಕಥೆ ಬರೆದಿದ್ದಾರೆ. ಮಹಾ ಶಿವರಾತ್ರಿ…

ಆರ್ ಕೆ ಚಂದನ್ – ರಾಗಿಣಿ ದ್ವಿವೇದಿ ಅಭಿನಯದ “ಬಿಂಗೊ” ಚಿತ್ರದ ಚಿತ್ರೀಕರಣ ಮುಕ್ತಾಯ. .

ಆರ್ ಕೆ ಚಂದನ್ – ರಾಗಿಣಿ ದ್ವಿವೇದಿ ಅಭಿನಯದ “ಬಿಂಗೊ” ಚಿತ್ರದ ಚಿತ್ರೀಕರಣ ಮುಕ್ತಾಯ. .

ಈ ಹಿಂದೆ “ಶಂಭೋ ಶಿವ ಶಂಕರ” ಚಿತ್ರ ನಿರ್ದೇಶಿಸಿದ್ದ ಶಂಕರ್ ಕೋನಮಾನಹಳ್ಳಿ ನಿರ್ದೇಶನದ, ಆರ್ ಕೆ ಚಂದನ್ ಹಾಗೂ ರಾಗಿಣಿ ದ್ವಿವೇದಿ ನಾಯಕ – ನಾಯಕಿಯಾಗಿ ನಟಿಸಿರುವ “ಬಿಂಗೊ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಸಸ್ಪೆನ್ಸ್ ಥ್ರಿಲ್ಲರ್ ಜಾನರ್ ನ ಈ ಚಿತ್ರಕ್ಕೆ ಬೆಂಗಳೂರಿನಲ್ಲೇ ಚಿತ್ರೀಕರಣ ನಡೆದಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ. ಆರ್.ಕೆ ಸ್ಟುಡಿಯೋಸ್ ಮತ್ತು ಮುತರಾ ವೆಂಚರ್ಸ್ ಲಾಂಛನದಲ್ಲಿ ಲಲಿತಾಸ್ವಾಮಿ ಮತ್ತು ಆರ್ ಪರಾಂಕುಶ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಆರ್ ಕೆ ಚಂದನ್…

ಚಿತ್ರಸಂತೆಯಲ್ಲಿ ಬಿಡುಗಡೆಯಾಯಿತು ನಿರಂಜನ್ ಶೆಟ್ಟಿ ಅಭಿನಯದ “31 DAYS” ಚಿತ್ರದ ಫಸ್ಟ್ ಲುಕ್ .

ಚಿತ್ರಸಂತೆಯಲ್ಲಿ ಬಿಡುಗಡೆಯಾಯಿತು ನಿರಂಜನ್ ಶೆಟ್ಟಿ ಅಭಿನಯದ “31 DAYS” ಚಿತ್ರದ ಫಸ್ಟ್ ಲುಕ್ .

“ಜಾಲಿಡೇಸ್” ಚಿತ್ರದ ಖ್ಯಾತಿಯ ನಿರಂಜನ್ ಶೆಟ್ಟಿ ನಾಯಕನಾಗಿ ನಟಿಸುತ್ತಿರುವ “31 DAYS” ಚಿತ್ರದ ಫಸ್ಟ್ ಲುಕ್ ಇತ್ತೀಚಿಗೆ ಬೆಂಗಳೂರಿನ ಚಿತ್ರಕಲಾ ಪರಿಷತ್ ಆವರಣದಲ್ಲಿ ನಡೆಯುವ ಚಿತ್ರಸಂತೆಯಲ್ಲಿ ಅನಾವರಣವಾಯಿತು. “31 DAYS” ಚಿತ್ರಕ್ಕೆ “ಹೈ ವೋಲ್ಟೇಜ್ ಲವ್ ಸ್ಟೋರಿ” ಎಂಬ ಅಡಿಬರಹವಿದೆ. ಇದೊಂದು ಪ್ರೇಮ ಕಥಾನಕವಾಗಿದ್ದು, ಚಿತ್ರಸಂತೆಗೆ ಆಗಮಿಸಿದ್ದ 46 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿರುವ ದಂಪತಿ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದು ವಿಶೇಷ. ಶೀರ್ಷಿಕೆಯನ್ನು ಯುವ ಪ್ರೇಮಿಗಳು ಬಿಡುಗಡೆ ಮಾಡಿದರು. ಅಲ್ಲಿ ನೆರದಿದ್ದ ಸಹಸ್ರಾರು ಕಲಾಸಕ್ತರು “31…

ಫೆಬ್ರವರಿಯಲ್ಲಿ ತೆರೆಗೆ ಬರಲಿದೆ “ಪುರುಷೋತ್ತಮನ‌ ಪ್ರಸಂಗ”. ಇದು ದೇವದಾಸ್ ಕಾಪಿಕಾಡ್ ಅವರ ನಿರ್ದೇಶನದ ಮೊದಲ ಕನ್ನಡ ಚಿತ್ರ

ಫೆಬ್ರವರಿಯಲ್ಲಿ ತೆರೆಗೆ ಬರಲಿದೆ “ಪುರುಷೋತ್ತಮನ‌ ಪ್ರಸಂಗ”. ಇದು ದೇವದಾಸ್ ಕಾಪಿಕಾಡ್ ಅವರ ನಿರ್ದೇಶನದ ಮೊದಲ ಕನ್ನಡ ಚಿತ್ರ

ರಾಷ್ಟ್ರಕೂಟ ಪಿಕ್ಚರ್ಸ್ ಲಾಂಛನದಲ್ಲಿ ವಿ ರವಿ ಕುಮಾರ್ ನಿರ್ಮಾಣದಲ್ಲಿ ಖ್ಯಾತ ನಟ, ನಿರ್ದೇಶಕ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ನಿರ್ದೇಶನದಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ “ಪುರುಷೋತ್ತಮನ‌ ಪ್ರಸಂಗ” ಚಿತ್ರ ಬಿಡುಗಡೆಗೆ ಸಿದ್ದವಾಗಿದ್ದು, ಫೆಬ್ರವರಿಯಲ್ಲಿ ತೆರೆಗೆ ಬರಲಿದೆ. ಈ ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಹೆಚ್ಚಿನ ಮಾಹಿತಿ ನೀಡಿದರು. ತುಳುವಿನಲ್ಲಿ ಒಂಭತ್ತು ಸಿನಿಮಾಗಳನ್ನು ನಿರ್ದೇಶಿಸಿರುವ ನನಗೆ ಕನ್ನಡದಲ್ಲಿ ಇದು ಮೊದಲ ಚಿತ್ರ ಎಂದು ಮಾತನಾಡಿದ ನಿರ್ದೇಶಕ ದೇವದಾಸ್ ಕಾಪಿಕಾಡ್, ಕನ್ನಡದಲ್ಲಿ ನನಗೆ ಮೊದಲ ಚಿತ್ರವನ್ನು ನಿರ್ದೇಶಿಸಲು ಅವಕಾಶ…

ಸ್ಯಾಂಡಲ್ ವುಡ್ ನ ಸೂಪರ್ ಸ್ಟಾರ್ ಬಿಡುಗಡೆ ಮಾಡಲಿದ್ದಾರೆ ಆದಿತ್ಯ ಅಭಿನಯದ “ಕಾಂಗರೂ” ಚಿತ್ರದ ಮೋಷನ್ ಪೋಸ್ಟರ್. ಕನ್ನಡ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ .

ಸ್ಯಾಂಡಲ್ ವುಡ್ ನ ಸೂಪರ್ ಸ್ಟಾರ್ ಬಿಡುಗಡೆ ಮಾಡಲಿದ್ದಾರೆ ಆದಿತ್ಯ ಅಭಿನಯದ “ಕಾಂಗರೂ” ಚಿತ್ರದ ಮೋಷನ್ ಪೋಸ್ಟರ್. ಕನ್ನಡ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ .

ಆದಿತ್ಯ ನಾಯಕರಾಗಿ ನಟಿಸಿರುವ ಹಾಗೂ ಕಿಶೋರ್ ಮೇಗಳಮನೆ ನಿರ್ದೇಶನದ “ಕಾಂಗರೂ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿ, ಮಾತಿನ ಜೋಡಣೆ(ಡಬ್ಬಿಂಗ್) ಸಹ ಪೂರ್ಣವಾಗಿದೆ. ಬೆಂಗಳೂರು, ಚಿಕ್ಕಮಗಳೂರು, ಹೊರನಾಡು ಮುಂತಾದ ಕಡೆ ಚಿತ್ರೀಕರಣ ನಡೆದಿದೆ. “ಕಾಂಗರೂ” ಚಿತ್ರ ಕನ್ನಡ, ತೆಲುಗು, ತಮಿಳು ಹಾಗೂ ಮಲೆಯಾಳಂ ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಮೋಷನ್ ಪೋಸ್ಟರ್ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಕನ್ನಡ ಚಿತ್ರರಂಗದ ಸೂಪರ್ ಸ್ಟಾರ್ ಒಬ್ಬರು ನಮ್ಮ ಚಿತ್ರದ ಮೋಷನ್ ಪೋಸ್ಟರ್ ಅನಾವರಣ ಮಾಡಲಿದ್ದಾರೆ. “ಕಾಂಗರೂ” ಚಿತ್ರದ ಮೋಷನ್…

ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ 2023. ಶ್ರೀ ಡಾಲಿ ಧನಂಜಯ, (‘ಟಗರು ಪಲ್ಯ)ಚಿತ್ರದ – ‘ಸಂಬಂಜ ಅನ್ನೊದು ದೊಡ್ದು ಕನಾ’ ಗೀತರಚನೆಗಾಗಿ

ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ 2023. ಶ್ರೀ ಡಾಲಿ ಧನಂಜಯ, (‘ಟಗರು ಪಲ್ಯ)ಚಿತ್ರದ – ‘ಸಂಬಂಜ ಅನ್ನೊದು ದೊಡ್ದು ಕನಾ’ ಗೀತರಚನೆಗಾಗಿ

ಕನ್ನಡ ಚಿತ್ರರಂಗದ ಪ್ರಥಮ ಪ್ರಚಾರಕರ್ತ ದಿವಂಗತ ಶ್ರೀ ಡಿ.ವಿ. ಸುಧೀಂದ್ರ ಅವರು ತಮ್ಮ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಗೆ 25 ವರ್ಷ ತುಂಬಿದ ಸುಸಂದರ್ಭದಲ್ಲಿ ಅನ್ನದಾತರಾದ ನಿರ್ಮಾಪಕರಿಗೆ ಮತ್ತು ಹಿರಿಯ ಪತ್ರಕರ್ತರಿಗೆ ಪ್ರಶಸ್ತಿ ನೀಡುವ ಪರಿಪಾಠ ಆರಂಭಿಸಿದರು. ಈಗ ಪ್ರಶಸ್ತಿಗಳ ಸಂಖ್ಯೆ 11ಕ್ಕೇರಿದೆ. ಸಂಸ್ಥೆಯ 48ನೇ ವಾರ್ಷಿಕೋತ್ಸವ ಹಾಗೂ 23ನೇ ವರ್ಷದ ಪ್ರಶಸ್ತಿ ಪ್ರದಾನ ಸಮಾರಂಭ. ಶ್ರೀ ಡಾಲಿ ಧನಂಜಯ, (‘ಟಗರು ಪಲ್ಯ)ಚಿತ್ರದ – ‘ಸಂಬಂಜ ಅನ್ನೊದು ದೊಡ್ದು ಕನಾ’ ಗೀತರಚನೆಗಾಗಿ ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ…

ದೇಶದಲ್ಲಿ ಶ್ರೀ ರಾಮನ ಪ್ರಾಣ ಪ್ರತಿಷ್ಠಾಪನೆಯ ಹೊಸ್ತಿಲಲ್ಲೇ ಕನ್ನಡದಲ್ಲೊಂದು ಹನುಮಾನ್ ಚಾಲಿಸ.

ದೇಶದಲ್ಲಿ ಶ್ರೀ ರಾಮನ ಪ್ರಾಣ ಪ್ರತಿಷ್ಠಾಪನೆಯ ಹೊಸ್ತಿಲಲ್ಲೇ ಕನ್ನಡದಲ್ಲೊಂದು ಹನುಮಾನ್ ಚಾಲಿಸ.

ಭಕ್ತಿ ಭಾವದ ಹೊನಲಿಗೆಹೃದಯಸ್ಪರ್ಶ ನೀಡುವ ಹೃತ್ಕಂಠ ಗಾಯಕ ನಮ್ಮ ಕನ್ನಡದ ಹೆಮ್ಮೆಯ ವಿಜಯ್ ಪ್ರಕಾಶ್ ಅವರ ಧ್ವನಿಯಲ್ಲಿ ಕನ್ನಡದಲ್ಲಿ ಮೊದಲನೇ ಹನುಮಾನ ಚಾಲಿಸಾ ಕೋಟ್ಯಾಂತರ ಜನ ಭಾರತೀಯರು ಕಾತುರದಿಂದ ಕಾಯುತ್ತಿರುವ ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ ಶ್ರೀರಾಮನ ಪ್ರತಿಷ್ಠೆ ಸುಸಮಯ ಸಮೀಪಿಸುತ್ತಿದೆ. ಈ ಸಂದರ್ಭದಲ್ಲಿ ಜಗತ್ತಿಗೆ ಭಕ್ತಿಯ ನಿಯಮ –ಏನೆಂದು ತೋರಿಸಿಕೊಟ್ಟ ರಾಮಭಕ್ತ ಹನುಮನ ಕುರಿತಾದ ಹನುಮಾನ್ ಚಾಲಿಸಾ ಬಿಡುಗಡೆಯಾಗಿದೆ. ಇದೇ ಮೊದಲ ಬಾರಿಗೆ ಕನ್ನಡದಲ್ಲಿ ಮೂಡಿಬಂದಿರುವ ಹನುಮಾನ್ ಚಾಲಿಸಾ ವನ್ನು ಭಕ್ತಿ ಭಾವದ ಹೊನಲಿಗೆ ಹೃದಯಸ್ಪರ್ಶ ನೀಡುವ ಹೃತ್ಕಂಠ…

” ಬೊಂಬಾಟ್ ಭೋಜನ” ಕ್ಕೆ ಸಾವಿರದ ಸಂಭ್ರಮ . ಮಕರ ಸಂಕ್ರಾಂತಿಯಿಂದ ನಾಲ್ಕನೇ ಆವೃತ್ತಿ ಆರಂಭ .

” ಬೊಂಬಾಟ್ ಭೋಜನ” ಕ್ಕೆ ಸಾವಿರದ ಸಂಭ್ರಮ . ಮಕರ ಸಂಕ್ರಾಂತಿಯಿಂದ ನಾಲ್ಕನೇ ಆವೃತ್ತಿ ಆರಂಭ .

ನಟ-ನಿರ್ದೇಶಕ ಸಿಹಿಕಹಿ ಚಂದ್ರು ಸ್ಟಾರ್ ಸುವರ್ಣದಲ್ಲಿ ನಡೆಸಿಕೊಡುತ್ತಿರುವ ‘ಬೊಂಬಾಟ್‍ ಭೋಜನ’ ಕಾರ್ಯಕ್ರಮವು ಇದೀಗ 1000 ಸಂಚಿಕೆಗಳನ್ನು ಪೂರೈಸಿದೆ. ಈ ಕಾರ್ಯಕ್ರಮದ ಮೂರನೇ ಆವೃತ್ತಿ ಇದೀಗ ಮುಗಿದಿದ್ದು, ಜನವರಿ 15ರಂದು ಮಕರ ಸಂಕ್ರಾಂತಿಯಂದು ನಾಲ್ಕನೇ ಆವೃತ್ತಿ ಆರಂಭವಾಗಲಿದೆ. ಮೂರನೇ ಸೀಸನ್‍ 1000 ಕಂತುಗಳನ್ನು ಮುಗಿಸಿರುವ ಹಾಗೂ ನಾಲ್ಕನೆಯ ಆವೃತ್ತಿ ಆರಂಭವಾಗಲಿರುವ ಈ ಹೊತ್ತಿನಲ್ಲಿ ಚಂದ್ರು ಸಂಭ್ರಮದ ಸಮಾರಂಭವೊಂದನ್ನು ಆಯೋಜಿಸಿದ್ದರು. ಆಪ್ತರು, ಮಿತ್ರರು ಮತ್ತು ವಾಹಿನಿಯವರನ್ನು ಆಮಂತ್ರಿಸಿ ಒಂದು ವಿಶೇಷ ಕಾರ್ಯಕ್ರಮವನ್ನು ಮಾಡಿ, ಬಂದವರಿಗೆ “ಬೊಂಬಾಟ್ ಭೋಜನ” ಹಾಕಿಸಿ ಕಾರ್ಯಕ್ರಮದ…