ಉದಯ ಟಿವಿ ಮುಖ್ಯಸ್ಥ ಸೆಲ್ವಂ ನಿಧನ.
ಜನಪ್ರಿಯ ಉದಯ ಟಿವಿ ಮುಖ್ಯಸ್ಥರಾದ ಸೆಲ್ವಂ ಅವರು ಇಂದು ಬೆಳಗ್ಗೆ ಬೆಂಗಳೂರಿನ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರಿಗೆ 84 ವರ್ಷ ವಯಸ್ಸಾಗಿತ್ತು. ನಾಳೆ ಚೆನೈನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.
ಜನಪ್ರಿಯ ಉದಯ ಟಿವಿ ಮುಖ್ಯಸ್ಥರಾದ ಸೆಲ್ವಂ ಅವರು ಇಂದು ಬೆಳಗ್ಗೆ ಬೆಂಗಳೂರಿನ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರಿಗೆ 84 ವರ್ಷ ವಯಸ್ಸಾಗಿತ್ತು. ನಾಳೆ ಚೆನೈನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.
ಶಮಿಕ ಎಂಟರ್ ಪ್ರೈಸಸ್ ಲಾಂಛನದಲ್ಲಿ ರಾಧಿಕಾ ಕುಮಾರಸ್ವಾಮಿ ನಿರ್ಮಿಸಿ, ನಾಯಕಿಯಾಗೂ ನಟಿಸಿರುವ ಬಹು ನಿರೀಕ್ಷಿತ “ಭೈರಾದೇವಿ” ಸಿನಿಮಾ ಅಕ್ಟೋಬರ್ 3 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದರ ಪೂರ್ವಭಾವಿಯಾಗಿ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ರಮೇಶ್ ಅರವಿಂದ್, ರಾಧಿಕಾ ಕುಮಾರಸ್ವಾಮಿ, ಅನು ಪ್ರಭಾಕರ್, ನಿರ್ದೇಶಕ ಶ್ರೀಜೈ, ನೃತ್ಯ ನಿರ್ದೇಶಕ ಮೋಹನ್, ಸಹ ನಿರ್ಮಾಪಕರಾದ ರವಿರಾಜ್, ಯಾದವ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಟ್ರೇಲರ್ ಬಿಡುಗಡೆ ನಂತರ ಮಾತನಾಡಿದ ರಾಧಿಕಾ ಕುಮಾರಸ್ವಾಮಿ, ನಿರ್ದೇಶಕ ಶ್ರೀಜೈ ನಮ್ಮ…
ಸುಕೃತಿ ಚಿತ್ರಾಲಯ ಲಾಂಛನದಲ್ಲಿ ಎಸ್ ಆರ್ ಸನತ್ ಕುಮಾರ್ ನಿರ್ಮಿಸಿರುವ, ಮಂಜುನಾಥ್ ಅರಸು ಅವರ ಸಹ ನಿರ್ಮಾಣವಿರುವ ಹಾಗೂ ಆರ್ ರವೀಂದ್ರ ನಿರ್ದೇಶನದ “ಗೋಪಿಲೋಲ” ಚಿತ್ರ ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಎಲ್ಲರ ಮನಸ್ಸಿಗೂ ಹತ್ತಿರವಾಗಿದೆ. ಚಿತ್ರ ಅಕ್ಟೋಬರ್ 4ರಂದು ಬಿಡುಗಡೆಯಾಗಲಿದೆ. ಅದಕ್ಕೂ ಮುನ್ನ ಇತ್ತೀಚಿಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಎಸ್.ವಿ.ರಾಜೇಂದ್ರಸಿಂಗ್ ಬಾಬು, ಜೋಸೈಮನ್, ದೊಡ್ಡಣ್ಣ, ಶ್ರೀನಗರ ಕಿಟ್ಟಿ, ಕೆ.ಮಂಜು, ಎಂ.ಜಿ.ರಾಮಮೂರ್ತಿ, ಕೃಷ್ಣೇಗೌಡ, ಪಿ.ಸಿ.ಶೇಖರ್ ಮುಂತಾದ ಗಣ್ಯರು “ಗೋಪಿಲೋಲ” ಚಿತ್ರದ…
ಕರುನಾಡ ಚಕ್ರವರ್ತಿ ಡಾ||ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅಭಿನಯದ, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶ್ರೀಮತಿ ಉಮಾ ರಮೇಶ್ ರೆಡ್ಡಿ ಅವರು ನಿರ್ಮಿಸುತ್ತಿರುವ ಬಹು ನಿರೀಕ್ಷಿತ “45” ಚಿತ್ರದ ಚಿತ್ರೀಕರಣ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಬಿರುಸಿನಿಂದ ಸಾಗಿದೆ. ಚಿತ್ರೀಕರಣ ಸ್ಥಳಕ್ಕೆ ಆನಂದಪೀಠಾಧೀಶ್ವರ ಆಚಾರ್ಯ ಮಹಾಮಂಡಲೇಶ್ವರ ಅನಂತ ಶ್ರೀ ವಿಭೂಷಿತ ಶ್ರೀಬಾಲ್ಕಾನಂದ ಗಿರಿ ಜಿ ಮಹಾರಾಜ್ ಅವರು ಭೇಟಿ ನೀಡಿ ಚಿತ್ರತಂಡದವರನ್ನು ಆಶೀರ್ವದಿಸಿ,…
ಒಂದು ಸಿನಿಮಾ ಗೆಲ್ಲಬೇಕಾದರೆ, ನಟರ ನಟನೆ ಮಾತ್ರವಷ್ಟೇ ಅಲ್ಲದೆ, ತೆರೆಹಿಂದಿನ ತಾಂತ್ರಿಕ ಬಳಗದ ಕೆಲಸವೂ ಅಷ್ಟೇ ಪ್ರಮಾಣದಲ್ಲಿರಬೇಕು. ತೆರೆಮೇಲೆ ಕಲಾವಿದರು ಮೋಡಿ ಮಾಡಿದರೆ, ಅವರಿಗೆ ಕ್ಯಾಮರಾ, ಸಂಗೀತ, ಹಿನ್ನೆಲೆ ಸಂಗೀತ ಪೂರಕವಾಗಿರಬೇಕು. ಕಿವಿಗಿಂಪು ನೀಡುವ ಹಾಡುಗಳು ಮನ ಕುಣಿಸಬೇಕು. ಇಷ್ಟೆಲ್ಲ ಪೀಠಿಕೆ ಯಾಕೆ ಅಂದರೆ, ಇದೀಗ ಕನ್ನಡದ ಯುವ ಪ್ರತಿಭಾನ್ವಿತ ಸಂಗೀತ ನಿರ್ದೇಶಕ ಚೇತನ್ ರಾವ್ ಇದೀಗ ತಮ್ಮ ಸಂಗೀತದ ಮೂಲಕವೇ ಗಮನ ಸೆಳೆಯುತ್ತಿದ್ದಾರೆ. ಹೌದು, ಕನ್ನಡಿಗ ಅದರಲ್ಲೂ ಬೆಂಗಳೂರಿಗರಾದ ಚೇತನ್ ರಾವ್, ಆರ್‌ವಿ ಕಾಲೇಜಿನಲ್ಲಿ ಇಂಜಿನಿಯರಿಂಗ…
ಕಲರ್ಸ್ ಕನ್ನಡದಲ್ಲಿ ಪ್ರಸಾರ ಕಾಣಲಿರುವ ಬಿಗ್ ಬಾಸ್ ಕನ್ನಡ ಸೀಸನ್ 11ರ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಕಳೆದ ಸೀಸನ್ 10ರ ಬಹುದೊಡ್ಡ ಯಶಸ್ಸಿನ ಬಳಿಕ ದೊಡ್ಡ ಜವಾಬ್ದಾರಿಯೊಂದಿಗೆ ಕಲರ್ಸ್ ಕನ್ನಡ ಮತ್ತೊಂದು ಸೀಸನ್ ಜತೆಗೆ ಆಗಮಿಸುತ್ತಿದೆ. ಈಗಾಗಲೇ ಪ್ರೋಮೋಗಳ ಮೂಲಕವೇ ಗಮನ ಸೆಳೆದಿರುವ ಸೀಸನ್ 11, ಇನ್ನೇನು ಶೀಘ್ರದಲ್ಲಿಯೇ ಆರಂಭವಾಗಲಿದೆ. ಈ ಸಲದ ವಿಶೇಷತೆಗಳ ಬಗ್ಗೆ ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಕಿಚ್ಚ ಸುದೀಪ್, ಅಲೋಕ್ ಜೈನ್ ಸೀನಿಯರ್ ಎಕ್ಸಿಕ್ಯೂಟಿವ್ ವೈಸ್ ಪ್ರೆಸಿಡೆಂಟ್, ವಯಾಕಾಮ್ 18, ದೀಪಕ್…
ಶ್ರೀ ಸಾಯಿಗಗನ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಎಸ್ ರಾಜಶೇಖರ್ ಅವರು ನಿರ್ಮಿಸಿರುವ, ಸುಚೇಂದ್ರ ಪ್ರಸಾದ್ ನಿರ್ದೇಶಿಸಿರುವ ಹಾಗೂ ಸಂದೀಪ್, ಚೈತ್ರ, ಡ್ಯಾನಿ ಕುಟ್ಟಪ್ಪ, ಶ್ರೀನಿವಾಸಮೂರ್ತಿ ಮುಂತಾದವರು ಅಭಿನಯಿಸಿರುವ ಸಂಗೀತ ಸುಭಗದ ಕನ್ನಡ ಕಥಾಚಿತ್ರ “ಮಾವು ಬೇವು” ಬಿಡುಗಡೆಯಾಗಿ ಎಲ್ಲರ ಮನಸ್ಸಿಗೆ ಹತ್ತಿರವಾಗಿತ್ತು. ಹಲವು ಚಲನಚಿತ್ರೋತ್ಸವಗಳಲ್ಲೂ ಪ್ರದರ್ಶನಗೊಂಡು ಪ್ರಶಸ್ತಿಯ ಜೊತೆಗೆ ಮೆಚ್ಚುಗೆಯನ್ನು ಪಡೆದಿತ್ತು. ಈಗ ಈ ಚಿತ್ರ ಆಕರ ಗ್ರಂಥವಾಗಿ ಹೊರಹೊಮ್ಮಿದೆ. ಕಾವ್ಯ ಸ್ಪಂದನ ಪಬ್ಲಿಕೇಶನ್ ನ ಭದ್ರಾವತಿ ರಾಮಾಚಾರಿ ಅವರು ಇದನ್ನು ಪ್ರಕಟಿಸಿದ್ದಾರೆ. ಇತ್ತೀಚೆಗೆ “ಮಾವು ಬೇವು” ಪುಸ್ತಕದ…
ವಿಶ್ವಕರ್ಮ ಸಿನಿಮಾಸ್ ಲಾಂಛನದಲ್ಲಿ ಈರಣ್ಣ ಸುಭಾಷ್ ಬಡಿಗೇರ್ ನಿರ್ಮಿಸಿರುವ, ಸಿದ್ದುವಜ್ರಪ್ಪ ನಿರ್ದೇಶನದ ಹಾಗೂ ರಾಜ್ ಪ್ರವೀಣ್ ನಾಯಕನಾಗಿ ನಟಿಸಿರುವ “ರಾವುತ” ಚಿತ್ರದ ಹಾಡುಗಳು ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು.ಕಾಂಗ್ರೆಸ್ ಮುಖಂಡ ಹೆಚ್ ಎಂ ರೇವಣ್ಣ “ರಾವುತ” ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಸಿರಿ ಮ್ಯೂಸಿಕ್ ನಲ್ಲಿ ಈ ಚಿತ್ರದ ಹಾಡುಗಳು ಬಿಡುಗಡೆಯಾಗಿದೆ. ಹಾಡುಗಳ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ಇದು ನನ್ನ ಮೊದಲ ನಿರ್ದೇಶನದ ಚಿತ್ರ ಎಂದು ಮಾತನಾಡಿದ ನಿರ್ದೇಶಕ ಸಿದ್ದು…
ಗುರು ದೇಶಪಾಂಡೆ ನಿರ್ಮಿಸುತ್ತಿರುವ, ‘ಜಟ್ಟ’ ಗಿರಿರಾಜ್ ನಿರ್ದೇಶನದ ಹಾಗೂ “ಬಿಗ್ ಬಾಸ್” ಖ್ಯಾತಿಯ ಕಾರ್ತಿಕ್ ಮಹೇಶ್ ನಾಯಕನಾಗಿ ನಟಿಸುತ್ತಿರುವ ‘ರಾಮರಸ’ ಚಿತ್ರತಂಡದಿಂದ ಅದ್ದೂರಿಯಾಗಿ ನಾಗರಭಾವಿಯ ಜಿ ಅಕಾಡೆಮಿಯಲ್ಲಿ ಗಣೇಶನ ಪೂಜೆ ನೆರವೇರಿತು. ಬೆಳಗ್ಗೆ ಗಣಪತಿಯನ್ನು ತಂದು ವೈಭವವಾಗಿ ಪೂಜಿಸಲಾಯಿತು. ಆನಂತರ ಸಂಜೆ ಅಷ್ಟೇ ವೈಭವವಾಗಿ ವಿಸರ್ಜನೆಯನ್ನು ಮಾಡಲಾಯಿತು. ನಿರ್ಮಾಪಕ ಗುರು ದೇಶಪಾಂಡೆ, ನಿರ್ದೇಶಕ ಗಿರಿರಾಜ್, ನಾಯಕ ಕಾರ್ತಿಕ್ ಮಹೇಶ್ ಹಾಗೂ ಜಿ ಅಕಾಡೆಮಿಯಲ್ಲಿ ಅಭಿನಯ ಕಲಿತು ಈ ಚಿತ್ರದಲ್ಲಿ ನಟಿಸುತ್ತಿರುವ ಕಲಾವಿದರು ಪೂಜಾ ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಾವು…
ಕನ್ನಡ ಚಿತ್ರಮಂದಿರಗಳಿಗೆ ಪ್ರೇಕ್ಷಕರು ಬರುತ್ತಿಲ್ಲ ಎಂಬ ಮಾತನ್ನು ದೂರ ಮಾಡಿದ, ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣದ, ಶ್ರೀನಿವಾಸರಾಜು ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಚಿತ್ರ ಬಿಡುಗಡೆಯಾಗಿ ಇಪ್ಪತ್ತೈದು ದಿನಗಳಾಗಿದೆ. ಇಪ್ಪತ್ತೈದು ದಿನಗಳ ಕಾಲ ಯಶಸ್ವಿ ಪ್ರದರ್ಶನ ಕಂಡಿರುವ ಈ ಚಿತ್ರದ ಗೆಲುವಿನ ಓಟ ಈಗಲೂ ಮುಂದುವರೆದಿದೆ. ಈ ಸಂಭ್ರಮವನ್ನು ಸಂಭ್ರಮಿಸಲು ನಿರ್ಮಾಪಕರು ಪ್ರಸನ್ನ ಚಿತ್ರಮಂದಿರದಲ್ಲಿ ಸಮಾರಂಭ ಆಯೋಜಿಸಿದ್ದರು. ಚಿತ್ರದ ಗೆಲುವಿಗೆ ಕಾರಣರಾದ ಪ್ರತಿಯೊಬ್ಬರಿಗೂ ನೆನಪಿನ ಕಾಣಿಕೆ ನೀಡಿ ಗೌರವಿಸಿದರು….