ಮೇ 9 ಕ್ಕೆ ಬಿಡುಗಡೆಯಾಗಲಿದೆ ನವರಸನ್ ನಿರ್ಮಾಣದ “ಸೂತ್ರಧಾರಿ
ಚಂದನ್ ಶೆಟ್ಟಿ ಈ ಚಿತ್ರದ ಪ್ರಮುಖ ಪಾತ್ರಧಾರಿ . ಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ಚಿತ್ರರಂಗದ ಸಾಕಷ್ಟು ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವ ನವರಸನ್ ನಿರ್ಮಾಣದ, ಕಿರಣ್ ಕುಮಾರ್ ಚೊಚ್ಚಲ ನಿರ್ದೇಶನದ ಹಾಗೂ ತಮ್ಮ ಗಾಯನದ ಮೂಲಕ ಜನಪ್ರಿಯರಾಗಿರುವ ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ “ಸೂತ್ರಧಾರಿ” ಚಿತ್ರ ಮೇ 9 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ನಿರ್ಮಾಪಕರಾದ ಚೇತನ್ ಗೌಡ, ಮುನೇಗೌಡ ಹಾಗೂ ರಾಜೇಶ್ ಅವರು “ಸೂತ್ರಧಾರಿ” ಚಿತ್ರದ ಬಿಡುಗಡೆ ದಿನಾಂಕ ಅನಾವರಣ ಮಾಡಿ, ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು….
