.ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಂದ ಬಿಡುಗಡೆಯಾಗಲಿದೆ “ಗರಡಿ” ಚಿತ್ರದ ಟ್ರೇಲರ್ . ನವೆಂಬರ್ 1 ರಂದು ನಡೆಯಲಿರುವ ವರ್ಣರಂಜಿತ ಸಮಾರಂಭಕ್ಕೆ ಸಜ್ಜಾಗುತ್ತಿದೆ ರಾಣಿಬೆನ್ನೂರು .

ಬಿ.ಸಿ.ಪಾಟೀಲ್ ನಿರ್ಮಾಣದ, ಯೋಗರಾಜ್ ಭಟ್ ನಿರ್ದೇಶನದ ಬಹು ನಿರೀಕ್ಷಿತ “ಗರಡಿ” ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ನವೆಂಬರ್ 1 ರ ಕನ್ನಡ ರಾಜ್ಯೋತ್ಸವದಂದು ಸಂಜೆ 6.30ಕ್ಕೆ ರಾಣಿಬೆನ್ನೂರಿನ ಮುನ್ಸಿಪಲ್ ಗ್ರೌಂಡ್ ನಲ್ಲಿ ನಡೆಯಲಿದೆ. ಈಗಾಗಲೇ ಸಮಾರಂಭಕ್ಕೆ ಅದ್ದೂರಿ ತಯಾರಿ ನಡೆಯುತ್ತಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಟ್ರೇಲರ್ ಬಿಡುಗಡೆ ಮಾಡಲಿದ್ದಾರೆ‌. ದರ್ಶನ್ ಅವರು ಈ ಚಿತ್ರದ ಪ್ರಮುಖಪಾತ್ರದಲ್ಲೂ ನಟಿಸಿದ್ದಾರೆ. ಇತ್ತೀಚಿಗೆ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯಾವುದೇ ಕಟ್ಸ್ ಇಲ್ಲದೆ ಯು/ಎ ಅರ್ಹತಾಪತ್ರ ನೀಡಿದೆ‌. “ಗರಡಿ” ನವೆಂಬರ್ 10 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಸೌಮ್ಯ ಫಿಲಂಸ್ ಹಾಗೂ ಕೌರವ ಪ್ರೊಡಕ್ಷನ್ ಹೌಸ್ ಲಾಂಛನದಲ್ಲಿ ವನಜಾ ಪಾಟೀಲ್ ನಿರ್ಮಿಸಿರುವ ಈ ಚಿತ್ರಕ್ಕೆ ವಿ.ಹರಿಕೃಷ್ಣ ಸಂಗೀತ ನೀಡಿದ್ದಾರೆ. ನಿರಂಜನ್ ಬಾಬು ಛಾಯಾಗ್ರಹಣ ಹಾಗೂ ಸುರೇಶ್ ಅರಸ್ ಅವರ ಸಂಕಲನವಿರುವ “ಗರಡಿ” ಚಿತ್ರದ ಕಾರ್ಯಕಾರಿ ನಿರ್ಮಾಪಕರು ಸೃಷ್ಟಿ ಪಾಟೀಲ್.

ಸೂರ್ಯ ನಾಯಕರಾಗಿ ನಟಿಸಿದ್ದಾರೆ. ಬಿ.ಸಿ.ಪಾಟೀಲ್, ಸೋನಾಲ್ ಮೊಂತೆರೊ, ರವಿಶಂಕರ್, ಧರ್ಮಣ್ಣ, ಸುಜಯ್ ಬೇಲೂರ್, ರಾಘವೇಂದ್ರ, ಚೆಲುವರಾಜ್, ಬಲ ರಾಜವಾಡಿ, ತೇಜಸ್ವಿನಿ ಪ್ರಕಾಶ್, ನಯನ ಮುಂತಾದವರು “ಗರಡಿ” ಚಿತ್ರದ ತಾರಾಬಳಗದಲ್ಲಿದ್ದಾರೆ. ನಿಶ್ವಿಕಾ ನಾಯ್ಡು ಹಾಡೊಂದಕ್ಕೆ ಹೆಜ್ಜೆ ಹಾಕಿದ್ದಾರೆ.

Similar Posts

  • ಸದ್ಯದಲ್ಲೇ ನಿಮ್ಮ ಮುಂದೆ “ವಿಕಾಸ ಪರ್ವ” .

    ಕನ್ನಡ ಚಿತ್ರರಂಗದಲ್ಲೀಗ ಉತ್ತಮ ಕಂಟೆಂಟ್ ಚಿತ್ರಗಳು ಯಶಸ್ವಿಯಾಗುತ್ತಿದೆ‌. ಅಂತಹ ಉತ್ತಮ ಕಂಟೆಂಟ್ ನೊಂದಿಗೆ ಬರುತ್ತಿರುವ “ವಿಕಾಸ ಪರ್ವ” ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಅರ್ಹತಾಪತ್ರವನ್ನು ನೀಡಿದೆ. ಚಿತ್ರ ಸದ್ಯದಲ್ಲೇ ರಾಜ್ಯಾದ್ಯಂತ ತೆರೆ ಕಾಣಲಿದೆ. “ವಿಕಾಸ ಪರ್ವ” ಸಾಮಾಜಿಕ ಕಳಕಳಿಯುಳ್ಳ ಚಿತ್ರ. ಉತ್ತಮ ಸಂದೇಶವುಳ್ಳ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ಕಿರುತೆರೆಯಲ್ಲಿ ತಮ್ಮದೇ ಆದ ಚಾಪು ಮೂಡಿಸಿರುವ ರೋಹಿತ್ ನಾಗೇಶ್ ಅಭಿನಯಿಸಿದ್ದಾರೆ. ಸ್ವಾತಿ, ನಿಶಿತಾ ಗೌಡ, ಅಶ್ವಿನ್ ಹಾಸನ್, ಬಾಲ ರಾಜವಾಡಿ, ಕುರಿ ರಂಗ, ಸಮೀರ್…

  • ಉದಯ ಟಿವಿ ಮುಖ್ಯಸ್ಥ ಸೆಲ್ವಂ ನಿಧನ.

    ಜನಪ್ರಿಯ ಉದಯ ಟಿವಿ ಮುಖ್ಯಸ್ಥರಾದ ಸೆಲ್ವಂ ಅವರು ಇಂದು ಬೆಳಗ್ಗೆ ಬೆಂಗಳೂರಿನ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರಿಗೆ 84 ವರ್ಷ ವಯಸ್ಸಾಗಿತ್ತು. ನಾಳೆ ಚೆನೈನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ. Whatsapp Kooapp Facebook Messenger Twitter Copy

  • ಗೊಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಕೃಷ್ಣಂ ಪ್ರಣಯ ಸಖಿ” ಚಿತ್ರಕ್ಕೆ ಶತದಿನದ ಸಂಭ್ರಮ .

    ತ್ರಿಶೂಲ್ ಎಂಟರ್ ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ಅವರು ನಿರ್ಮಿಸಿರುವ, ಖ್ಯಾತ ನಿರ್ದೇಶಕ ಶ್ರೀನಿವಾಸರಾಜು ಅವರ ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಚಿತ್ರ ತೆರೆಕಂಡು ನೂರು ದಿನಗಳಾಗಿದೆ. ಪ್ರೇಕ್ಷಕರು ಚಿತ್ರಮಂದಿರಕ್ಕೆ ಬರುತ್ತಿರುವುದೇ ವಿರಳವಾಗಿರುವ ಈ ಸಂದರ್ಭದಲ್ಲಿ ಕನ್ನಡ ಚಿತ್ರವೊಂದು ನೂರುದಿನಗಳ ಪ್ರದರ್ಶನ ಕಂಡಿರುವುದು ನಿಜಕ್ಕೂ ಸಂತಸದ ವಿಚಾರ. ಕರ್ನಾಟಕದ ನಾಲ್ಕು ಕಡೆ ಈ ಚಿತ್ರ ನೂರುದಿನಗಳ ಪ್ರದರ್ಶನ ಕಂಡಿದೆ. ಈಗಲೂ ಪ್ರದರ್ಶನವಾಗುತ್ತಿದೆ. ಚಿತ್ರವನ್ನು ಯಶಸ್ವಿ ಮಾಡಿದ ಕನ್ನಡ ಕಲಾಭಿಮಾನಿಗಳಿಗೆ…

  • ಸೆನ್ಸಾರ್ ಪಾಸಾದ ರವಿಕೆ ಪ್ರಸಂಗ.

    ಮಂಗಳೂರು: ದೃಷ್ಟಿ ಮೀಡಿಯಾ ಪ್ರೊಡಕ್ಷನ್ ನಡಿ ತಯಾರಾದ ಸಂತೋಷ್ ಕೊಡೆಂಕೇರಿ ನಿರ್ದೇಶನದ ರವಿಕೆ ಪ್ರಸಂಗ ಸಿನಿಮಾವನ್ನು ಸೆನ್ಸಾರ್ ಮಂಡಳಿ ವೀಕ್ಷಿಸಿ ಯು-ಎ ಸರ್ಟಿಫಿಕೇಟ್ ನೀಡಿದೆ.ರವಿಕೆ ಪ್ರಸಂಗ ಸಿನಿಮಾದ ಟ್ರೈಲರ್ ಈಗಾಗಲೇ ಬಿಡುಗಡೆಗೊಂಡು ಜನರಿಂದ ಮೆಚ್ಚುಗೆ ಗಳಿಸಿದೆ. ಸಿನಿಮಾ ಫೆಬ್ರವರಿ 16 ರಂದು ರಾಜ್ಯಾದ್ಯಂತ ತೆರೆಕಾಣಲಿದೆ.ಕನ್ನಡದಲ್ಲಿ ಭಿನ್ನ-ವಿಭಿನ್ನ ಟೈಟಲ್‌ಗಳನ್ನಿಟ್ಟುಕೊಂಡು ಸಿನಿಮಾಗಳು ಬರುತ್ತಿವೆ. ಈ ಸಾಲಿಗೆ ಸೇರುವ ಸಿನಿಮಾ ‘ರವಿಕೆ ಪ್ರಸಂಗ’. ಈಗಾಗಲೇ ಚಿತ್ರೀಕರಣ ಮುಗಿಸಿರುವ ಈ ಸಿನಿಮಾದ ಟೀಸ‌ರ್ ಮತ್ತು ಟ್ರೈಲರ್ ಬಿಡುಗಡೆಯಾಗಿ ಮೆಚ್ಚುಗೆ ಪಡೆದಿತ್ತು. ರವಿಕೆ ಅಂದರೆ…

  • ನವೆಂಬರ್ 14 ರಂದು ಮಕ್ಕಳ ದಿನಾಚರಣೆಯ ದಿನ ತೆರೆಗೆ ಬರಲಿದೆ “ಪಾಠಶಾಲಾ” .

    ಅರಣ್ಯ ನಾಶ, ಅದರ ಉಳಿವು ಮತ್ತು ಮಕ್ಕಳ‌ ಬಾಲ್ಯ ಸೇರಿದಂತೆ ಸೂಕ್ಷ್ಮ‌ ವಿಚಾರಗಳ ಕುರಿತಾದ ಕಥಾಹಂದರ ಹೊಂದಿರುವ “ಪಾಠಶಾಲಾ” ಚಿತ್ರ ನವೆಂಬರ್ 14 ರಂದು ತೆರೆಗೆ ಬರಲು ಸಜ್ಜಾಗಿದೆ. ಇತ್ತೀಚೆಗೆ ಚಿತ್ರದ ಕುರಿತು ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. ಚಿತ್ರತಂಡದವರು “ಪಾಠಶಾಲಾ” ಕುರಿತು ಮಾತನಾಡಿದರು. “ಪಾಠಶಾಲಾ” ಎನ್ನುವ ಹೆಸರು ಇದೆ ಎಂದ ಮಾತ್ರಕ್ಕೆ ಇದು ಮಕ್ಕಳ ಚಿತ್ರ ಅಲ್ಲ‌ ಎಂದು ಮಾತನಾಡಿದ ನಿರ್ದೇಶಕ ಹೆದ್ದೂರು ಮಂಜುನಾಥ ಶೆಟ್ಟಿ, ಈಗಿನ ಶಿಕ್ಷಣ 80 ರ ದಶಕದಲ್ಲಿ ಇದ್ದ ಹಾಗೆ…

  • ಅಭಿಮಾನಿಗಳಿಂದ “ಘೋಸ್ಟ್” ಚಿತ್ರಕ್ಕೆ ಹಾಡಿನ ಉಡುಗೊರೆ. .

    ಪ್ರತಿಷ್ಠಿತ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಂದೇಶ್ ನಾಗರಾಜ್ ಅವರು ಅರ್ಪಿಸುವ, ಸಂದೇಶ್ ಎನ್ ನಿರ್ಮಾಣದ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಘೋಸ್ಟ್” ಚಿತ್ರ ಇದೇ ಅಕ್ಟೋಬರ್ 19 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ‌ಈ ಚಿತ್ರದ ಮತ್ತೊಂದು ವಿಶೇಷವೆಂದರೆ ಅಖಿಲ ಕರ್ನಾಟಕ ಡಾ||ಶಿವರಾಜಕುಮಾರ್ ಅಭಿಮಾನಿಗಳ ಸಂಘದವರು ಹಾಡೊಂದನ್ನು ಸಿದ್ದಪಡಿಸಿ “ಘೋಸ್ಟ್” ಚಿತ್ರಕ್ಕೆ ಉಡುಗೊರೆಯಾಗಿ ನೀಡಿದ್ದಾರೆ. ಈ ರೀತಿ ಅಭಿಮಾನಿಗಳು ಚಿತ್ರವೊಂದಕ್ಕೆ ಹಾಡಿನ ಉಡುಗೊರೆ ನೀಡಿರುವುದು ಇದೇ ಮೊದಲು. ಅಭಿಮಾನಿಗಳು ಅಭಿಮಾನದಿಂದ…

0 0 votes
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments