ಯುಗಾದಿ ಹಬ್ಬದಂದು(ಮಾರ್ಚ್ 30) ಅನಾವರಣವಾಗಲಿದೆ ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ ಟೀಸರ್
ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಎಂ. ರಮೇಶ್ ರೆಡ್ಡಿ ಅವರು ತಮ್ಮ “ಸೂರಜ್ ಪ್ರೊಡಕ್ಷನ್ ” ಬ್ಯಾನರ್ ನಲ್ಲಿ ನಿರ್ಮಿಸುತ್ತಿರುವ ಕನ್ನಡದ ಬಹುನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಇತ್ತೀಚಿಗೆ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯನ್ನು ಸಹ ವಿಭಿನ್ನವಾಗಿ ಮಾಡಲಾಗಿತ್ತು. ಆಗಸ್ಟ್ 15 ರಂದು ಅಭಿಮಾನಿಗಳು ಕಾತುರದಿಂದ ಕಾಯುತ್ತಿರುವ ಈ ಚಿತ್ರ…