ಬಿ.ಎಂ.ಎಸ್ ಕಾಲೇಜಿನಲ್ಲಿ “ಗೌರಿ” ಚಿತ್ರದ ಮೊದಲ ಹಾಡಿನ ಅನಾವರಣ . ಇದು ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಲಂಕೇಶ್ ಅಭಿನಯದ ಚೊಚ್ಚಲ ಚಿತ್ರ .
ಪತ್ರಕರ್ತ, ನಿರ್ದೇಶಕ ಹಾಗೂ ನಿರ್ಮಾಪಕ ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಲಂಕೇಶ್ “ಗೌರಿ” ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ಇಂದ್ರಜಿತ್ ಲಂಕೇಶ್ ನಿರ್ಮಿಸಿ, ನಿರ್ದೇಶಿಸಿರುವ ಈ ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಇತ್ತೀಚಿಗೆ ಬಸವನಗುಡಿಯ ಬಿ.ಎಂ.ಎಸ್ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ, ಸಾವಿರಾರು ವಿದ್ಯಾರ್ಥಿಗಳ ಸಮ್ಮಖದಲ್ಲಿ “ಗೌರಿ” ಚಿತ್ರದ ಮೊದಲ ಹಾಡು ಲೋಕಾರ್ಪಣೆಯಾಯಿತು. ಇಂದ್ರಜಿತ್ ಲಂಕೇಶ್, ಸಮರ್ಜಿತ್ ಲಂಕೇಶ್, ಸಾನ್ಯಾ ಅಯ್ಯರ್, ಅವಿನಾಶ್, ವಿಷ್ಣು ಮುಂತಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ವಿಜಯ್…
