ನಾಯಕ ಧನ್ವೀರ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ . ಪೋಸ್ಟರ್ ಬಿಡುಗಡೆ ಮಾಡಿ ಶುಭಕೋರಿದ “ಹಯಗ್ರೀವ” ಚಿತ್ರತಂಡ .

ನಾಯಕ ಧನ್ವೀರ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ . ಪೋಸ್ಟರ್ ಬಿಡುಗಡೆ ಮಾಡಿ ಶುಭಕೋರಿದ “ಹಯಗ್ರೀವ” ಚಿತ್ರತಂಡ .

ತಮ್ಮ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ನಾಯಕ ಧನ್ವೀರ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂಧರ್ಭದಲ್ಲಿ ಕೆ.ವಿ.ಸಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ರಘುಕುಮಾರ್ ಓ.ಆರ್ ನಿರ್ದೇಶನದಲ್ಲಿ ಧನ್ವೀರ್ ನಾಯಕರಾಗಿ ನಟಿಸುತ್ತಿರುವ “ಹಯಗ್ರೀವ” ಚಿತ್ರದ ಹೊಸ ಪೋಸ್ಟರ್ ಬಿಡುಗಡೆಯಾಗಿದೆ. ಈ ಮೂಲಕ ನಾಯಕ ಧನ್ವೀರ್ ಅವರಿಗೆ ಚಿತ್ರತಂಡ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ. ಧನ್ವೀರ್ ಅವರ “ಹಯಗ್ರೀವ” ಚಿತ್ರದ ಪಾತ್ರ ಏನಿರಬಹುದೆಂಬ ಕುತೂಹಲ ಅಭಿಮಾನಿಗಳಿಗಿತ್ತು. ಇಂದು ಬಿಡುಗಡೆಯಾಗಿರುವ ಪೋಸ್ಟರ್ ನಲ್ಲಿ ಧನ್ವೀರ್ ಖಡಕ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಧನ್ವೀರ್…

ಗಣ್ಯರ ಸಮ್ಮುಖದಲ್ಲಿ ಬಿಡುಗಡೆಯಾಯಿತು “ಗಾಂಗೇಯ” ಚಿತ್ರದ ಹಾಡುಗಳು .

ಗಣ್ಯರ ಸಮ್ಮುಖದಲ್ಲಿ ಬಿಡುಗಡೆಯಾಯಿತು “ಗಾಂಗೇಯ” ಚಿತ್ರದ ಹಾಡುಗಳು .

ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಏಕಕಾಲಕ್ಕೆ ‘ಗಾಂಗೇಯ’ ಸಿನೆಮಾ ತಯಾರಾಗುತ್ತಿದ್ದು, ಚಿತ್ರೀಕರಣ ಭರದಿಂದ ಸಾಗಿದೆ. ಇತ್ತೀಚಿಗೆ ನಡೆದ ಸಮಾರಂಭದಲ್ಲಿ ಸಿನೆಮಾದ ಹಾಡುಗಳನ್ನು ಬಿಡುಗಡೆ ಮಾಡಲಾಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಮಾಜಿ ಅಧ್ಯಕ್ಷರಾದ ಭಾ.ಮ.ಹರೀಶ್, ನರಸಿಂಹಲು ಖ್ಯಾತ ನಿರ್ದೇಶಕ ಪ್ರಶಾಂತ್ ನೀಲ್ ಅವರ ದೊಡ್ಡಪ್ಪ ಚೆಲುವಮೂರ್ತಿ ಮುಂತಾದ ಗಣ್ಯರು ಕನ್ನಡ ಅವತರಣಿಕೆಯ ಹಾಡುಗಳನ್ನು ಬಿಡುಗಡೆ ಮಾಡಿ ಶುಭಕೋರಿದರು. ತೆಲುಗು ಸಿನೆಮಾ ರಂಗದಲ್ಲಿ ಈಗಾಗಲೇ 10ಕ್ಕೂ ಹೆಚ್ಚು ಸಿನೆಮಾಗಳಲ್ಲಿ…

ಗಿರೀಶ್ ಕಾಸರವಳ್ಳಿಗೆ ವೆನಿಸ್ ಚಿತ್ರೋತ್ಸವದ ಗೌರವ.

ಗಿರೀಶ್ ಕಾಸರವಳ್ಳಿಗೆ ವೆನಿಸ್ ಚಿತ್ರೋತ್ಸವದ ಗೌರವ.

1978ರಲ್ಲಿ ಬಿಡುಗಡೆಯಾಗಿ ಕನ್ನಡದ ಹೊಸ ಅಲೆಯ ಚಿತ್ರಗಳಲ್ಲಿ ಹೊಸ ಸಂಚಲನ ಮೂಡಿಸಿ ಪ್ರೇಕ್ಷಕರಿಂದ ಹಾಗೂ ವಿಮರ್ಶಕರಿಂದ ಮೆಚ್ಚಿಗೆ ಪಡೆದಿದ್ದ ಚಿತ್ರ “ಘಟಶ್ರಾದ್ಧ”. ಆ ವರ್ಷ ರಾಷ್ಟ್ರ್ರ ಪ್ರಶಸ್ತಿ ಸ್ಪರ್ಧೆಯಲ್ಲಿದ್ದ ಘಟಾನುಘಟಿ ಚಿತ್ರನಿರ್ದೇಶಕರುಗಳಾದ ಸತ್ಯಜಿತ್ ರೇ, ಮೃಣಾಲ್ ಸೆನ್, ಶ್ಯಾಮ್ ಬೆನೆಗಲ್, ಅಡೂರ್ ಗೋಫಾಲಕೃಷ್ಣನ್, ಅರವಿಂದನ್, ಜಾನ್ ಅಬ್ರಹಾಂ, ಗಿರೀಶ್‌ ಕಾರ್ನಾಡ್ ಅವರ ಚಿತ್ರಗಳ ಜೊತೆ ಸ್ಪರ್ಧಿಸಿ ಸ್ವರ್ಣಪದಕ ಪಡೆದ ಈ ಚಿತ್ರ ಗಿರೀಶ್ ಕಾಸರವಳ್ಳಿಯವರ ಪ್ರಥಮ ಚಿತ್ರವೂ ಹೌದು. ಅವರಿಗೆ ಕೇವಲ 26 ವರ್ಷವಾಗಿದ್ದಾಗ ನಿರ್ದೇಶಿಸಿದ ಈ…

ಚಿತ್ರರಂಗಕ್ಕಿಂತ ರಂಗಭೂಮಿ ಸುರಕ್ಷಿತವಾಗಿದೆ.ʻಸಿಗ್ನಲ್‌ ಮ್ಯಾನ್‌ 1971ʼ ಹಾಡಿನ ಬಿಡುಗಡೆ ವೇಳೆ ಪ್ರಕಾಶ್‌ ಬೆಳವಾಡಿ, ಸನ್ಮಾನ್ಯ ಮಹಾರಾಜರು ಹಾಗೂ ಸಂಸದರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದ ಸಿಗ್ನಲ್ ಮ್ಯಾನ್ ಚಿತ್ರದ ಹಾಡಿನ ಲೋಕಾರ್ಪಣೆ .

ಇಂದಿನ ಕನ್ನಡ ಚಿತ್ರರಂಗಕ್ಕಿಂತಲೂ ರಂಗಭೂಮಿ ಚೆನ್ನಾಗಿದೆ, ಸುರಕ್ಷಿತವಾಗಿದೆ ಎಂದು ಹಿರಿಯ ನಟ, ಬರಹಗಾರ ಪ್ರಕಾಶ್‌ ಬೆಳವಾಡಿ ಅಭಿಪ್ರಾಯ ಪಟ್ಟರು.ನಗರದ ಖಾಸಗಿ ಹೋಟೆಲಿನಲ್ಲಿ ಆಯೋಜಿಸಿದ್ದ ʻಸಿಗ್ನಲ್‌ ಮ್ಯಾನ್‌ 1971ʼ ಚಿತ್ರದ ಹಾಡಿನ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಾ, ಕನ್ನಡ ಚಿತ್ರಗಳನ್ನು ನೋಡಲು ಪ್ರೇಕ್ಷಕ ಚಿತ್ರಮಂದಿರಕ್ಕೆ ಬರುತ್ತಿಲ್ಲ. ಆದರೆ ರಂಗಭೂಮಿಯಲ್ಲಿ ಇಂದಿಗೂ ನಮ್ಮ ಕೆಲಸಕ್ಕೆ ಬೇಕಾದ ಬೆಂಬಲ ಸಿಗುತ್ತಿದೆ, ಚಿತ್ರರಂಗದಲ್ಲೂ ಇಂತಹ ವಾತಾವರಣ ಮತ್ತೆ ಬೇಗ ಬರಲಿ ಎಂದು ಆಶಿಸಿದರು. ʻಸಿಗ್ನಲ್‌ ಮ್ಯಾನ್‌ 1971ʼ ಚಿತ್ರ ಭಾರತ-ಬಾಂಗ್ಲಾ ನಡುವಿನ ಯುದ್ಧದ…

“ನೆಪೋಲಿಯನ್” ಆಗಿ “ನಟ್ವರ್ ಲಾಲ್” ಆಗಮನ . ತನುಷ್ ಶಿವಣ್ಣ ಅಭಿನಯದ ಈ ಚಿತ್ರಕ್ಕೆ ಲವ ವಿ ನಿರ್ದೇಶನ .

“ನೆಪೋಲಿಯನ್” ಆಗಿ “ನಟ್ವರ್ ಲಾಲ್” ಆಗಮನ . ತನುಷ್ ಶಿವಣ್ಣ ಅಭಿನಯದ ಈ ಚಿತ್ರಕ್ಕೆ ಲವ ವಿ ನಿರ್ದೇಶನ .

ಇತ್ತೀಚೆಗೆ ತೆರೆಕಂಡ ತನುಷ್ ಶಿವಣ್ಣ ಅಭಿನಯದ “ನಟ್ವರ್ ಲಾಲ್” ಚಿತ್ರ ಜನಮನಸೂರೆಗೊಂಡಿತ್ತು. ಅಮೇಜಾನ್ ಪ್ರೈಮ್ ನಲ್ಲೂ ಈ ಚಿತ್ರವನ್ನು ಅಧಿಕ ಸಂಖ್ಯೆಯ ಜನರು ‌ವೀಕ್ಷಿಸುತ್ತಿದ್ದಾರೆ. ಈ ಖುಷಿಯ ಸಂದರ್ಭದಲ್ಲಿ ತನುಷ್ ಶಿವಣ್ಣ ನಾಯಕನಾಗಿ ನಟಿಸುತ್ತಿರುವ ಮತ್ತೊಂದು ಚಿತ್ರದ ಘೋಷಣೆಯಾಗಿದೆ. ಚಿತ್ರಕ್ಕೆ “ನೆಪೋಲಿಯನ್” ಎಂದು ಹೆಸರಿಡಲಾಗಿದೆ. ಸಂಕ್ರಾಂತಿ ಪ್ರೊಡಕ್ಷನ್ ಲಾಂಛನದಲ್ಲಿ ಅನಿಲ್ ಅವರು ನಿರ್ಮಿಸುತ್ತಿರುವ ಈ ಚಿತ್ರವನ್ನು “ನಟ್ವರ್ ಲಾಲ್” ಚಿತ್ರದ ನಿರ್ದೇಶಕ ಲವ ವಿ ಅವರೆ ನಿರ್ದೇಶಿಸುತ್ತಿದ್ದಾರೆ‌. “ವಿಕ್ರಾಂತ್ ರೋಣ” ಖ್ಯಾತಿಯ ವಿಲಿಯಂ ಡೇವಿಡ್ ಅವರ ಛಾಯಾಗ್ರಹಣ…

ಐದು ಭಾಷೆಗಳಲ್ಲಿ ಬರಲಿದೆ “1990 s” ಪ್ರೇಮಕಥೆ . ಏಕಕಾಲಕ್ಕೆ ಬಿಡುಗಡೆಯಾಯಿತು ನಾಲ್ಕು ಭಾಷೆಗಳ ಟೀಸರ್ .

ಐದು ಭಾಷೆಗಳಲ್ಲಿ ಬರಲಿದೆ “1990 s” ಪ್ರೇಮಕಥೆ . ಏಕಕಾಲಕ್ಕೆ ಬಿಡುಗಡೆಯಾಯಿತು ನಾಲ್ಕು ಭಾಷೆಗಳ ಟೀಸರ್ .

ಮನಸ್ಸು ಮಲ್ಲಿಗೆ ಕಂಬೈನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ನಂದಕುಮಾರ್ C M ನಿರ್ದೇಶಿಸಿರುವ ಹಾಗೂ ಅರುಣ್ – ರಾಣಿ ವರದ್ ಅಭಿನಯದ “1990s” ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಲಹರಿ ವೇಲು ಸೇರಿದಂತೆ ಅನೇಕ ಗಣ್ಯರು ನಾಲ್ಕು ಭಾಷೆಗಳ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದರು. ಹಿಂದಿ ಟೀಸರ್ ತಾಂತ್ರಿಕ ಕಾರಣದಿಂದ ಇಂದು ಬಿಡುಗಡೆಯಾಗಲಿಲ್ಲ. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ನಾನು ಇಪ್ಪತ್ತು ವರ್ಷಗಳಿಂದ ಚಿತ್ರರಂಗದಲ್ಲಿದ್ದೇನೆ. ನಿರ್ದೇಶಕನಾಗಿ ಇದು ಚೊಚ್ಚಲ ಚಿತ್ರ. ಈ ಚಿತ್ರ ಆಗಲು…

ಸಂಗೀತ ಕ್ಷೇತ್ರದಲ್ಲಿ ಅಜನೀಶ್‌ ಲೋಕನಾಥ್ ಹೊಸ ಹೆಜ್ಜೆ; 50 ಚಿತ್ರಗಳಿಗೆ ಸಂಗೀತ ನಿರ್ದೇಶನ

ಸಂಗೀತ ಕ್ಷೇತ್ರದಲ್ಲಿ ಅಜನೀಶ್‌ ಲೋಕನಾಥ್ ಹೊಸ ಹೆಜ್ಜೆ; 50 ಚಿತ್ರಗಳಿಗೆ ಸಂಗೀತ ನಿರ್ದೇಶನ

ಸ್ಯಾಂಡಲ್‌ವುಡ್‌ನ ಖ್ಯಾತ ಸಂಗೀತ ನಿರ್ದೇಶಕ, ಸಾಲು ಸಾಲು ಹಿಟ್‌ ಹಾಡುಗಳ ಮೂಲಕ ಸಂಗೀತ ಪ್ರಿಯರ ಗಮನ ಸೆಳೆದವರು ಕನ್ನಡದ ಅಜನೀಶ್‌ ಲೋಕನಾಥ್.‌ ಇದೀಗ ಇದೇ ಅಜನೀಶ್‌ ತಮ್ಮ ವೃತ್ತಿ ಜೀವನದ ಪ್ರಮುಖ ಘಟ್ಟ ತಲುಪಿದ್ದಾರೆ. ಚಿತ್ರೋದ್ಯಮಕ್ಕೆ ಬಂದು 21 ವರ್ಷಗಳಾದರೂ, ಸ್ವತಂತ್ರ ನಿರ್ದೇಶಕರಾಗಿ ಚಿತ್ರೋದ್ಯಮದಲ್ಲಿ ಸುದೀರ್ಘ ಒಂದು ದಶಕಕ್ಕೂ ಹೆಚ್ಚು ಕಾಲದಿಂದ ಇದ್ದಾರೆ. ಇದೀಗ ಇದೇ ಸಂಗೀತ ನಿರ್ದೇಶಕರು ತಮ್ಮ ಕೆರಿಯರ್‌ನಲ್ಲಿ 50 ಸಿನಿಮಾಗಳಿಗೆ ಸಂಗೀತ ನೀಡಿದ ಗುರಿ ತಲುಪಿದ್ದಾರೆ. ಹೀಗಿರುವಾಗಲೇ 2022ರಲ್ಲಿನ ಕಾಂತಾರ ಸಿನಿಮಾ ಅಜನೀಶ್‌…

ಲಾಫಿಂಗ್ ಬುದ್ಧ ಚಿತ್ರದ ಯಶಸ್ಸಿನ ಬೆನ್ನಲ್ಲೇ ಮತ್ತೊಂದು ಚಿತ್ರದ ಅಪ್ಡೇಟ್ ಕೊಟ್ಟ ಪ್ರಮೋದ್ ಶೆಟ್ಟಿ.

ಲಾಫಿಂಗ್ ಬುದ್ಧ ಚಿತ್ರದ ಯಶಸ್ಸಿನ ಬೆನ್ನಲ್ಲೇ ಮತ್ತೊಂದು ಚಿತ್ರದ ಅಪ್ಡೇಟ್ ಕೊಟ್ಟ ಪ್ರಮೋದ್ ಶೆಟ್ಟಿ.

ಅವರ ಹುಟ್ಟುಹಬ್ಬದ ಪ್ರಯುಕ್ತ ಕಾರಿಕಾನು ಗುಡ್ಡದ ಮೇಲೊಂದು ಅಧಿಕಪ್ರಸಂಗ ಚಿತ್ರತಂಡ ಹುಟ್ಟುಹಬ್ಬಕ್ಕೆ ಶುಭ ಕೋರುತ್ತಾ ಪೋಸ್ಟರ್ ಒಂದನ್ನು ರಿಲೀಸ್ ಮಾಡಿದೆ, TEASER COMMING SOON ಅಂತ ಕೂಡ ಅನೌನ್ಸ್ ಮಾಡಿದ್ದಾರೆ. *ವಡ್ಡಾರಾಧಕ , ಶಬರಿಯಂತಹ ಕಿರುಚಿತ್ರಗಳಿಂದ ತಮ್ಮೂರಿನ ಕಥೆಗಳು ಎಲ್ಲಾ ಊರುಗಳಲ್ಲೂ ತಲುಪಬೇಕೆಂಬ ಆಶಯವುಳ್ಳ ಅನೀಶ್ ಎಸ್ ಶರ್ಮಾ ಈ ಸಿನಿಮಾದ ಮುಂದಾಳತ್ವ ವಹಿಸಿದ್ದಾರೆ. ಚಿತ್ತರಂಜನ್ ಕಶ್ಯಪ್, ವಲ್ಲಭ ಸೂರಿ ಮತ್ತು ಸುನೀತ್ ಹಲಗೇರಿ ತಮ್ಮ ಸಂಸ್ಥೆ Gunnybag Studios ಮೂಲಕ ಹೊಸ ಹೊಸ ಪ್ರಯೋಗಗಳನ್ನು ತಮ್ಮ…

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಸೇರಿದಂತೆ ಹಲವು ಗಣ್ಯರ ಉಪಸ್ಥಿತಿಯಲ್ಲಿ ಬಿಡುಗಡೆಯಾಯಿತು “ಕೋಟಿ ಕೋಟಿ ರೊಕ್ಕ ಗಳಿಸಿ” ಹಾಡು . ಹೂಡಿ ಚಿನ್ನಿ ಅವರ ಕಂಠಸಿರಿಯಲ್ಲಿ ಮೂಡಿಬಂದಿದೆ ಮಂಜುಕವಿ ಬರೆದಿರವ ಈ ಗೀತೆ .

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಸೇರಿದಂತೆ ಹಲವು ಗಣ್ಯರ ಉಪಸ್ಥಿತಿಯಲ್ಲಿ ಬಿಡುಗಡೆಯಾಯಿತು “ಕೋಟಿ ಕೋಟಿ ರೊಕ್ಕ ಗಳಿಸಿ” ಹಾಡು . ಹೂಡಿ ಚಿನ್ನಿ ಅವರ ಕಂಠಸಿರಿಯಲ್ಲಿ ಮೂಡಿಬಂದಿದೆ ಮಂಜುಕವಿ ಬರೆದಿರವ ಈ ಗೀತೆ .

ತಮ್ಮ ಸಾಮಾಜಿಕ ಕಾರ್ಯಗಳ ಮೂಲಕ ಜನಪ್ರಿಯರಾಗಿರುವ ಹಾಗೂ ಭಾರತೀಯರ ಸೇವಾ ಸಮಿತಿ ಸ್ಥಾಪಕರೂ ಆಗಿರುವ ಹೆಚ್ ಎಂ ರಾಮಚಂದ್ರ (ಹೂಡಿ ಚಿನ್ನಿ) ಅವರು ಈಗ ಗಾಯಕರಾಗಿದ್ದಾರೆ‌. ಮಂಜುಕವಿ ಅವರು ಬರೆದು ಸಂಗೀತ ನೀಡಿರುವ ಸಾಮಾಜಿಕ ಸಂದೇಶ ಸಾರುವ “ಕೋಟಿ ಕೋಟಿ ರೊಕ್ಕ ಗಳಿಸಿ” ಹಾಡಿಗೆ ಧ್ವನಿಯಾಗಿದ್ದಾರೆ. ಇತ್ತೀಚೆಗೆ ಈ ಹಾಡು ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಶ್ರೀಮಹದೇವ ಸ್ವಾಮಿಜಿ, ವೃಕ್ಷಮಾತೆ ಸಾಲುಮರದ ತಿಮ್ಮಕ್ಕ, ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗಡೆ, ಚೇತನ್ ಅಹಿಂಸ, ನಿರ್ದೇಶಕ ಋಷಿ, ಭಾರತೀಯ ಸೇವಾ…

ರೆಟ್ರೋ ಸ್ಟೈಲ್’ನಲ್ಲಿ ಮೂಡಿ ಬಂದ “ಹೇಳು ಗೆಳತಿ”. ಚರಣ್‌ರಾಜ್ ಕಂಠಸಿರಿಗೆ ಕೇಳುಗರು ಫಿದಾ

ರೆಟ್ರೋ ಸ್ಟೈಲ್’ನಲ್ಲಿ ಮೂಡಿ ಬಂದ “ಹೇಳು ಗೆಳತಿ”. ಚರಣ್‌ರಾಜ್ ಕಂಠಸಿರಿಗೆ ಕೇಳುಗರು ಫಿದಾ

ವಿಹಾನ್, ಅಂಕಿತಾ ಅಮರ್ ಪ್ರಮುಖ ಭೂಮಿಕೆಯಲ್ಲಿರುವ ಇಬ್ಬನಿ ತಬ್ಬಿದ ಇಳೆಯಲಿ ಸಿನಿಮಾದ ಮತ್ತೊಂದು ಹಾಡು ಬಿಡುಗಡೆಯಾಗಿದೆ. ಚಂದ್ರಜಿತ್ ಬೆಳಿಯಪ್ಪ ನಿರ್ದೇಶನವಿರುವ ಈ ಸಿನಿಮಾದ ‘ಹೇಳು ಗೆಳತಿ’ ಎಂಬ ಮೆಲೋಡಿ ಹಾಡನ್ನು ಇತ್ತೀಚೆಗಷ್ಟೇ ಬಿಡುಗಡೆ ಮಾಡಿದೆ ಚಿತ್ರತಂಡ. ಈ ಹಿಂದೆ ಹರಿಬಿಟ್ಟಿದ್ದ ಹಾಡುಗಳಿಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿತ್ತು. ಇದೀಗ ‘ಹೇಳು ಗೆಳತಿ’ ಹಾಡಿಗೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂಬುದು ತಂಡದ ಅನಿಸಿಕೆ. ರೆಟ್ರೋ ಹಿನ್ನೆಲೆಯಲ್ಲಿ ಮೂಡಿ ಬಂದಿರುವ ಈ ಮಾಧುರ್ಯಭರಿತ ಗೀತೆಯನ್ನು ಪರವಃ ಮ್ಯೂಸಿಕ್ ಯೂಟ್ಯೂಬ್ ಚಾನಲ್‌ನಲ್ಲಿ ಬಿಡುಗಡೆ…