ನವೆಂಬರ್ 24ಕ್ಕೆ ಬಿಡುಗಡೆಯಾಗಲಿದೆ ‘ಸ್ವಾತಿ ಮುತ್ತಿನ ಮಳೆ ಹನಿಯೇ’.
‘ಸ್ಯಾಂಡಲ್‍ವುಡ್ ಕ್ವೀನ್’ ರಮ್ಯಾ ಇದೇ ಮೊದಲ ಬಾರಿಗೆ ತಮ್ಮ ಆ್ಯಪಲ್ ಬಾಕ್ಸ್ ಸ್ಟುಡಿಯೋಸ್‍ನಿಂದ ನಿರ್ಮಿಸಿರುವ, ರಾಜ್ ಬಿ ಶೆಟ್ಟಿ ಅಭಿನಯಿಸಿ-ನಿರ್ದೇಶಿಸಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರವು ನವೆಂಬರ್ 24ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಚಿತ್ರವನ್ನು ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ನೇತೃತ್ವದ ಕೆ.ಆರ್.ಜಿ ಸ್ಟುಡಿಯೋಸ್ ವಿತರಣೆ ಮಾಡುತ್ತಿದೆ. ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರವು ಕಳೆದ ವರ್ಷ ವಿಜಯದಶಮಿಯ ದಿನದಂದು ಅಧಿಕೃತವಾಗಿ ಘೋಷಣೆಯಾಗಿತ್ತು. ಈಗ ಈ ವರ್ಷ ಅದೇ ದಿನದಂದು ಚಿತ್ರದ ಬಿಡುಗಡೆಯ…