ಬಹು ನಿರೀಕ್ಷಿತ “ರೋಲೆಕ್ಸ್” ಚಿತ್ರಕ್ಕೆ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯ
ಕಾಮಿಡಿ ಹಾಗೂ ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಕೋಮಲ್ ಕುಮಾರ್ ನಾಯಕ. ಸೋನಾಲ್ ಮೊಂತೆರೊ ನಾಯಕಿ . ಮಧು ಫಿಲಂ ಸರ್ಕ್ಯೂಟ್ಸ್ ಸಂಸ್ಥೆ ಲಾಂಛನದಲ್ಲಿ ಅಂಬಟಿ ಮಧು ಮೋಹನಕೃಷ್ಣ ಅವರು ಕನ್ನಡದಲ್ಲಿ ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿರುವ ಮೊದಲ ಚಿತ್ರ ”ರೋಲೆಕ್ಸ್”. ಈ ಹಿಂದೆ “ಬಿಲ್ ಗೇಟ್ಸ್” ಚಿತ್ರವನ್ನು ನಿರ್ದೇಶನ ಮಾಡಿದ್ದ ವಿ.ಸಿ.ಶ್ರೀನಿವಾಸ್ ಅವರು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ನಾಯಕನಾಗಿ ಕೋಮಲ್ ಕುಮಾರ್ ನಟಿಸುತ್ತಿದ್ದಾರೆ. ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಕೋಮಲ್ ಕುಮಾರ್…
