ಆಯೂಷ್ ಟಿವಿ ಹಾಗೂ ಸಿರಿಕನ್ನಡ ವಾಹಿನಿಯಲ್ಲಿ “ಫಿಟ್‌ ಬಾಸ್‌” ಮೊಟ್ಟ ಮೊದಲ ಆರೋಗ್ಯದ ಕುರಿತಾದ ರಿಯಾಲಿಟ್‌ ಶೋ

ಆಯುಷ್‌ ಟಿ.ವಿ ಕಳೆದ 7 ವರ್ಷಗಳಿಂದ ಆರೋಗ್ಯಕರ ಜೀವನ ಶೈಲಿಗಾಗಿ ಎಂಬ ಧ್ಯೇಯದೊಂದಿಗೆ ವೈವಿಧ್ಯಮಯ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸುವ ಮೂಲಕ ಪ್ರೇಕ್ಷಕರ ಮನ್ನಣೆಗಳಿಸಿರುವ ಏಕೈಕ ಆರೋಗ್ಯದ ಕುರಿತಾದ ವಾಹಿನಿಯಾಗಿದ್ದು, ಪ್ರಸ್ತುತ ಕರ್ನಾಟಕದ ಜನಪ್ರಿಯ ಮನೋರಂಜನಾ ವಾಹಿನಿ ಸಿರಿಕನ್ನಡ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಕೇಂದ್ರ (ಕ್ಷೇಮವನ) ಇವರ ಸಹಭಾಗಿತ್ವದಲ್ಲಿ ಆಯೋಜಿಸಿರುವ ವಿಶ್ವದ ಮೊಟ್ಟಮೊದಲ ಆರೋಗ್ಯದ ಕುರಿತಾದ ರಿಯಾಲಿಟಿ ಶೋ “ಫಿಟ್‌ ಬಾಸ್‌”.

“ಫಿಟ್ ಬಾಸ್” ರಿಯಾಲಿಟಿ ಶೋ ಕುರಿತು ಹೆಚ್ಚಿನ ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು.

ಮನುಷ್ಯನಿಗೆ ಎಲ್ಲದಕ್ಕಿಂತ ಆರೋಗ್ಯವೇ ಹೆಚ್ಚು ಎಂಬ ಧ್ಯೇಯದಿಂದ ನಮ್ಮ ಆಯೂಷ್ ಟಿವಿ ಕಳೆದ ಏಳು ವರ್ಷಗಳಿಂದ ಆರೋಗ್ಯದ ವಿವಿಧ ಕಾರ್ಯಕ್ರಮಗಳನ್ನು ಪ್ರಸಾರ ಮಾಡುತ್ತಿದೆ. ಇದೇ ಮೊದಲ ಬಾರಿಗೆ ಸ್ಥೂಲಕಾಯದವರಿಗಾಗಿ(ಹೆಚ್ಚು ದಪ್ಪ) “ಫಿಟ್ ಬಾಸ್” ಎಂಬ ರಿಯಾಲಿಟಿ ಶೋ ಆರಂಭಿಸಲಾಗಿದೆ. ನಮ್ಮೊಂದಿಗೆ ಸಿರಿಕನ್ನಡ ವಾಹಿನಿ‌ ಹಾಗೂ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಕೇಂದ್ರ(ಕ್ಷೇಮವನ) ಕೈ ಜೋಡಿಸಿದೆ ಎಂದು ಆಯೂಷ್ ಟಿವಿ‌ ವೈಸ್ ಚೇರ್ಮನ್ ಅರುಣಾಚಲಂ ತಿಳಿಸಿದರು

ಕಳೆದ ಕೆಲವು ವರ್ಷಗಳಿಂದ ನಮ್ಮ ಸಿರಿಕನ್ನಡ ವಾಹಿನಿ ಹಲವು ಜನಪ್ರಿಯ ಕಾರ್ಯಕ್ರಮಗಳ ಮೂಲಕ ಜನರ ಮೆಚ್ಚುಗೆ ಪಡೆದಿದೆ. ಪ್ರಸ್ತುತ ಆಯೂಷ್ ಟಿವಿಯ “ಫಿಟ್ ಬಾಸ್” ರಿಯಾಲಿಟಿ ಶೋ ಜೊತೆಗೆ ಸಿರಿಕನ್ನಡ ವಾಹಿನಿ ಕೈ ಜೋಡಿಸಿದೆ. ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಈ ರಿಯಾಲಿಟಿ ಶೋ ಅಕ್ಟೋಬರ್ 16 ರಿಂದ ಸೋಮವಾರದಿಂದ ಶುಕ್ರವಾರದವರೆಗೂ ಆಯೂಷ್ ಟಿವಿ ಸಂಜೆ 7 ಕ್ಕೆ ಹಾಗೂ ಸಿರಿಕನ್ನಡ ವಾಹಿನಿಯಲ್ಲಿ ರಾತ್ರಿ 8 ಕ್ಕೆ ಪ್ರಸಾರವಾಗಲಿದೆ ಎಂದರು ಸಿರಿಕನ್ನಡ ವಾಹಿನಿ ಸಂಸ್ಥಾಪಕ ನಿರ್ದೇಶಕ ಸಂಜಯ್ ಶಿಂಧೆ.

ಈ ರಿಯಾಲಿಟಿ ಶೋ‌ ನ ಆಡಿಷನ್ ನಲ್ಲಿ ಸುಮಾರು 2000 ಜನ ಪಾಲ್ಗೊಂಡಿದ್ದರು.
ಅದರಲ್ಲಿ ಸುಮಾರು 100 ಕೆಜಿ ಗಿಂತ ಹೆಚ್ಚು ತೂಕವಿರುವ 21 ಜನರನ್ನು ಆಯ್ಕೆ ಮಾಡಿಕೊಳ್ಳಲಾಯಿತು.
ಇಪ್ಪತ್ತೊಂದು ದಿನ ,ತಮ್ಮ ದೇಹದ ಅತಿಯಾದ ತೂಕವನ್ನು ಕಡಿಮೆ ಮಾಡಲು ಇಲ್ಲಿ ಪಾಲ್ಗೊಂಡಿದ್ದು ವಿಶೇಷ, ತಮ್ಮ ಆರೋಗ್ಯದ ಸಮಸ್ಯೆಗಳನ್ನು ವೈಜ್ಞಾನಿಕವಾಗಿ ಕ್ಯೂರ್‌ ಮಾಡಿಕೊಳ್ಳುವುದರ ಜೊತೆಗೆ ಆಟ, ಮೋಜು, ಮಸ್ತಿ, ಮತ್ತು ಸ್ನೇಹ ಸಂಬಂಧಗಳ ಮೌಲ್ಯಗಳನ್ನು ಈ ರಿಯಾಲಿಟಿ ಶೋ ನಲ್ಲಿ ಕಲಿತಿದ್ದಾರೆ. ಗೋಲ್ಡನ್ ಸ್ಟಾರ್ ಗಣೇಶ್, ಅಮೂಲ್ಯ, ರೂಪಿಕಾ, ನಿರೂಪಕ ಮುರಳಿ, ಆರ್ಯನ್ ಶಾಮ್ ಮುಂತಾದ ಗಣ್ಯರು ಗ್ರ್ಯಾಂಡ್ ಫಿನಾಲೆಗೆ ಆಗಮಿಸಿ ಸ್ಪರ್ಧಿಗಳಿಗೆ ಶುಭ ಕೋರಿದ್ದಾರೆ. ಗೆದ್ದ ಸ್ಪರ್ಧಿಗೆ 5 ಲಕ್ಷ ರೂಪಾಯಿ ಬಹುಮಾನ ನೀಡಲಾಗಿದೆ ಎಂದು “ಫಿಟ್ ಬಾಸ್” ರಿಯಾಲಿಟಿ ಶೋ‌ ನಿರ್ದೇಶಕ ಬಾಲಕೃಷ್ಣ ತಿಳಿಸಿದರು.

21 ದಿನಗಳಕಾಲ ಪ್ರತಿ ದಿನ ಮುಂಜಾನೆ 5 ರಿಂದ ಯೋಗದೊಂದಿಗೆ ಸಾಧಕರ ದಿನಚರಿ ಪ್ರಾರಂಭವಾದರೆ ಕ್ರಮೇಣ ವಿವಿಧ ನ್ಯಾಚುರೋಪತಿ ಚಿಕಿತ್ಸೆಗಳು ಹಾಗೂ ಹಲವು ಮನೋರಂಜನಾ ಕಾರ್ಯಕ್ರಮಗಳು ಸ್ಪರ್ಧಿಗಳನ್ನು ಕ್ರಿಯಾಶೀಲರನ್ನಾಗಿಸಿರುವಂತೆ ಮಾಡಿದ್ದವು ಎಂಬ ಮಾಹಿತಿಯನ್ನು “ಕ್ಷೇಮವನ”ದ ಮುಖ್ಯ ಕ್ಷೇಮಾಧಿಕಾರಿ ಡಾ||ನರೇಂದ್ರ ಶೆಟ್ಟಿ ನೀಡಿದರು.

” ಫಿಟ್ ಬಾಸ್” ರಿಯಾಲಿಟಿ ಶೋ ನ ಆರಂಭದ ದಿನ ಹಾಗೂ ಫಿನಾಲೆ ದಿನ ನಿರೂಪಕನಾಗಿ ಕೆಲಸ ಮಾಡಿದ್ದು ಖುಷಿಯಾಗಿದೆ.‌ ಇಂತಹ ಕಾರ್ಯಕ್ರಮಗಳನ್ನು ಎಲ್ಲರೂ ನೋಡಬೇಕೆಂದರು ಪ್ರಶಾಂತ್ ಸಂಬರ್ಗಿ.

“ಫಿಟ್ ಬಾಸ್” ಕಾರ್ಯಕ್ರಮದ ಬಗ್ಗೆ ಆಯೂಷ್ ಟಿವಿಯ ದಿವ್ಯ ಅವರು ಮಾತನಾಡಿದರು

ಹರಿಕೃಷ್ಣ, ವ್ಯವಸ್ಥಾಪಕ ನಿರ್ದೇಶಕರು ಆಯುಷ್‌ ಟಿ ವಿ,
ಸಂಜಯ್‌ ಶಿಂಧೆ, ಸಂಸ್ಥಾಪಕ ನಿರ್ದೇಶಕರು ಸಿರಿ ಕನ್ನಡ ವಾಹಿನಿ
ಪ್ರಶಾಂತ್‌ ಸಂಬರ್ಗಿ, ಕಲಾವಿದರು ಹಾಗೂ ಫಿಟ್‌ ಬಾಸ್‌ ಗ್ರ್ಯಾಂಡ್‌ ಫಿನಾಲೆ ನಿರೂಪಕರು
ಬಾಲಕೃಷ್ಣ, ಫಿಟ್‌ ಬಾಸ್‌ ರಿಯಾಲಿಟಿ ಷೋ ನಿರ್ದೇಶಕರು
ಅರುಣಾಚಲಂ , ವೈಸ್‌ ಚೇರ್ಮನ್‌ ಆಯುಷ್‌ ಟಿವಿ
ಅರವಿಂದ್‌ ಎನ್.ಜೆ , ಪವನ್ ಕುಮಾರ್‌ , ವಿನಾಯಕ್‌ ಪೈ , ದಿವ್ಯ(ಆಯೂಷ್ ಟಿವಿ), ರಾಜೇಶ್‌ ರಾಜಘಟ್ಟ ಮುಖ್ಯಸ್ಥರು , ಸಿರಿ ಕನ್ನಡ ವಾಹಿನಿ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Similar Posts

0 0 votes
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments