“ಮಹಾನ್” ನಾಯಕನಾಗಿ ವಿಜಯ ರಾಘವೇಂದ್ರ
ಯುಗಾದಿ ಸಂದರ್ಭದಲ್ಲಿ ಶೀರ್ಷಿಕೆ ಅನಾವರಣ ಮಾಡಿ ಶುಭಕೋರಿದ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಕನ್ನಡದಲ್ಲಿ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ಪಿ.ಸಿ.ಶೇಖರ್ ನಿರ್ದೇಶನದ, ಪ್ರತಿಷ್ಠಿತ ಅಲೆಯನ್ಸ್ ಯೂನಿವರ್ಸಿಟಿ ವಿದ್ಯಾ ಸಂಸ್ಥೆಯ ಸಹಯೋಗದೊಂದಿಗೆ ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಅವರು ನಿರ್ಮಿಸುತ್ತಿರುವ ನೂತನ ಚಿತ್ರಕ್ಕೆ “ಮಹಾನ್” ಎಂದು ಹೆಸರಿಡಲಾಗಿದೆ. “ಚಿನ್ನಾರಿಮುತ್ತ” ವಿಜಯ ರಾಘವೇಂದ್ರ ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಶೀರ್ಷಿಕೆಯನ್ನು ಯುಗಾದಿ ಹಬ್ಬದ ಸಂದರ್ಭದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅನಾವರಣ ಮಾಡಿದರು. ಶೀರ್ಷಿಕೆ ಅನಾವರಣ ಮಾಡಿ…