ಮೊದಲ ಹಂತದ ಚಿತ್ರೀಕರಣ ಪೂರ್ಣಗೊಳಿಸಿದ “ಇದು ನಮ್ ಶಾಲೆ”

ಮೊದಲ ಹಂತದ ಚಿತ್ರೀಕರಣ ಪೂರ್ಣಗೊಳಿಸಿದ “ಇದು ನಮ್ ಶಾಲೆ”

ಶ್ರೀ ಜೇನುಕಲ್ ಪ್ರೊಡಕ್ಷನ್ ಇವರ ಮೊದಲ ಕಾಣಿಕೆ, “ಇದು ನಮ್ ಶಾಲೆ” ಮಕ್ಕಳ ಸಿನಿಮಾದ ಮೊದಲ ಹಂತದ ಚಿತ್ರೀಕರಣವು ಅರಸೀಕೆರೆ ಜೇನುಕಲ್ ಹಾಗೂ ಗೀಜಿಹಳ್ಳಿ ವ್ಯಾಪ್ತಿಯಲ್ಲಿ ಸುಮಾರು 15 ದಿನಗಳ ಕಾಲ ನಿರಂತರವಾಗಿ ನಡೆಯಿತು.ಕೃಷ್ಣ ಬೆಳ್ತಂಗಡಿ ಕಥೆ ಚಿತ್ರಕತೆ ಸಂಭಾಷಣೆ ಬರೆದು ಈ ಚಿತ್ರವನ್ನು ನಿರ್ದೇಶನ ಮಾಡಿದ್ದು, ರವಿ ಆಚಾರ್ ಹಾಗೂ ಉಮೇಶ್ ಆಚಾರ್ ನಿರ್ಮಾಣ ಮಾಡಿದ್ದಾರೆ. ನಾಗರಾಜ್ ಅದವಾನಿ ಛಾಯಾಗ್ರಾಹಣ, ಹಿತನ್ ಹಾಸನ್ ಸಂಗೀತ ಈ ಸಿನಿಮಾಕ್ಕಿದ್ದು, ಪುಣ್ಯ ಹಾಗೂ ಪೂಜ್ಯ ಅನ್ನುವ ಇಬ್ಬರು ಹೆಣ್ಣು…

“ಅರ್ಮಾನ್ ಮಲಿಕ್ ಹಾಡಿದರು “ಹಣೆಬರಹ”ದ ಹಾಡು..”ಶುಗರ್ ಫ್ಯಾಕ್ಟರಿ” ಯಿಂದ ಬಂತು ಭಾವನೆಗಳನ್ನು ಬಿಂಬಿಸುವ ಗೀತೆ.

“ಅರ್ಮಾನ್ ಮಲಿಕ್ ಹಾಡಿದರು “ಹಣೆಬರಹ”ದ ಹಾಡು..”ಶುಗರ್ ಫ್ಯಾಕ್ಟರಿ” ಯಿಂದ ಬಂತು ಭಾವನೆಗಳನ್ನು ಬಿಂಬಿಸುವ ಗೀತೆ.

ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ, ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ ಹಾಗೂ ದೀಪಕ್ ಅರಸ್ ನಿರ್ದೇಶನದ “ಶುಗರ್ ಫ್ಯಾಕ್ಟರಿ” ಚಿತ್ರದಿಂದ ಮತ್ತೊಂದು ಸುಮಧುರ ಗೀತೆ ಬಿಡುಗಡೆಯಾಗಿದೆ. ರಾಘವೇಂದ್ರ ಕಾಮತ್ ಬರೆದಿರುವ “ಹಣೆಬರಹ” ಎಂದು ಆರಂಭವಾಗುವ, ಭಾವನೆಗಳನ್ನು ಬಿಂಬಿಸುವ ಈ ಹಾಡನ್ನು ಖ್ಯಾತ ಗಾಯಕ ಅರ್ಮಾನ್ ಮಲಿಕ್ ಇಂಪಾಗಿ ಹಾಡಿದ್ದಾರೆ. ಕಬೀರ್ ರಫಿ ಸಂಗೀತ ನೀಡಿದ್ದಾರೆ. ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಈ ಹಾಡು ಸಾಕಷ್ಟು ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡುಗಳು,…

ಕನ್ನಡ ರಾಜ್ಯೋತ್ಸವದಂದು ಆರಂಭವಾಯಿತು ಪ್ರಜ್ವಲ್ ದೇವರಾಜ್ ಅಭಿನಯದ “ಚೀತಾ” ಚಿತ್ರ . ನೃತ್ಯ ನಿರ್ದೇಶಕ ರಾಜ ಕಲೈ ಕುಮಾರ್ ಈ ಚಿತ್ರದ ಮೂಲಕ ನಿರ್ದೇಶನದತ್ತ .

ಕನ್ನಡ ರಾಜ್ಯೋತ್ಸವದಂದು ಆರಂಭವಾಯಿತು ಪ್ರಜ್ವಲ್ ದೇವರಾಜ್ ಅಭಿನಯದ “ಚೀತಾ” ಚಿತ್ರ . ನೃತ್ಯ ನಿರ್ದೇಶಕ ರಾಜ ಕಲೈ ಕುಮಾರ್ ಈ ಚಿತ್ರದ ಮೂಲಕ ನಿರ್ದೇಶನದತ್ತ .

ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರತಿಭಾ ನರೇಶ್ ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕ ರಾಜ ಕಲೈ ಕುಮಾರ್ ಪ್ರಥಮ ನಿರ್ದೇಶನದ ಹಾಗೂ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸುತ್ತಿರುವ “ಚೀತಾ” ಚಿತ್ರದ ಮುಹೂರ್ತ ಸಮಾರಂಭ ಕನ್ನಡ ರಾಜ್ಯೋತ್ಸವದ ಶುಭದಿನದಂದು ಹೆಚ್ ಎಂ ಟಿ ಶಾಲೆ ಆಟದ ಮೈದಾನದಲ್ಲಿ ನೆರವೇರಿತು. ಪ್ರಜ್ವಲ್ ದೇವರಾಜ್ ಕನ್ನಡ ಭಾವುಟ ಹಾರಿಸುವುದರ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು. ಮುಹೂರ್ತ ಸಮಾರಂಭದ ನಂತರ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಕಳೆದ 23 ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಡ್ಯಾನ್ಸರ್ ಆಗಿ,…

ನಿರಂತರ ಚಿತ್ರೀಕರಣದಲ್ಲಿ “ಗೌರಿ”. ಚಿತ್ರತಂಡದಿಂದ ನಾಯಕ ಸಮರ್ಜಿತ್ ಲಂಕೇಶ್ ಹುಟ್ಟುಹಬ್ಬ ಆಚರಣೆ .

ನಿರಂತರ ಚಿತ್ರೀಕರಣದಲ್ಲಿ “ಗೌರಿ”. ಚಿತ್ರತಂಡದಿಂದ ನಾಯಕ ಸಮರ್ಜಿತ್ ಲಂಕೇಶ್ ಹುಟ್ಟುಹಬ್ಬ ಆಚರಣೆ .

ಖ್ಯಾತ ಸಾಹಿತಿ ಪಿ.ಲಂಕೇಶ್ ಅವರ ಮೊಮ್ಮಗ ಹಾಗೂ ಇಂದ್ರಜಿತ್ ಲಂಕೇಶ್ ಅವರ ಮಗ ಸಮರ್ಜಿತ್ ಲಂಕೇಶ್ “ಗೌರಿ” ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಇಂದ್ರಜಿತ್ ಲಂಕೇಶ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗಿದೆ. ಇತ್ತೀಚೆಗೆ ನಾಯಕ ಸಮರ್ಜಿತ್ ಲಂಕೇಶ್ ಹುಟ್ಟುಹಬ್ಬವನ್ನು ಚಿತ್ರತಂಡದ ಸದಸ್ಯರು ಆಚರಿಸಿದರು. ಸಮರ್ಜಿತ್ ಅವರ ಅಜ್ಜಿ, ಪಿ.ಲಂಕೇಶ್ ಪತ್ನಿ ಇಂದಿರಾ ಲಂಕೇಶ್, ತಾಯಿ ಅರ್ಪಿತಾ ಲಂಕೇಶ್, ಇಂದ್ರಜಿತ್ ಲಂಕೇಶ್, ನಾಯಕಿ ಸಾನ್ಯ ಅಯ್ಯರ್, ನಟಿಯರಾದ ಮಾನಸಿ ಸುಧೀರ್, ಎಸ್ತರ ನರೋನ,…

ವಸಂತಕಾಲದ ಹೂವುಗಳಿಗೆ ಜೊತೆಯಾದ ಧ್ರುವ ಸರ್ಜಾ.

ವಸಂತಕಾಲದ ಹೂವುಗಳಿಗೆ ಜೊತೆಯಾದ ಧ್ರುವ ಸರ್ಜಾ.

ಸಚಿನ್ ಶೆಟ್ಟಿ ನಿರ್ದೇಶನದ ‘ವಸಂತಕಾಲದ ಹೂಗಳು’ ಚಿತ್ರವನ್ನು ನೋಡಿ ಮೆಚ್ಚಿರುವ ಧ್ರುವ ಸರ್ಜಾ ಈ ಚಿತ್ರವನ್ನು ಪ್ರೆಸೆಂಟ್ ಮಾಡುವ ಮೂಲಕ ಹೊಸ ತಂಡಕ್ಕೆ ಬೆನ್ನೆಲುಬಾಗಿ ನಿಂತಿದ್ದಾರೆ. “ಇದು ಸಣ್ಣ ತಂಡವೊಂದು ಶ್ರದ್ಧೆಯಿಂದ ಬರಿ ಕಥೆಯನ್ನಷ್ಟೆ ನಂಬಿ ಮಾಡಿದ ಒಂದು ಅಚ್ಚುಕಟ್ಟಾದ ಚಿತ್ರ. ವಿಭಿನ್ನ ಕಂಟೆಂಟ್ ನೊಂದಿಗೆ ಬರುತ್ತಿರುವ ಹೊಸಬರ ಚಿತ್ರಗಳಿಗೆ ಉತ್ತೇಜನ ಕೊಡುವುದು ಈ ಹೊತ್ತಿನ ಅಗತ್ಯ ಎಂದು ನನಗನಿಸುತ್ತದೆ. ಹೀಗಾಗಿ ಈ ಉತ್ಸಾಹಿ ಯುವ ತಂಡಕ್ಕೆ, ಮುಖ್ಯವಾಗಿ ಒಂದು ಉತ್ತಮ ಚಿತ್ರಕ್ಕೆ ಬೆಂಬಲ ನೀಡುವ ಸಲುವಾಗಿ…

ಟ್ರೇಲರ್ ನಲ್ಲೇ ಎಲ್ಲರ ಗಮನ ಸೆಳೆಯುತ್ತಿದೆ “ಅಥಿ” ಐ ಲವ್ ಯು.

ಟ್ರೇಲರ್ ನಲ್ಲೇ ಎಲ್ಲರ ಗಮನ ಸೆಳೆಯುತ್ತಿದೆ “ಅಥಿ” ಐ ಲವ್ ಯು.

ಇತ್ತೀಚಿಗೆ ಬರುತ್ತಿರುವ ಕನ್ನಡದ ಹೊಸ ಚಿತ್ರಗಳ ಹೊಸ ಪ್ರಯತ್ನವನ್ನು ಪ್ರೇಕ್ಷಕ ಮೆಚ್ಚಿಕೊಳ್ಳುತ್ತಿದ್ದಾನೆ. ಅಂತಹುದೆ ಒಂದು ವಿಭಿನ್ನ ಕಥಾಹಂದರ ಹೊಂದಿರುವ “ಅಥಿ” ಐ ಲವ್ ಯು ಚಿತ್ರ ಟ್ರೇಲರ್ ನಲ್ಲೇ ಎಲ್ಲರ ಗಮನ ಸೆಳೆದಿದೆ. ಇತ್ತೀಚಿಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಹಾಗೂ ಪತ್ರಿಕಾಗೋಷ್ಠಿ ನಡೆಯಿತು. ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು. ನನ್ನ ನಿರ್ಮಾಣದ ಎರಡನೇ ಚಿತ್ರವಿದು. ನಿರ್ದೇಶಕ ಲೋಕೇಂದ್ರ ಸೂರ್ಯ ಅವರು ಹೇಳಿದ ಕಥೆ ಇಷ್ಟವಾಗಿ ನಿರ್ಮಾಣ ಮಾಡಿದ್ದೇನೆ. ಸತಿಪತಿಯರ ಸಂಬಂಧದ ಕುರಿತಾದ ಕಥಾಹಂದರ ಹೊಂದಿರುವ…

ಮಾತಿನಮನೆಯಲ್ಲಿ “chef ಚಿದಂಬರ”.

ಮಾತಿನಮನೆಯಲ್ಲಿ “chef ಚಿದಂಬರ”.

ನಟ ಅನಿರುದ್ಧ್ ಜತಕರ್ ನಾಯಕನಾಗಿ ಅಭಿನಯಿಸಿರುವ ಹಾಗೂ “ರಾಘು” ಚಿತ್ರದ ಖ್ಯಾತಿಯ ನಿರ್ದೇಶಕ ಎಂ.ಆನಂದರಾಜ್ ನಿರ್ದೇಶನದ “chef ಚಿದಂಬರ” ಚಿತ್ರದ ಚಿತ್ರೀಕರಣ ಇತ್ತೀಚಿಗೆ ಮುಕ್ತಾಯವಾಗಿದೆ. ಪ್ರಸ್ತುತ ಲೂಪ್ ಸ್ಟುಡಿಯೋದಲ್ಲಿ ಚಿತ್ರಕ್ಕೆ ಮಾತಿನ ಜೋಡಣೆ (ಡಬ್ಬಿಂಗ್) ನಡೆಯುತ್ತಿದೆ. ನಾಯಕ ಅನಿರುದ್ದ್ ಮಾತಿನ ಮೂಲಕ ತಮ್ಮ ಪಾತ್ರಕ್ಕೆ ಜೀವ ತುಂಬುತಿದ್ದಾರೆ. ಡಾರ್ಕ್ ಕಾಮಿಡಿ ಜಾನರ್ ನ ಈ ಚಿತ್ರದಲ್ಲಿ ಅನಿರುದ್ಧ್ ಶೆಫ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪಾತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದಾರೆ.ದಮ್ತಿ ಪಿಕ್ಚರ್ಸ್ ಲಾಂಛನದಲ್ಲಿ ರೂಪ ಡಿ.ಎನ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ…

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಂದ ಅನಾವರಣವಾಯಿತು “ಉಸಿರೇ ಉಸಿರೇ” ಚಿತ್ರದ ಟ್ರೇಲರ್ . ಇದು ರಾಜೀವ್ ಹನು ಅಭಿನಯದ ಚಿತ್ರ.

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಂದ ಅನಾವರಣವಾಯಿತು “ಉಸಿರೇ ಉಸಿರೇ” ಚಿತ್ರದ ಟ್ರೇಲರ್ . ಇದು ರಾಜೀವ್ ಹನು ಅಭಿನಯದ ಚಿತ್ರ.

ಎನ್ ಗೊಂಬೆ ಲಾಂಛನದಲ್ಲಿ ಪ್ರದೀಪ್ ಯಾದವ್ ನಿರ್ಮಾಣದ, ಸಿ.ಎಂ.ವಿಜಯ್ ನಿರ್ದೇಶನದ ಹಾಗೂ ಬಿಗ್ ಬಾಸ್ ಖ್ಯಾತಿಯ ರಾಜೀವ್ ಹನು ನಾಯಕನಾಗಿ ನಟಿಸಿರುವ “ಉಸಿರೇ ಉಸಿರೇ” ಚಿತ್ರದ ಟ್ರೇಲರ್ ಇತ್ತೀಚಿಗೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಂದ ಅನಾವರಣವಾಯಿತು. ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ಕಿಚ್ಚ ಸುದೀಪ್, “ಉಸಿರೇ ಉಸಿರೇ” ನನ್ನ ಗೆಳೆಯ ರಾಜೀವ್ ನಾಯಕನಾಗಿ ನಟಿಸಿರುವ ಚಿತ್ರ. ಟ್ರೇಲರ್ ಚೆನ್ನಾಗಿದೆ. ದೇವರಾಜ್, ತಾರಾ, ಬ್ರಹ್ಮಾನಂದಂ, ಅಲಿ ಮುಂತಾದ ಹಿರಿಯ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ‌. ನಾನು ಕೂಡ…

“ಗನ್ಸ್ ಅಂಡ್ ರೋಸಸ್” ಚಿತ್ರದಲ್ಲಿ ಖ್ಯಾತ ನಟ ಕಿಶೋರ್ .

“ಗನ್ಸ್ ಅಂಡ್ ರೋಸಸ್” ಚಿತ್ರದಲ್ಲಿ ಖ್ಯಾತ ನಟ ಕಿಶೋರ್ .

ಹೆಚ್ ಆರ್ ನಟರಾಜ್ ನಿರ್ಮಾಣದ, ಹೆಚ್ ಎಸ್ ಶ್ರೀನಿವಾಸಕುಮಾರ್ ನಿರ್ದೇಶನದಲ್ಲಿ ಅರ್ಜುನ್ ನಾಯಕರಾಗಿ ನಟಿಸಿರುವ “ಗನ್ಸ್ ಅಂಡ್” ರೋಸಸ್ ಚಿತ್ರದಲ್ಲಿ ಖ್ಯಾತ ನಟ ಕಿಶೋರ್ ಅಭಿನಯಿಸಿದ್ದಾರೆ. ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಿಶೋರ್ ಅವರು ಕಾಣಿಸಿಕೊಂಡಿದ್ದು, ಇತ್ತೀಚಿಗೆ ಅವರು ಅಭಿನಯಿಸಿದ ಸನ್ನಿವೇಶಗಳನ್ನು ಬೆಂಗಳೂರಿನಲ್ಲಿ ಚಿತ್ರಿಸಿಕೊಳ್ಳಲಾಗಿದೆ. “ಗನ್ಸ್ ಅಂಡ್ ರೋಸಸ್” ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಒಂದೆರಡು ದಿನಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ಶರತ್ ಅವರು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಈ ಚಿತ್ರಕ್ಕೆ ಶಶಿಕುಮಾರ್ ಸಂಗೀತ ನಿರ್ದೇಶನ,…

ಕುಟುಂಬ ಸದಸ್ಯರ ಸಮ್ಮುಖದಲ್ಲಿ ಸಂಭ್ರಮದಿಂದ ನೆರವೇರಿತು ಅರ್ಜುನ್ ಸರ್ಜಾ ಪುತ್ರಿ ನಿಶ್ಚಿತಾರ್ಥ .

ಕುಟುಂಬ ಸದಸ್ಯರ ಸಮ್ಮುಖದಲ್ಲಿ ಸಂಭ್ರಮದಿಂದ ನೆರವೇರಿತು ಅರ್ಜುನ್ ಸರ್ಜಾ ಪುತ್ರಿ ನಿಶ್ಚಿತಾರ್ಥ .

ದಕ್ಷಿಣಭಾರತದ ಖ್ಯಾತ ನಟ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯ ಅರ್ಜುನ್ ಅವರ ನಿಶ್ಚಿತಾರ್ಥ ಇತ್ತೀಚೆಗೆ ಉಮಾಪತಿ ಅವರೊಂದಿಗೆ ನೆರವೇರಿದೆ.‌ ಚೆನ್ನೈನಲ್ಲಿ ಅರ್ಜುನ್ ಸರ್ಜಾ ನಿರ್ಮಿಸಿರುವ ಅರ್ಜುನ್ ಸರ್ಜಾ ಅವರ ಆರಾಧ್ಯ ದೈವ ಆಂಜನೇಯನ ದೇವಸ್ಥಾನದಲ್ಲಿರುವ ಸಿತಾರಾಮರ ಸನ್ನಿಧಾನದಲ್ಲಿ ಐಶ್ವರ್ಯ ಹಾಗೂ ಉಮಾಪತಿ ಅವರು ಉಂಗುರ ಬದಲಾವಣೆ ಮಾಡಿಕೊಂಡರು. ಕುಟುಂಬ ಸದಸ್ಯರು, ನಟ & ಸಂಬಂಧಿ ಧ್ರುವ ಸರ್ಜಾ ಹಾಗೂ ಅರ್ಜುನ್ ಸರ್ಜಾ ಆಪ್ತರಾದ ನಟ ವಿಶಾಲ್ ಸೇರಿದಂತೆ ಕೆಲವು ಗೆಳೆಯರು ಈ ಸುಂದರ ಸಮಾರಂಭಕ್ಕೆ ಸಾಕ್ಷಿಯಾದರು. ಐಶ್ವರ್ಯ…