ಕಂಸಾಳೆ ಫಿಲಂಸ್ ಹಾಗೂ ಭುವನ್ ಎಂಟರ್ಟೈನ್ಮೆಂಟ್ ನಿರ್ಮಾಣದ “ಚಿ ಸೌಜನ್ಯ” ಚಿತ್ರದ ಮೂಲಕ ನಿರ್ದೇಶನದತ್ತ ಖ್ಯಾತ ನಟಿ ಹರ್ಷಿಕಾ ಪೂಣಚ್ಛ .
ಶೋಷಿತ ಹೆಣ್ಣುಮಕ್ಕಳ ಕುರಿತಾದ ಈ ಚಿತ್ರದ ಪ್ರಮುಖಪಾತ್ರದಲ್ಲಿ ಬಹುಭಾಷಾ ನಟ ಕಿಶೋರ್ . ತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯರಾಗಿರುವ ಅಷ್ಟೇ ಅಲ್ಲದೆ ಉತ್ತಮ ಸಾಮಾಜಿಕ ಕಾರ್ಯಗಳಿಂದಲೂ ಗುರುತಿಸಿಕೊಂಡಿರುವ ನಟಿ ಹರ್ಷಿಕಾ ಪೂಣಚ್ಛ ಈಗ ನಿರ್ದೇಶಕಿಯಾಗುತ್ತಿದ್ದಾರೆ. ಕನ್ನಡದಲ್ಲಿ ಕೇವಲ ಬೆರಳೆಣಿಕೆಯಷ್ಟು ಮಾತ್ರವಿರುವ ನಿರ್ದೇಶಕಿಯರ ಸಾಲಿಗೆ ಹರ್ಷಿಕಾ ಸೇರ್ಪಡೆಯಾಗಲಿದ್ದಾರೆ. ಇತ್ತೀಚೆಗೆ ಹರ್ಷಿಕಾ ಪೂಣಚ್ಛ ಅವರು ನಿರ್ದೇಶಿಸುತ್ತಿರುವ, ಕಂಸಾಳೆ ಫಿಲಂಸ್ ಹಾಗೂ ಭುವನ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಮಧು ಮರಿಸ್ವಾಮಿ ಮತ್ತು ಭುವನ್ ಪೊನ್ನಣ್ಣ ನಿರ್ಮಿಸುತ್ತಿರುವ, ಬಹುಭಾಷಾ ನಟ ಕಿಶೋರ್ ಪ್ರಮುಖಪಾತ್ರದಲ್ಲಿ…
