ಅಕ್ಟೋಬರ್ 19 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ “ಘೋಸ್ಟ್” ಚಿತ್ರ .
ಅಕ್ಟೋಬರ್ 18ರ ಮಧ್ಯರಾತ್ರಿ 12 ಗಂಟೆಗೆ ಕೆ.ಜಿ. ರಸ್ತೆಯ ಪ್ರಮುಖ ಚಿತ್ರಮಂದಿರದಲ್ಲಿ ಮೊದಲ ಪ್ರದರ್ಶನ(ಫ್ಯಾನ್ ಶೋ) . ಪ್ರತಿಷ್ಠಿತ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಂದೇಶ್ ನಾಗರಾಜ್ ಅವರು ಅರ್ಪಿಸುವ, ಸಂದೇಶ್ ಎನ್ ನಿರ್ಮಾಣದ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಘೋಸ್ಟ್” ಚಿತ್ರ ಅಕ್ಟೋಬರ್ 19 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ.ಇದೇ ಮೊದಲ ಬಾರಿಗೆ ಕೆ.ಜಿ.ರಸ್ತೆಯ ಪ್ರಮುಖ ಚಿತ್ರಮಂದಿರದಲ್ಲಿ ಅಕ್ಟೋಬರ್18 ರ ಮಧ್ಯರಾತ್ರಿ 12 ಕ್ಕೆ ಭರ್ಜರಿ ಫ್ಯಾನ್ ಶೋ ಆಯೋಜಿಸಲಾಗಿದೆ….
