“ಶುಗರ್ ಫ್ಯಾಕ್ಟರಿ” ಗೆ ಜಯಂತ ಕಾಯ್ಕಿಣಿ ಬರೆದರು “ಜಹಾಪನಾ” ಹಾಡು..ಸುಮಧುರ ಪ್ರೇಮಗೀತೆಗೆ ಮನಸೋತ್ತ ಅಭಿಮಾನಿಗಳು

ದೀಪಕ್ ಅರಸ್ ನಿರ್ದೇಶನದಲ್ಲಿ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ “ಶುಗರ್ ಫ್ಯಾಕ್ಟರಿ” ಚಿತ್ರಕ್ಕಾಗಿ ಖ್ಯಾತ ಗೀತರಚನೆಕಾರ ಜಯಂತ ಕಾಯ್ಕಿಣಿ ಅವರು “ಜಹಾಪನಾ” ಎಂಬ ಸುಮಧುರ ಪ್ರೇಮಗೀತೆ ಬರೆದಿದ್ದಾರೆ. ಇತ್ತೀಚೆಗೆ ಈ ಹಾಡು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ನಿಹಾಲ್ ತಾವ್ರೊ ಹಾಗೂ ಅಮೃತಾ ನಾಯಕ್ ಅವರ ಕಂಠಸಿರಿಯಲ್ಲಿ ಈ ಹಾಡು ಮಧುರವಾಗಿ ಮೂಡಿಬಂದಿದೆ. ಧನಂಜಯ್ ಅವರ ನೃತ್ಯ ನಿರ್ದೇಶನದಲ್ಲಿ ಡಾರ್ಲಿಂಗ್ ಕೃಷ್ಣ ಹಾಗೂ ಸೋನಾಲ್ ಮೊಂತೆರೊ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಕಬೀರ್ ರಫಿ ಸಂಗೀತ ನೀಡಿದ್ದಾರೆ.

ಈಗಾಗಲೇ “ಶುಗರ್ ಫ್ಯಾಕ್ಟರಿ” ಟ್ರೇಲರ್ ಎಲ್ಲರ ಮನಗೆದ್ದು, ಆಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ನವೆಂಬರ್ 24 ರಂದು ಬಹು ನಿರೀಕ್ಷಿತ ಈ ಚಿತ್ರ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಡಾರ್ಲಿಂಗ್ ಕೃಷ್ಣ ಅವರ ಸಿನಿಜರ್ನಿಯಲ್ಲೇ “ಶುಗರ್ ಫ್ಯಾಕ್ಟರಿ” ಬಿಗ್ ಬಜೆಟ್ ಚಿತ್ರವೆಂದು ಹೇಳಲಾಗುತ್ತಿದೆ. ಅಭಿಮಾನಿಗಳು ಸಹ ಈ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡು, ಬಿಡುಗಡೆಗೆ ಕಾತುರದಿಂದ ಕಾಯುತ್ತಿದ್ದಾರೆ.

ಆರ್ ಗಿರೀಶ್ ನಿರ್ಮಿಸಿರುವ ಈ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ಅವರಿಗೆ ನಾಯಕಿಯರಾಗಿ ಸೋನಾಲ್ ಮಾಂತೆರೊ, ಅದ್ವಿತಿ ಶೆಟ್ಟಿ, ರುಹಾನಿ ಶೆಟ್ಟಿ ಕೃಷ್ಣ ಅವರಿಗೆ ನಾಯಕಿಯರಾಗಿ ನಟಿಸಿದ್ದಾರೆ.

Similar Posts

  • ಅಭಿಮಾನಿಗಳಿಂದ “ಘೋಸ್ಟ್” ಚಿತ್ರಕ್ಕೆ ಹಾಡಿನ ಉಡುಗೊರೆ. .

    ಪ್ರತಿಷ್ಠಿತ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಂದೇಶ್ ನಾಗರಾಜ್ ಅವರು ಅರ್ಪಿಸುವ, ಸಂದೇಶ್ ಎನ್ ನಿರ್ಮಾಣದ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಘೋಸ್ಟ್” ಚಿತ್ರ ಇದೇ ಅಕ್ಟೋಬರ್ 19 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ‌ಈ ಚಿತ್ರದ ಮತ್ತೊಂದು ವಿಶೇಷವೆಂದರೆ ಅಖಿಲ ಕರ್ನಾಟಕ ಡಾ||ಶಿವರಾಜಕುಮಾರ್ ಅಭಿಮಾನಿಗಳ ಸಂಘದವರು ಹಾಡೊಂದನ್ನು ಸಿದ್ದಪಡಿಸಿ “ಘೋಸ್ಟ್” ಚಿತ್ರಕ್ಕೆ ಉಡುಗೊರೆಯಾಗಿ ನೀಡಿದ್ದಾರೆ. ಈ ರೀತಿ ಅಭಿಮಾನಿಗಳು ಚಿತ್ರವೊಂದಕ್ಕೆ ಹಾಡಿನ ಉಡುಗೊರೆ ನೀಡಿರುವುದು ಇದೇ ಮೊದಲು. ಅಭಿಮಾನಿಗಳು ಅಭಿಮಾನದಿಂದ…

  • ಶರಣ್ ಅಭಿನಯದ ಬಹು ನಿರೀಕ್ಷಿತ “ಛೂ ಮಂತರ್” ಚಿತ್ರ ಏಪ್ರಿಲ್ 5 ರಂದು ತೆರೆಗೆ.

    ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ನಿರ್ಮಿಸಿರುವ, “ಕರ್ವ” ಖ್ಯಾತಿಯ ನವನೀತ್ ನಿರ್ದೇಶಿಸಿರುವ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಜನಮನ ಗೆದ್ದಿರುವ ನಟ ಶರಣ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಛೂ‌ ಮಂತರ್” ಚಿತ್ರ ಇದೇ ಏಪ್ರಿಲ್ 5 ರಂದು ರಾಜ್ಯಾದ್ಯಂತ. ಬಿಡುಗಡೆಯಾಗುತ್ತಿದೆ. ಈಗಾಗಲೇ ಟೀಸರ್ ಮೂಲಕ ಮನೆಮಾತಾಗಿರುವ “ಛೂ ಮಂತರ್” ಚಿತ್ರದ ಟ್ರೇಲರ್ ಸಹ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಇದೊಂದು ಹಾರಾರ್ ಚಿತ್ರವಾಗಿದ್ದು, ಈ ಹಿಂದೆ ಬಂದಿರುವ ಹಾರಾರ್ ಚಿತ್ರಗಳಿಗಿಂತ ಸ್ವಲ್ಪ…

  • ಟ್ರೇಲರ್ ಹಾಗೂ ಹಾಡುಗಳ ಮೂಲಕ ಗಮನ ಸೆಳೆಯುತ್ತಿದೆ “MIXING ಪ್ರೀತಿ” ಚಿತ್ರ .

    ಎನ್ ಪಿ ಇಸ್ಮಾಯಿಲ್ ನಿರ್ದೇಶನದ ಪ್ರೇಮ ಕಥಾನಕದಲ್ಲಿ ಸಂಹಿತಾ ವಿನ್ಯಾ, ಪಾವನ ಸೇರಿದಂತೆ ನಾಲ್ವರು ನಾಯಕಿಯರು. ಸಿಂಡೊ ಜೇಕಬ್ ನಾಯಕ . ಫ್ರೆಂಡ್ಸ್ ಪಿಕ್ಚರ್ಸ್ ಲಾಂಛನದಲ್ಲಿ ಎನ್ ಪಿ ಇಸ್ಮಾಯಿಲ್ ಅವರು ನರ್ಮಿಸಿ, ನಿರ್ದೇಶಿಸಿರುವ, ಪೊಲ್ಲಾಚಿ ಮಹಾಲಿಂಗಂ ಮತ್ತು ಕಣ್ಣನ್ ಅವರ ಸಹ ನಿರ್ಮಾಣವಿರುವ “MIXING ಪ್ರೀತಿ” ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಕೃಷ್ಣೇಗೌಡ, ಸಿರಿ ಮ್ಯಾಸಿಕ್ ನ ಸುರೇಶ್ ಚಿಕ್ಕಣ್ಣ,‌ ಡಿವೈಎಸ್ಪಿ ರಾಜೇಶ್,…

  • ಸಿನಿಮಾ ಕಾರ್ಮಿಕರಿಗಾಗಿ ಹೊಸ ವೇತನ ಜಾರಿ, ಸಿನಿ ಕಾರ್ಮಿಕರ ಪರ ನಿಂತ ಚಿತ್ರರಂಗ

    ನಿರ್ಮಾಪಕ ಕೆ ಮಂಜು ಅಧ್ಯಕ್ಷತೆಯ 36 ಮಂದಿ ನಿರ್ಮಾಪಕರನ್ನು ಒಳಗೊಂಡ ಸಮಿತಿಯಿಂದ ಹೊಸ ವೇತನ ಪರಿಷ್ಕರಣೆ ವರದಿಯನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘಕ್ಕೆ ಹಸ್ತಾಂತರ ಕೊರೋನಾ ಸೇರಿದಂತೆ ಬೇರೆ ಬೇರೆ ಕಾರಣಗಳಿಗಾಗಿ ಕಳೆದ ನಾಲ್ಕು ವರ್ಷಗಳಿಂದ ಸಿನಿಮಾ ಕಾರ್ಮಿಕರ ವೇತನ ಪರಿಷ್ಕರಣೆಗೆ ಕೊನೆಗೂ ಮುಕ್ತಿ ಸಿಕ್ಕಿದೆ. ನಿರ್ಮಾಪಕ ಕೆ ಮಂಜು ಅವರ ಅಧ್ಯಕ್ಷತೆಯಲ್ಲಿ 36ಕ್ಕೂ ಹೆಚ್ಚು ನಿರ್ಮಾಪಕರನ್ನು ಒಳಗೊಂಡ ಸಿನಿಮಾ ಕಾರ್ಮಿಕರ ವೇತನ ಪರಿಷ್ಕರಣೆ ಸಮಿತಿಯಿಂದ ಹೊಸ ವೇತನ ವರದಿಯನ್ನು…

  • ದುಬೈ ನಲ್ಲಿ “ಜಸ್ಟ್ ಪಾಸ್”.

    ರಾಯ್ಸ್ ಎಂಟರ್ ಟೈನ್ಮೆಂಟ್ ಲಾಂಛನದಲ್ಲಿ ಕೆ.ವಿ.ಶಶಿಧರ್ ನಿರ್ಮಿಸುತ್ತಿರುವ, ಕೆ.ಎಂ.ರಘು ನಿರ್ದೇಶನದಲ್ಲಿ ಶ್ರೀ ಹಾಗೂ ಪ್ರಣತಿ ನಾಯಕ- ನಾಯಕಿಯಾಗಿ ನಟಿಸಿರುವ “ಜಸ್ಟ್ ಪಾಸ್” ಚಿತ್ರದ ಟೀಸರ್ ಡಿಸೆಂಬರ್ 10ರಂದು ದುಬೈನಲ್ಲಿ ನಡೆಯಲಿರುವ “ದುಬೈ ದಸರಾ” ಸಂಗೀತ ರಸಸಂಜೆ ಕಾರ್ಯಕ್ರಮದಲ್ಲಿ ಪ್ರಸಾರವಾಗಲಿದೆ. ನಾಡಿನ ಹೆಸರಾಂತ ಕಲಾವಿದರು ಈ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ. ಸಾವಿರಾರು ಕನ್ನಡಿಗರ ಸಮ್ಮುಖದಲ್ಲಿ “ಜಸ್ಟ್ ಪಾಸ್” ಚಿತ್ರದ ಟೀಸರ್ ಪ್ರದರ್ಶನವಾಗಲಿದೆ. ಡಿಸೆಂಬರ್‌ 13‌ ರಂದು ಈ ಚಿತ್ರದ ಟೀಸರ್ A2 ಮ್ಯೂಸಿಕ್ ಮೂಲಕ ಬಿಡುಗಡೆಯಾಗಲಿದೆ. ಶ್ರೀ, ಪ್ರಣತಿ, ರಂಗಾಯಣರಘು…

  • ‘ಗರಡಿ’ಯಿಂದ ಬಂತು ಮೂರನೇ ಹಾಡು.

    ವನಜಾ ಬಿ.ಸಿ ಪಾಟೀಲ್ ನಿರ್ಮಾಣದ ಹಾಗೂ ಯೋಗರಾಜ್ ಭಟ್ ನಿರ್ದೇಶನದ ‘ಗರಡಿ’ ಚಿತ್ರದ ಮೂರನೇ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಯೋಗರಾಜ್ ಭಟ್ ಅವರು ಬರೆದಿರುವ ‘ಬಡವನ ಹೃದಯ’ ಎಂಬ ಮನಸ್ಸಿಗೆ ಹತ್ತಿರವಾಗುವ ಈ ಹಾಡು ಸೋಮವಾರ ಬಿಡುಗಡೆಯಾಗಿದೆ. ವಿ.ಹರಿಕೃಷ್ಣ ಸಂಗೀತ ಸಂಯೋಜಿಸಿರುವ ಈ ಹಾಡಿಗೆ ಕರುನಾಡ ಕಲಾರಸಿಕರು ತಲೆದೂಗುತ್ತಿದ್ದಾರೆ. ವಿಜಯ್ ಪ್ರಕಾಶ್ ಅವರ ಕಂಠಸಿರಿಯಲ್ಲಿ ಈ ಹಾಡು ಮೂಡಿಬಂದಿದೆ. ಹಾಡು ಬಿಡುಗಡೆ ಮಾಡಿದ ಚಿತ್ರತಂಡ, ಪತ್ರಿಕಾಗೋಷ್ಠಿಯಲ್ಲಿ ಹಾಡಿನ ಬಗ್ಗೆ ವಿವರಣೆ ನೀಡಿತು. ಎರಡನೇ ಲಾಕ್‌ಡೌನ್ ಸಮಯದಲ್ಲೇ ಈ…

0 0 votes
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments