ಪೃಥ್ವಿ ಶಾಮನೂರು ಈಗ ಉತ್ತರ ಕರ್ನಾಟಕದ “ಉಡಾಳ” . ಶೀರ್ಷಿಕೆ ಬಿಡುಗಡೆ ಮಾಡಿ ಶುಭ ಹಾರೈಸಿದ ಡಾಲಿ ಧನಂಜಯ .ಪೃಥ್ವಿ ಶಾಮನೂರು ಈಗ ಉತ್ತರ ಕರ್ನಾಟಕದ “ಉಡಾಳ” .
ಎರಡು ವರ್ಷಗಳ ಹಿಂದೆ ” ಪದವಿಪೂರ್ವ ” ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಪೃಥ್ವಿ ಶಾಮನೂರು ಅಭಿನಯದ ನೂತನ ಚಿತ್ರದ ಶೀರ್ಷಿಕೆಯನ್ನು ನಟ ರಾಕ್ಷಸ ಡಾಲಿ ಧನಂಜಯ ಬಿಡುಗಡೆ ಮಾಡಿದರು. ಈ ಚಿತ್ರಕ್ಕೆ “ಉಡಾಳ” ಎಂದು ಹೆಸರಿಡಲಾಗಿದೆ. ಯೋಗರಾಜ್ ಭಟ್ ಹಾಗೂ ರವಿ ಶಾಮನೂರು ನಿರ್ಮಾಣದ ಈ ಚಿತ್ರವನ್ನು ಯೋಗರಾಜ್ ಭಟ್ ಅವರ ಶಿಷ್ಯ ಅಮೋಲ್ ಪಾಟೀಲ್ ನಿರ್ದೇಶನ ಮಾಡುತ್ತಿದ್ದಾರೆ. ಪೃಥ್ವಿ ಅವರಿಗೆ ನಾಯಕಿಯಾಗಿ ಹೃತಿಕ ಶ್ರೀನಿವಾಸ್ ಅಭಿನಯಿಸುತ್ತಿದ್ದಾರೆ. ಮೊದಲು ಯೋಗರಾಜ್ ಭಟ್ ಅವರಿಗೆ ಧನ್ಯವಾದ…