ಮನಮೋಹಕವಾಗಿದೆ “ಲೇಡಿಸ್ ಬಾರ್” ಚಿತ್ರದ ಟೀಸರ್ ಹಾಗೂ ಹಾಡುಗಳು.

ಡಿ.ಎಂ.ಸಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಟಿ.ಎಂ.ಸೋಮರಾಜು ಅವರು ನಿರ್ಮಿಸಿರುವ ಹಾಗೂ ಮುತ್ತು ಎ.ಎನ್ ನಿರ್ದೇಶಿಸಿರುವ “ಲೇಡಿಸ್ ಬಾರ್” ಚಿತ್ರದ ಟೀಸರ್ ಹಾಗೂ ಹಾಡುಗಳು ಇತ್ತೀಚಿಗೆ ಬಿಡುಗಡೆಯಾಯಿತು ರಾಜಕೀಯ ಮುಖಂಡರಾದ ಎಂ.ಡಿ.ಲಕ್ಷ್ಮೀನಾರಾಯಣ್ ಟೀಸರ್ ಬಿಡುಗಡೆ ಮಾಡಿದರು. ಹಾಡುಗಳನ್ನು ನಟಿ ರೂಪಿಕಾ, ಮಮತ ಹಾಗೂ ನಿರ್ಮಾಪಕ ಶಿಲ್ಪ ಶ್ರೀನಿವಾಸ್ ಹಾಡುಗಳನ್ನು ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಸಿರಿ ಮ್ಯೂಸಿಕ್ ಮೂಲಕ ಹಾಡುಗಳು ಲೋಕಾರ್ಪಣೆಯಾಗಿದೆ. ನಂತರ ಚಿತ್ರತಂಡದ ಸದಸ್ಯರು “ಲೇಡಿಸ್ ಬಾರ್” ಕುರಿತು ಮಾಹಿತಿ ನೀಡಿದರು.

“ಲೇಡಿಸ್ ಬಾರ್” ಶೀರ್ಷಿಕೆ ಕೇಳಿದ ತಕ್ಷಣ ಕುಡಿತದ ಬಗ್ಗೆ ಸಿನಿಮಾ ಅಂದುಕೊಳ್ಳುವುದು ಸಹಜ. ಆದರೆ ನಮ್ಮ ಚಿತ್ರದಲ್ಲಿ ಬರೀ ಕುಡಿತವಷ್ಟೇ ತೋರಿಸಿಲ್ಲ. ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಪ್ರಯತ್ನ ಮಾಡಿದ್ದೇವೆ. ಚಿತ್ರ ನೋಡಿದಾಗ ಅದು ತಿಳಿಯುತ್ತದೆ. ಬೆಂಗಳೂರಿನಲ್ಲೇ ಹೆಚ್ಚಿನ ಚಿತ್ರೀಕರಣ ಮಾಡಿದ್ದೇವೆ‌. ಸದ್ಯದಲ್ಲೇ ಚಿತ್ರವನ್ನು ಸೆನ್ಸಾರ್ ಮಂಡಳಿ ವೀಕ್ಷಿಸಲಿದ್ದು, ಜನವರಿಯಲ್ಲಿ ತೆರೆಗೆ ತರುತ್ತೇವೆ ಎಂದು ನಿರ್ದೇಶಕ ಎ.ಎನ್ ಮುತ್ತು ತಿಳಿಸಿದರು.

ನಾನು ಉದ್ಯಮಿ ಜೊತೆಗೆ ರೈತ ಕೂಡ ಎಂದು ಮಾತನಾಡಿದ ಟಿ.ಎಂ.ಸೋಮರಾಜು, ಸಿನಿಮಾ ರಂಗ ಪರಿಚಯವೇ ಇಲ್ಲ. ನನ್ನ ಗೆಳೆಯ ರಾಜಶೇಖರ್ ನನ್ನನ್ನು ಈ ರಂಗಕ್ಕೆ ಕರೆದುಕೊಂಡು ಬಂದಿದ್ದಾರೆ. ನಿರ್ದೇಶಕ ಎ.ಎನ್ ಮುತ್ತು ಅವರು ಹೇಳಿದ ಕಥೆ ಇಷ್ಟವಾಯಿತು ನಿರ್ಮಾಣ ಮಾಡಿದ್ದೇನೆ. ಪ್ರಮುಖಪಾತ್ರದಲ್ಲೂ ನಟಿಸಿದ್ದೇನೆ. ನಮ್ಮ ಚಿತ್ರವನ್ನು ನೋಡಿ ಪ್ರೋತ್ಸಾಹ ನೀಡಿ ಎಂದರು.

ಸಹ ನಿರ್ಮಾಪಕ ರಾಜಶೇಖರ್ ಚಿತ್ರ ಸಾಗಿ ಬಂದ ಬಗ್ಗೆ ಮಾಹಿತಿ ನೀಡಿದರು.
ಸಂಗೀತ ನಿರ್ದೇಶಕ ಹರ್ಷ ಕಾಗೋಡ್, ಛಾಯಾಗ್ರಾಹಕ ವೀನಸ್ ಮೂರ್ತಿ, ಸಾಹಸ ನಿರ್ದೇಶಕ ಜಗ್ಗು ಮಾಸ್ಟರ್ ಹಾಗೂ ಚಿತ್ರದಲ್ಲಿ ನಟಿಸಿರುವ ಹರೀಶ್ ರಾಜ್, ಶಿವಾನಿ, ಮಾಧುರಿ, ಗಣೇಶ್ ರಾವ್, ಆರಾಧ್ಯ ಮುಂತಾದವರು “ಲೇಡಿಸ್ ಬಾರ್” ಬಗ್ಗೆ ಮಾತನಾಡಿದರು..

ಚಿತ್ರದ ಸಿರಿ ಮ್ಯೂಸಿಕ್ ನಲ್ಲಿ ಹಾಡುಗಳನ್ನು ನೋಡಿ, ನಿಮಗನಿಸಿದನ್ನು ಕಾಮೆಂಟ್ ಮಾಡಿ. ಉತ್ತಮ ಕಾಮೆಂಟ್ ಗೆ ನಿರ್ಮಾಪಕರು ಮೊಬೈಲ್‌ ನೀಡಲಿದ್ದಾರೆ ಎಂದು ಸಿರಿ ಮ್ಯೂಸಿಕ್ ಚಿಕ್ಕಣ್ಣ ತಿಳಿಸಿದರು.

Similar Posts

0 0 votes
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments