ಅದ್ದೂರಿ ಸೆಟ್ ನಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಪಿನಾಕ” ಚಿತ್ರಕ್ಕೆ ಚಿತ್ರೀಕರಣ .
ಪೀಪಲ್ ಮೀಡಿಯಾ ಫ್ಯಾಕ್ಟರಿ ನಿರ್ಮಾಣದ ಈ ಚಿತ್ರಕ್ಕೆ ಧನಂಜಯ್ ನಿರ್ದೇಶನ . ಪೀಪಲ್ ಮೀಡಿಯಾ ಫ್ಯಾಕ್ಟರಿ ಲಾಂಛನದಲ್ಲಿ ವಿಶ್ವಪ್ರಸಾದ್ ಅವರು ಅದ್ದೂರಿಯಾಗಿ ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕ ಧನಂಜಯ್ ಚೊಚ್ಚಲ ನಿರ್ದೇಶನದ ಹಾಗೂ ಗೋಲ್ಟನ್ ಸ್ಟಾರ್ ಗಣೇಶ್ ಅಭಿನಯದ ‘ಪಿನಾಕ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ನೆಲಮಂಗಲ ಬಳಿ ಚಿತ್ರಕ್ಕಾಗಿ ಆರು ಎಕರೆ ಪ್ರದೇಶದಲ್ಲಿ ದೊಡ್ಡ ಸೆಟ್ ಹಾಕಲಾಗಿದೆ. ಸೆಟ್ ಎಂದರೆ ಅದು 500 ವರ್ಷಗಳ ಹಿಂದಿನ ದೇವಗಿರಿ ಎಂಬ ಸಾಮ್ರಾಜ್ಯದ ಸೆಟ್. ಒಂದು ನಗರವನ್ನೇ ನಿರ್ಮಿಸಲಾಗಿದ್ದು, ಮಧ್ಯದಲ್ಲೊಂದು…