ಗೊಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಕೃಷ್ಣಂ ಪ್ರಣಯ ಸಖಿ” ಚಿತ್ರಕ್ಕೆ ಶತದಿನದ ಸಂಭ್ರಮ .

ತ್ರಿಶೂಲ್ ಎಂಟರ್ ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ಅವರು ನಿರ್ಮಿಸಿರುವ, ಖ್ಯಾತ ನಿರ್ದೇಶಕ ಶ್ರೀನಿವಾಸರಾಜು ಅವರ ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಚಿತ್ರ ತೆರೆಕಂಡು ನೂರು ದಿನಗಳಾಗಿದೆ. ಪ್ರೇಕ್ಷಕರು ಚಿತ್ರಮಂದಿರಕ್ಕೆ ಬರುತ್ತಿರುವುದೇ ವಿರಳವಾಗಿರುವ ಈ ಸಂದರ್ಭದಲ್ಲಿ ಕನ್ನಡ ಚಿತ್ರವೊಂದು ನೂರುದಿನಗಳ ಪ್ರದರ್ಶನ ಕಂಡಿರುವುದು ನಿಜಕ್ಕೂ ಸಂತಸದ ವಿಚಾರ.

ಕರ್ನಾಟಕದ ನಾಲ್ಕು ಕಡೆ ಈ ಚಿತ್ರ ನೂರುದಿನಗಳ ಪ್ರದರ್ಶನ ಕಂಡಿದೆ. ಈಗಲೂ ಪ್ರದರ್ಶನವಾಗುತ್ತಿದೆ. ಚಿತ್ರವನ್ನು ಯಶಸ್ವಿ ಮಾಡಿದ ಕನ್ನಡ ಕಲಾಭಿಮಾನಿಗಳಿಗೆ ನಿರ್ಮಾಪಕ ಪ್ರಶಾಂತ್ ಜಿ ರುದ್ರಪ್ಪ, ನಿರ್ದೇಶಕ ಶ್ರೀನಿವಾಸರಾಜು ಹಾಗೂ ನಾಯಕ ಗಣೇಶ್ ಧನ್ಯವಾದ ತಿಳಿಸಿದ್ದಾರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನದ ಈ ಚಿತ್ರದ ಹಾಡಗಳಂತೂ ಬಹಳ ಜನಪ್ರಿಯವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈಗಲೂ ಟ್ರೆಂಡಿಂಗ್ ನಲ್ಲಿದೆ‌.

Similar Posts

0 0 votes
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments