ಚೆನ್ನೈನಲ್ಲಿ ಪ್ರಧಾನ ಮಂತ್ರಿ ಶ್ರೀನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಅರ್ಜುನ್ ಸರ್ಜಾ.
ದಕ್ಷಿಣ ಭಾರತದ ಖ್ಯಾತ ನಟ ಅರ್ಜುನ್ ಸರ್ಜಾ ಅವರು ಇತ್ತೀಚೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಚೆನೈನಲ್ಲಿ ಭೇಟಿ ಮಾಡಿದ್ದಾರೆ. ಈ ಸಮಯದಲ್ಲಿ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯ ಅರ್ಜುನ್ ಸಹ ಜೊತೆಗಿದ್ದರು. ಮೋದಿ ಅವರನ್ನು ಭೇಟಿ ಮಾಡಿದ ನಂತರ ಅರ್ಜುನ್ ಸರ್ಜಾ ಅವರು ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ. ಇತ್ತೀಚಿಗೆ ನಮ್ಮ ಹೆಮ್ಮೆಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಚೆನ್ನೈಗೆ ಆಗಮಿಸಿದ್ದರು. ಈ ಸಮಯದಲ್ಲಿ ನಾನು ಅವರನ್ನು ಭೇಟಿ ಮಾಡಿದೆ. ನನ್ನನ್ನು ನೋಡಿದ ತಕ್ಷಣ…