ನವೆಂಬರ್ ಕೊನೆಯಲ್ಲಿ ರಾಗಿಣಿ “ರಾಜ್ಯೋತ್ಸವ”‌ . ಹಾಡು ಬಿಡುಗಡೆ ಮಾಡಿ ಶುಭ ಹಾರೈಸಿದ ಶ್ರೀಮುರಳಿ.

ನವೆಂಬರ್ ಕೊನೆಯಲ್ಲಿ ರಾಗಿಣಿ “ರಾಜ್ಯೋತ್ಸವ”‌ . ಹಾಡು ಬಿಡುಗಡೆ ಮಾಡಿ ಶುಭ ಹಾರೈಸಿದ ಶ್ರೀಮುರಳಿ.

ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವದ ಶುಭದಿನ. ಇಡೀ ನವೆಂಬರ್ ತಿಂಗಳಲ್ಲಿ ರಾಜ್ಯೋತ್ಸವ ಆಚರಿಸುವ ವಾಡಿಕೆ ಇದೆ. ಈ ಕನ್ನಡ ಮಾಸದ ಕೊನೆಯ ದಿನ(ನವೆಂಬರ್ 30) ದಂದು ರಾಗಿಣಿ ದ್ವಿವೇದಿ ಅಭಿನಯದ “ರಾಜ್ಯೋತ್ಸವ ದಿ ಆಂಥಮ್” ಎಂಬ ವಿಡಿಯೋ ಸಾಂಗ್ ಐಪ್ಲೆಕ್ಸ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ. ಪುನೀತ್ ರಾಜ್‍ಕುಮಾರ್ ಅಭಿನಯದ “ವಂಶಿ” ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿರುವ ವಿಜಯ್ ಕೌಂಡಿನ್ಯ ಅವರ ಸಹೋದರ ವಿಕ್ರಮ್ ಶೀನಿವಾಸ್ ಈ ವಿಡಿಯೋ ಸಾಂಗ್ ನಿರ್ಮಾಣ‌ ಮಾಡಿದ್ದಾರೆ. ವಿಕ್ರಮ್ ಅವರ ತಂದೆ…

‘800’ – ಖ್ಯಾತ ಕ್ರಿಕೆಟರ್ ಮುತ್ತಯ್ಯ ಮುರಳೀಧರನ್‌ ಜೀವನಗಾಥೆ ಜಿಯೊಸಿನಿಮಾದಲ್ಲಿ ! ಮುತ್ತಯ್ಯ ಮುರಳೀಧರನ್‌ ಬದುಕು ಮತ್ತು ಸಾಧನೆಗಳನ್ನು ಆಧರಿಸಿದ ‘800’ ಸಿನಿಮಾವನ್ನು ಡಿಸೆಂಬರ್ 2ರಿಂದ ಜಿಯೊಸಿನಿಮಾದಲ್ಲಿ ಕನ್ನಡದಲ್ಲಿಯೇ ನೋಡಿ.

‘800’ – ಖ್ಯಾತ ಕ್ರಿಕೆಟರ್ ಮುತ್ತಯ್ಯ ಮುರಳೀಧರನ್‌ ಜೀವನಗಾಥೆ ಜಿಯೊಸಿನಿಮಾದಲ್ಲಿ ! ಮುತ್ತಯ್ಯ ಮುರಳೀಧರನ್‌ ಬದುಕು ಮತ್ತು ಸಾಧನೆಗಳನ್ನು ಆಧರಿಸಿದ ‘800’ ಸಿನಿಮಾವನ್ನು ಡಿಸೆಂಬರ್ 2ರಿಂದ ಜಿಯೊಸಿನಿಮಾದಲ್ಲಿ ಕನ್ನಡದಲ್ಲಿಯೇ ನೋಡಿ.

ವೈವಿಧ್ಯಮಯ ಮತ್ತು ಪ್ರಾದೇಶಿಕ ಪ್ರಾತಿನಿಧ್ಯವನ್ನು ಹೊಂದಿರುವ ಕಂಟೆಂಟ್‌ ಅನ್ನು ಜನರಿಗೆ ನೀಡುವಲ್ಲಿ JioCinema ಮುಂಚೂಣಿಯಲ್ಲಿದೆ. ಆ ಪ್ರಯತ್ನದ ಭಾಗವಾಗಿ ಇದೀಗ, ಮುತ್ತಯ್ಯ ಮುರಳೀಧರನ್‌ ಅವರ ಜೀವನವನ್ನಾಧರಿಸಿದ, ಎಂ.ಎಸ್‌. ಶ್ರೀಪತಿ ನಿರ್ದೇಶಿಸಿರುವ ‘800’ ಸಿನಿಮಾ JioCinemaದಲ್ಲಿ ಬಿಡುಗಡೆಗೊಳ್ಳುತ್ತಿದೆ. ಇದೇ ಡಿಸೆಂಬರ್ 2ರಂದು JioCinema ಒಟಿಟಿ ವೇದಿಕೆಯಲ್ಲಿ ಬಿಡುಗಡೆಗೊಳ್ಳುತ್ತಿರುವ ಈ ಸಿನಿಮಾ, ಶ್ರೀಲಂಕಾದ ಖ್ಯಾತ ಕ್ರಿಕೆಟ್ ಆಟಗಾರ ಮುತ್ತಯ್ಯ ಮುರಳೀಧರನ್ ಅವರ ಬದುಕು ಮತ್ತು ಸಾಧನೆಗಳನ್ನು ಆಧರಿಸಿದ್ದು. ಟೆಸ್ಟ್‌ ಕ್ರಿಕೆಟ್‌ನಲ್ಲಿ 800 ವಿಕೆಟ್‌ಗಳನ್ನು ಪಡೆದುಕೊಂಡು ದಾಖಲೆ ನಿರ್ಮಿಸಿದ್ದ ಬೌಲರ್ ಬದುಕಿನ…

“ಕಾಣೆಯಾಗಿದ್ದಾಳೆ” ಹುಡುಕಿಕೊಟ್ಟವರಿಗೆ ಬಹುಮಾನ ಚಿತ್ರ ಡಿಸೆಂಬರ್ ನಲ್ಲಿ ಬಿಡುಗಡೆ.

“ಕಾಣೆಯಾಗಿದ್ದಾಳೆ” ಹುಡುಕಿಕೊಟ್ಟವರಿಗೆ ಬಹುಮಾನ ಚಿತ್ರ ಡಿಸೆಂಬರ್ ನಲ್ಲಿ ಬಿಡುಗಡೆ.

ಶ್ರೀಮೈಲಾರಲಿಂಗೇಶ್ವರ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಆರ್ ಕೆ ನಿರ್ದೇಶಿಸಿರುವ“ಕಾಣೆಯಾಗಿದ್ದಾಳೆ” ಹುಡುಕಿಕೊಟ್ಟವರಿಗೆ ಬಹುಮಾನ ಚತ್ರ ತೆರೆಗೆ ಬರಲು ಸಿದ್ದವಾಗಿದ್ದು, ಡಿಸೆಂಬರ್ ನಲ್ಲಿ ಬಿಡುಗಡೆಯಾಗಲಿದೆ. ಇತ್ತೀಚಿಗೆ ಈ ಚಿತ್ರದ ಹಾಡೊಂದನ್ನು ದಾವಣಗೆರೆ ಮಹಾನಗರ ಪಾಲಿಕೆಯ ಉಪ ಮೇಯರ್ ಯೋಗೇಶ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಹೆಚ್ಚಿನ ಮಾಹಿತಿ ನೀಡಿದರು‌. ಇದೊಂದು ನೈಜ ಹಾಗೂ ಕಾಲ್ಪನಿಕ ಕಥಾ ಆಧಾರಿತ ಚಿತ್ರ. ಸಾಮಾಜಿಕ ಜಾಲತಾಣಗಳನ್ನು ಹೆಣ್ಣುಮಕ್ಕಳು ನಿಯಮಿತವಾಗಿ ಬಳಸಬೇಕು. ಇಲ್ಲದಿದ್ದರೆ ಅಪಾಯ ಖಂಡಿತ ಎಂಬ ವಿಷಯವನ್ನು…

ಬಹು ನಿರೀಕ್ಷಿತ “ಅನಿಮಲ್” ಚಿತ್ರ ಡಿಸೆಂಬರ್ 1 ರಂದು ಬಿಡುಗಡೆ .

ಬಹು ನಿರೀಕ್ಷಿತ “ಅನಿಮಲ್” ಚಿತ್ರ ಡಿಸೆಂಬರ್ 1 ರಂದು ಬಿಡುಗಡೆ .

ಸಂದೀಪ್ ರೆಡ್ಡಿ ವಂಗ ನಿರ್ದೇಶನದ ಹಾಗೂ ರಣ್ ಬೀರ್ ಕಪೂರ್ , ಕನ್ನಡತಿ ರಶ್ಮಿಕಾ ಮಂದಣ್ಣ, ಪ್ರಮುಖಪಾತ್ರದಲ್ಲಿ ನಟಿಸಿರುವ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ “ಅನಿಮಲ್” ಡಿಸೆಂಬರ್ 1 ರಂದು ತೆರೆಗೆ ಬರುತ್ತಿದೆ. ಹೆಸರಾಂತ ಕೆ.ವಿ.ಎನ್ ಸಂಸ್ಥೆ ಚಿತ್ರವನ್ನು ಬಿಡುಗಡೆ ಮಾಡುತ್ತಿದೆ. ಚಿತ್ರ ಬಿಡುಗಡೆ ಹಿನ್ನೆಲೆಯಲ್ಲಿ ಚಿತ್ರತಂಡ ಪ್ರಚಾರಕ್ಕೆ ಬೆಂಗಳೂರಿಗೆ ಆಗಮಿಸಿತ್ತು. ಈ ವೇಳೆ ಮಾದ್ಯಮದೊಂದಿಗೆ ತಂಡದ ಸದಸ್ಯರು ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು. ನಟ ರಣಬೀರ್ ಕಪೂರ್ ಮಾತನಾಡಿ, ಇದು ವಿಭಿನ್ನವಾದ ಸಿನಿಮಾ. ತಂದೆ –…

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಂದ ಬಿಡುಗಡೆಯಾಯಿತು ಧನ್ವೀರ್ ಅಭಿನಯದ “ಕೈವ” ಚಿತ್ರದ ಟ್ರೇಲರ್ .. ಬಹು ನಿರೀಕ್ಷಿತ ಈ ಚಿತ್ರ ಡಿಸೆಂಬರ್ 8 ರಂದು ತೆರೆಗೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಂದ ಬಿಡುಗಡೆಯಾಯಿತು ಧನ್ವೀರ್ ಅಭಿನಯದ “ಕೈವ” ಚಿತ್ರದ ಟ್ರೇಲರ್ .. ಬಹು ನಿರೀಕ್ಷಿತ ಈ ಚಿತ್ರ ಡಿಸೆಂಬರ್ 8 ರಂದು ತೆರೆಗೆ.

ರವೀಂದ್ರಕುಮಾರ್ ನಿರ್ಮಾಣದ, ಜಯತೀರ್ಥ ನಿರ್ದೇಶನದ ಹಾಗೂ ಧನ್ವೀರ್ ನಾಯಕರಾಗಿ ನಟಿಸಿರುವ ” ಕೈವ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ರಾಜಾಜಿನಗರದ ಕೆ.ಎಲ್.ಇ ಆಟದ ಮೈದಾನದಲ್ಲಿ ಆಯೋಜಿಸಲಾಗಿದ್ದ ಅದ್ದೂರಿ ಸಮಾರಂಭದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದರು. ಅಭಿಷೇಕ್ ಅಂಬರೀಶ್, ಚಿಕ್ಕಣ್ಣ, ನಟಿ ಆಶಾ ಭಟ್ ಸೇರಿದಂತೆ ಅನೇಕ ಗಣ್ಯರು ಟ್ರೇಲರ್ ಬಿಡುಗಡೆ ಸಮಾರಂಭಕ್ಕೆ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ಬಹು ನಿರೀಕ್ಷಿತ ಈ ಚಿತ್ರ ಡಿಸೆಂಬರ್ 8 ರಂದು ಬಿಡುಗಡೆಯಾಗುತ್ತಿದೆ. ಟ್ರೇಲರ್ ಬಿಡುಗಡೆ…

“ಕಾಂತಾರ”ಕ್ಕೆ ಪ್ರತಿಷ್ಠಿತ ಅಂತಾರಾಷ್ಟ್ರೀಯ ಪ್ರಶಸ್ತಿ. ಭಾರತದ 54ನೇ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ. ತೀರ್ಪುಗಾರರ ವಿಶೇಷ ಪ್ರಶಸ್ತಿ.

“ಕಾಂತಾರ”ಕ್ಕೆ ಪ್ರತಿಷ್ಠಿತ ಅಂತಾರಾಷ್ಟ್ರೀಯ ಪ್ರಶಸ್ತಿ. ಭಾರತದ 54ನೇ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ. ತೀರ್ಪುಗಾರರ ವಿಶೇಷ ಪ್ರಶಸ್ತಿ.

ಹೊಂಬಾಳೆ ಫಿಲಂಸ್‍ ನಿರ್ಮಾಣದ, ರಿಷಭ್‍ ಶೆಟ್ಟಿ ನಿರ್ದೇಶಿಸಿ ನಟಿಸಿರುವ ‘ಕಾಂತಾರ’ ಚಿತ್ರದ ಪೂರ್ವ ಭಾಗವಾದ ‘ಕಾಂತಾರ – ಅಧ್ಯಾಯ 1’, ಸೋಮವಾರವಷ್ಟೇ ಅದ್ಧೂರಿಯಾಗಿ ಪ್ರಾರಂಭವಾಗಿತ್ತು. ಇಂದು ಚಿತ್ರವು ಇನ್ನೊಂದು ಹೆಗ್ಗಳಿಕೆಗೆ ಪಾತ್ರವಾಗಿದೆ.ಮಂಗಳವಾರ, ಗೋವಾದಲ್ಲಿ ಮುಕ್ತಾಯವಾದ 54ನೇ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಹೊಂಬಾಳೆ ಫಿಲಂಸ್ ನಿರ್ಮಾಣದ, ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’ ಚಿತ್ರಕ್ಕೆ ತೀರ್ಪುಗಾರರ ವಿಶೇಷ ಪ್ರಶಸ್ತಿ ಸಿಕ್ಕಿದೆ. ಕನ್ನಡ ಚಿತ್ರವೊಂದು ಇದೇ ಮೊದಲ ಬಾರಿಗೆ ಇಂಥದ್ದೊಂದು ಪ್ರಶಸ್ತಿಗೆ ಭಾಜನವಾಗಿದೆ. ಈ ಬಾರಿ ಅಂತಾರಾಷ್ಟ್ರೀಯ ಸ್ಪರ್ಧಾ ವಿಭಾಗದಲ್ಲಿ…

ಮಾತಿನಮನೆಯಲ್ಲಿ “ದ ಜಡ್ಜ್ ಮೆಂಟ್” .

ಮಾತಿನಮನೆಯಲ್ಲಿ “ದ ಜಡ್ಜ್ ಮೆಂಟ್” .

ಜಿ 9 ಕಮ್ಯುನಿಕೇಷನ್ ಮೀಡಿಯಾ & ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಶಾರದ ನಾಡಗೌಡ, ವಿಶ್ವನಾಥ ಗುಪ್ತ, ರಾಮು ರಾಯಚೂರು, ರಾಜಶೇಖರ ಪಾಟೀಲ ಮತ್ತು ಪ್ರತಿಮ ಬಿರಾದಾರ ನಿರ್ಮಿಸುತ್ತಿರುವ ಹಾಗೂ ಗುರುರಾಜ ಕುಲಕರ್ಣಿ (ನಾಡಗೌಡ) ರಚನೆ ಹಾಗೂ ನಿರ್ದೇಶನದ “ದ ಜಡ್ಜ್ ಮೆಂಟ್” ಚಿತ್ರಕ್ಕೆ ಮಾತಿನ ಜೋಡಣೆ ಆರಂಭವಾಗಿದೆ. ಚಿತ್ರಕ್ಕೆ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದೆ. ಅಪಾರವೆಚ್ಚದಲ್ಲಿ ಅದ್ದೂರಿ ತಾರಾಗಣದೊಂದಿಗೆ ನಿರ್ಮಾಣವಾಗುತ್ತಿರುವ ಈ ಚಿತ್ರ ಆರಂಭದಿಂದಲೂ ಸದ್ದು ಮಾಡುತ್ತಿದೆ. ಕ್ರೇಜಿಸ್ಟಾರ್ ರವಿಚಂದ್ರನ್ ಈ ಚಿತ್ರದಲ್ಲಿ…

“ಎಕ್ಸ್‌ ಅಂಡ್‌ ವೈ” ಹಿಂದೆ ಬಿದ್ದ ನಿರ್ದೇಶಕ ಡಿ. ಸತ್ಯ ಪ್ರಕಾಶ್‌.

“ಎಕ್ಸ್‌ ಅಂಡ್‌ ವೈ” ಹಿಂದೆ ಬಿದ್ದ ನಿರ್ದೇಶಕ ಡಿ. ಸತ್ಯ ಪ್ರಕಾಶ್‌.

ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಡಿ.ಸತ್ಯ ಪ್ರಕಾಶ್‌ ಚಿತ್ರ ಸೆಟ್ಟೇರಿತು ಎಂದರೆ ಏನಾದರೊಂದಷ್ಟು ವಿಶೇಷತೆಗಳನ್ನು ಹೊಂದಿರುತ್ತದೆ ಎಂದು ಪ್ರೇಕ್ಷಕರು ಮತ್ತು ಚಿತ್ರೋದ್ಯಮದ ಮಂದಿ ಎದುರು ನೋಡುತ್ತಾರೆ. ಅದನ್ನು ಅಷ್ಟೇ ಜತನದಿಂದ ಕಾಪಾಡಿಕೊಂಡು ಬಂದಿದ್ದಾರೆ ನಿರ್ದೇಶಕ ಸತ್ಯ. ಬಹಳ ದಿನಗಳ ನಂತರ ಈಗ ಅಳೆದು ತೂಗಿ ಅತ್ಯಾಪ್ತ ಕಥೆ ಮಾಡಿಕೊಂಡು ಅದಕ್ಕೆ “ಎಕ್ಸ್ ಅಂಡ್‌ ವೈ” ಎಂದು ಶೀರ್ಷಿಕೆ ಇಟ್ಟುಕೊಂಡು ಅಖಾಡಕ್ಕೆ ಇಳಿದಿದ್ದಾರೆ. ತಮ್ಮ ಹಿಂದಿನ ಮೂರು ಚಿತ್ರಗಳಲ್ಲಿ ಮೂಡಿಸಿದ ವಿಶೇಷತೆಗಳಂತೆ ಇಲ್ಲೂ ಚಿತ್ರದ ಟೈಟಲ್‌,…

ಸೋನಾ ಬೇಬಿ ಜೊತೆ ಹೆಜ್ಜೆ ಹಾಕಿದ ಪ್ರಜ್ವಲ್ ದೇವರಾಜ್ .””ಗಣ” ಚಿತ್ರದಿಂದ ಬಂತು ಮತ್ತೊಂದು ಮನಮೋಹಕ ಗೀತೆ

ಸೋನಾ ಬೇಬಿ ಜೊತೆ ಹೆಜ್ಜೆ ಹಾಕಿದ ಪ್ರಜ್ವಲ್ ದೇವರಾಜ್ .””ಗಣ” ಚಿತ್ರದಿಂದ ಬಂತು ಮತ್ತೊಂದು ಮನಮೋಹಕ ಗೀತೆ

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸಿರುವ “ಗಣ” ಚಿತ್ರ ಈಗಾಗಲೇ ಬಿಡುಗಡೆಯಾಗಿರುವ ಟೀಸರ್ ಹಾಗೂ ಹಾಡಿನ ಮೂಲಕ ಜನರ ಮೆಚ್ಚುಗೆ ಪಡೆದುಕೊಂಡಿದೆ. “ಗಣ” ಚಿತ್ರಕ್ಕಾಗಿ ಡಾ||ವಿ.ನಾಗೇಂದ್ರಪ್ರಸಾದ್ ಬರೆದಿರುವ “ಮೈ ನೇಮ್ ಇಸ್ ಸೋನಾ ಬೇಬಿ ಬೇಬಿ.. ಕಣ್ಣಾಮುಚ್ಚಾಲೆ ನನ್ನ ಹಾಬಿ” ಎಂಬ ಮನಮೋಹಕ ಹಾಡು “ಸರಿಗಮಪ” ಆಡಿಯೋ ಸಂಸ್ಥೆ ಮೂಲಕ ಬಿಡುಗಡೆಯಾಗಿದೆ. ಮುರಳಿ ಮಾಸ್ಟರ್ ನೃತ್ಯ ಸಂಯೋಜಿಸಿರುವ ಈ ಮಾಸ್ ಐಟಂ ಹಾಡಿಗೆ ಪ್ರಜ್ವಲ್ ದೇವರಾಜ್ , ನಮೃತಾ ಮಲ್ಲ ಹಾಗೂ ರವಿಕಾಳೆ ಹೆಜ್ಜೆ ಹಾಕಿದ್ದಾರೆ….

“ಕೋಣ” ಚಿತ್ರದಲ್ಲಿ ಕೋಮಲ್ ಕುಮಾರ್. . ಇದು ಕೋಮಲ್ ಅವರ ಮೊದಲ ಪ್ಯಾನ್ ಇಂಡಿಯಾ ಸಿನಿಮಾ .

“ಕೋಣ” ಚಿತ್ರದಲ್ಲಿ ಕೋಮಲ್ ಕುಮಾರ್. . ಇದು ಕೋಮಲ್ ಅವರ ಮೊದಲ ಪ್ಯಾನ್ ಇಂಡಿಯಾ ಸಿನಿಮಾ .

ತಮ್ಮ ಸಹಜ ಅಭಿನಯದಿಂದ ಅಭಿಮಾನಿಗಳ ಮನ ಗೆದ್ದಿರುವ “ಕೋಮಲ್ ಕುಮಾರ್” ಅಭಿನಯದ “ಕೋಣ” ಚಿತ್ರದ ಶೀರ್ಷಿಕೆ ಹಾಗೂ ಪೋಸ್ಟರ್ ಇತ್ತಿಚೆಗೆ ಅನಾವರಣವಾಯಿತು. ಈ ಚಿತ್ರ ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ನಿರ್ಮಾಣವಾಗಲಿದೆ. ಡಾರ್ಕ್ ಕಾಮಿಡಿ ಜಾನರ್ ಇರುವ ಈ ಚಿತ್ರವನ್ನು ಈ ಹಿಂದೆ ಜಗ್ಗೇಶ್ ಅವರು ಅಭಿನಯಿಸಿದ್ದ “8 MM” ಚಿತ್ರವನ್ನು ನಿರ್ದೇಶಿಸಿದ್ದ ಎಸ್ ಹರಿಕೃಷ್ಣ ನಿರ್ದೇಶಿಸುತ್ತಿದ್ದಾರೆ. ಇದೊಂದು ನೈಜ ಘಟನೆ ಆಧಾರಿತ ಚಿತ್ರವಾಗಿದೆ. ಕೋಮಲ್ ಕುಮಾರ್ ಅವರು ಈವರೆಗೂ ಅಭಿನಯಿಸಿರದ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕನ್ನಡದಲ್ಲಿ ಆನೆ,…