ಈ ವಾರ ತೆರೆಗೆ “ಕ್ಯಾಲೆಂಡರ್

ಈ ಹಿಂದೆ “ಸ್ವಾರ್ಥ ರತ್ನ” ಸೇರಿದಂತೆ ಎರಡು ಸಿನಿಮಾಗಳಲ್ಲಿ ನಾಯಕನಾಗಿ ನಟಿಸಿದ್ದ ಆದರ್ಶ ಗುಂಡುರಾಜ್ ಅಭಿನಯದ “ಕ್ಯಾಲೆಂಡರ್” ಚಿತ್ರ ಈ ವಾರ ಏಪ್ರಿಲ್ 10 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಮಹಿಳಾ ಪ್ರಧಾನ ಈ ಚಿತ್ರ ಈಗಾಗಲೇ ಟ್ರೇಲರ್ ಹಾಗೂ ಹಾಡುಗಳ ಮೂಲಕ ಜನಪ್ರಿಯವಾಗಿದೆ.

ಆದರ್ಶ ಗುಂಡುರಾಜ್ ಅವರೆ ನಿರ್ಮಿಸಿ ನಾಯಕನಾಗೂ ನಟಿಸಿರುವ ಈ ಚಿತ್ರದ ನಾಯಕಿಯರಾಗಿ ನಿವಿಷ್ಕ ಪಾಟೀಲ್ ಹಾಗೂ ಸುಶ್ಮಿತ ನಟಿಸಿದ್ದಾರೆ.ಕನಸಿನ ರಾಣಿ ಮಾಲಾಶ್ರೀ ಅವರು ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ. ರಮೇಶ್ ಇಂದಿರಾ, ಪ್ರಮೋದ್ ಶೆಟ್ಟಿ, ಪ್ರಕಾಶ್ ತುಮ್ಮಿನಾಡು, ಸುಚೇಂದ್ರ ಪ್ರಸಾದ್, ಚಂದ್ರಪ್ರಭ ಮುಂತಾದವರು ತಾರಾಬಳಗದಲ್ಲಿದ್ದಾರೆ. ಸುನಾದ್ ಗೌತಮ್ ಸಂಗೀತ ನೀಡಿದ್ದಾರೆ. ರಮೇಶ್ ಕೊಯಿರಾ ಛಾಯಾಗ್ರಹಣ, ಕೆ.ಜಿ.ಎಫ್ ಖ್ಯಾತಿಯ ವಿಕ್ರಂ ಮೋರ್ ಸಾಹಸ ನಿರ್ದೇಶನ, ಭಜರಂಗಿ ಮೋಹನ್ ನೃತ್ಯ ನಿರ್ದೇಶನ, ಸುರೇಶ್ ಆರ್ಮುಗಂ ಸಂಕಲನ ಹಾಗೂ ಮಹಾಂತೇಶ್ ಆರ್ ಅವರ ಸಹ ನಿರ್ದೇಶನವಿರುವ ಈ ಚಿತ್ರವನ್ನು ನವೀನ್ ಶಕ್ತಿ ನಿರ್ದೇಶಿಸಿದ್ದಾರೆ.

Similar Posts

0 0 votes
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments