ವಿಭಿನ್ನ ಕಥಾಹಂದರ ಹೊಂದಿರುವ “ಕುಲದಲ್ಲಿ ಕೀಳ್ಯಾವುದೋ” ಚಿತ್ರಕ್ಕೆ ಮನು ಮಡೆನೂರ್ ನಾಯಕ . ಸಂಕ್ರಾಂತಿ ಹಬ್ಬದಂದು ಆರಂಭವಾದ ಈ ಚಿತ್ರಕ್ಕೆ ಯೋಗರಾಜ್ ಭಟ್ಟರ ಶಿಷ್ಯ ಶ್ರೇಯಸ್ ರಾಜ್ ಶೆಟ್ಟಿ ನಿರ್ದೇಶನ .ವಿಭಿನ್ನ ಕಥಾಹಂದರ ಹೊಂದಿರುವ “ಕುಲದಲ್ಲಿ ಕೀಳ್ಯಾವುದೋ” ಚಿತ್ರಕ್ಕೆ ಮನು ಮಡೆನೂರ್ ನಾಯಕ .

ಮಕರ ಸಂಕ್ರಾಂತಿ ಪರ್ವದಿನದಂದು ಯೋಗರಾಜ್ ಸಿನಿಮಾಸ್ ಹಾಗೂ ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಯೋಗರಾಜ್ ಭಟ್, ವಿದ್ಯಾ ಹಾಗೂ ಸಂತೋಷ್ ಕುಮಾರ ಅವರು ನಿರ್ಮಿಸುತ್ತಿರುವ “ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಮುಹೂರ್ತ ಸಮಾರಂಭ ಜೆ.ಪಿ.ನಗರದ ಶ್ರೀ ವಿನಾಯಕ ಸತ್ಯ ಗಣಪತಿ ಶಿರಡಿ ಸಾಯಿಬಾಬ ದೇವಸ್ಥಾನದಲ್ಲಿ ನೆರವೇರಿತು. ಯೋಗರಾಜ್ ಭಟ್ ಅವರ ಜೊತೆ ನಿರ್ದೇಶನ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಶ್ರೇಯಸ್ ರಾಜ್ ಶೆಟ್ಟಿ ನಿರ್ದೇಶಿಸುತ್ತಿರುವ “ಕುಲದಲ್ಲಿ ಕೀಳ್ಯಾವುದೋ” ಚಿತ್ರದಲ್ಲಿ “ಕಾಮಿಡಿ ಕಿಲಾಡಿಗಳು” ಸೀಸನ್ ೨ ವಿಜೇತ ಮನು ಮಡೆನೂರ್ ನಾಯಕನಾಗಿ ನಟಿಸುತ್ತಿದ್ದಾರೆ. ನವರಸ ನಾಯಕ ಜಗ್ಗೇಶ್ ಈ ಚಿತ್ರದ ಶೀರ್ಷಿಕೆ ಹಾಗೂ ಪೋಸ್ಟರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಮುಹೂರ್ತ ಸಮಾರಂಭದ ನಂತರ ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಹೆಚ್ಚಿನ ಮಾಹಿತಿ ನೀಡಿದರು.

“ಕುಲದಲ್ಲಿ ಕೀಳ್ಯಾವುದೋ” ಅಚ್ಚ ಕನ್ನಡದ ಶೀರ್ಷಿಕೆ ಎಂದು ಮಾತು ಆರಂಭಿಸಿದ ಯೋಗರಾಜ್ ಭಟ್, ಈಗಲೂ ಎಲ್ಲಾ ಆರ್ಕೆಸ್ಟ್ರಾಗಳಲ್ಲಿ ಹೇಳುವ ಕೊನೆಯ ಮಂಗಳಗೀತೆಯೂ ಹೌದು. ಈ ಶೀರ್ಷಿಕೆ ನಾಲ್ಕು ವರ್ಷಗಳಿಂದ ನನ್ನ ಹತ್ತಿರವಿತ್ತು. ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆಯುತ್ತಿರುವ ಯೋಗಿ ಗೌಡ ಮತ್ತು ನಿರ್ದೇಶನ ಮಾಡುತ್ತಿರುವ ಶ್ರೇಯಸ್ ಈ ಚಿತ್ರದ ಕಥೆ ಬಗ್ಗೆ ಹೇಳಿದಾಗ ಈ ಶೀರ್ಷಿಕೆ ಇಡಲು ಹೇಳಿದೆ. ಅವರು ಒಪ್ಪಿದರು. ನಾನು, ಸಂತೋಷ್ ಕುಮಾರ್ ಹಾಗೂ ವಿದ್ಯಾ ಈ ಚಿತ್ರ ನಿರ್ಮಾಣ ಮಾಡುತ್ತಿದ್ದೇವೆ. ಮನು ಮಡೆನೂರ್ ನಾಯಕನಾಗಿ, ಸೋನಾಲ್ ಮೊಂತೆರೊ ನಾಯಕಿಯಾಗಿ, ದಿಗಂತ್, ರಂಗಾಯಣ ರಘು, ಶರತ್ ಲೋಹಿತಾಶ್ವ, ಮೌನ ಗುಡ್ಡೆಮನೆ ಪ್ರಮುಖ ಪಾತ್ರಧಾರಿಗಳಾಗಿ ನಟಿಸುತ್ತಿದ್ದಾರೆ. ಮನೋಮೂರ್ತಿ ಅವರ ಸಂಗೀತ ನಿರ್ದೇಶನ ಹಾಗೂ ನಿರಂಜನ್ ಬಾಬು ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ ಎಂದರು.

ಇದು 1970ರ ಕಾಲಘಟ್ಟದಲ್ಲಿ ನಡೆಯುವ ಕಥೆ. ಮೊದಲು ಮನು ಮಡೆನೂರ್ ಅವರಿಗೆ ಕಾಮಿಡಿ ಜಾನರ್ ನ ಕಥೆ ಮಾಡುವುದು ಅಂದುಕೊಂಡಿದ್ದೆ. ಮನು ಅವರನ್ನು ಈಗಾಗಲೇ ಕಾಮಿಡಿ ಮೂಲಕವೇ ಜನರು ಗುರುತಿಸಿದ್ದಾರೆ. ಹಾಗಾಗಿ ಆ ಜಾನರ್ ಬೇಡ. ಬೇರೆ ಜಾನರ್ ನ ಕಥೆ ಮಾಡೋಣ ಅಂದುಕೊಂಡು ಈ ಕಥೆ ಸಿದ್ದಮಾಡಿಕೊಂಡಿದ್ದೇನೆ. ಚಿತ್ರದ ಕಥೆ ಸಿದ್ದವಾಯಿತು. ಕ್ಲೈಮ್ಯಾಕ್ಸ್ ಬಗ್ಗೆ ಯೋಚಿಸುತ್ತಿದ್ದೆ. ಗುರುಗಳಾದ ಯೋಗರಾಜ್ ಭಟ್ ಅವರು ಅದ್ಭುತ ಕ್ಲೈಮ್ಯಾಕ್ಸ್ ನೀಡಿದ್ದಾರೆ ಎಂದರು ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಯೋಗಿ ಗೌಡ.

ನನಗೆ ಮಧ್ಯರಾತ್ರಿ ಸಮಯದಲ್ಲಿ ಯೋಗರಾಜ್ ಸಿನಿಮಾಸ್ ನಿಂದ ಕರೆಮಾಡಿ ನೀವೇ ಈ ಚಿತ್ರವನ್ನು ನಿರ್ದೇಶನ ಮಾಡಬೇಕೆಂದು ಹೇಳಿದಾಗ ಆಶ್ಚರ್ಯವಾಯಿತು. ಅವರು ನಂಬಿ ಕೊಟ್ಟಿರುವ ಕಾರ್ಯವನ್ನು ಶ್ರದ್ಧೆಯಿಂದ ಮಾಡುವುದಾಗಿ ನಿರ್ದೇಶಕ ಶ್ರೇಯಸ್ ರಾಜ್ ಶೆಟ್ಟಿ ಹೇಳಿದರು.

ನಾನು ಈ ಮಟ್ಟಕ್ಕೆ ಏರಲು ಕಾರಣ “ಕಾಮಿಡಿ ಕಿಲಾಡಿಗಳು” ಕಾರ್ಯಕ್ರಮ. ಈ ಸಂದರ್ಭದಲ್ಲಿ ನಾನು ಜಗ್ಗೇಶ್, ರಕ್ಷಿತ ಹಾಗೂ ಯೋಗರಾಜ್ ಭಟ್ ಅವರನ್ನು ನೆನಪಿಸಿಕೊಳ್ಳುತ್ತೇನೆ. ಇನ್ನು ನನ್ನ ಚಿತ್ರಕ್ಕೆ ಬಂಡವಾಳ ಹೂಡುತ್ತಿರುವ ಯೋಗರಾಜ್ ಭಟ್, ಸಂತೋಷ್ ಕುಮಾರ್ ಹಾಗೂ ವಿದ್ಯಾ ಅವರಿಗೆ ಧನ್ಯವಾದ ತಿಳಿಸುತ್ತೇನೆ. ಈ ಚಿತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದೇನೆ ಎಂದು ನಾಯಕ ಮನು ಮಡೆನೂರ್ ತಿಳಿಸಿದರು.

ನಾಯಕಿ ಸೋನಾಲ್ ಮೊಂತೆರೊ, ದಿಗಂತ್, ರಂಗಾಯಣ ರಘು, ಶರತ್ ಲೋಹಿತಾಶ್ವ, ಮೌನ ಗುಡ್ಡೆಮನೆ, ಸಂಗೀತ ನಿರ್ದೇಶಕ ಮನೋಮೂರ್ತಿ, ನಿರ್ಮಾಣ ಸಾರಥ್ಯ ಹೊತ್ತಿರುವ ರೇಣುಕಾ ಯೋಗರಾಜ್ ಭಟ್ ಈ ಚಿತ್ರದ ಬಗ್ಗೆ ಮಾತನಾಡಿದರು.

ಯೋಗರಾಜ್ ಭಟ್ ಅವರ ಜೊತೆ ಸಿನಿಮಾ‌ ನಿರ್ಮಿಸುತ್ತಿರುವುದಕ್ಕೆ ನಿರ್ಮಾಪಕರಾದ ಸಂತೋಷ್ ಕುಮಾರ್ ಹಾಗೂ ವಿದ್ಯಾ ಸಂತೋಷ ವ್ಯಕ್ತಪಡಿಸಿದರು.

Similar Posts

  • ಮಾತಿನಮನೆಯಲ್ಲಿ “chef ಚಿದಂಬರ”.

    ನಟ ಅನಿರುದ್ಧ್ ಜತಕರ್ ನಾಯಕನಾಗಿ ಅಭಿನಯಿಸಿರುವ ಹಾಗೂ “ರಾಘು” ಚಿತ್ರದ ಖ್ಯಾತಿಯ ನಿರ್ದೇಶಕ ಎಂ.ಆನಂದರಾಜ್ ನಿರ್ದೇಶನದ “chef ಚಿದಂಬರ” ಚಿತ್ರದ ಚಿತ್ರೀಕರಣ ಇತ್ತೀಚಿಗೆ ಮುಕ್ತಾಯವಾಗಿದೆ. ಪ್ರಸ್ತುತ ಲೂಪ್ ಸ್ಟುಡಿಯೋದಲ್ಲಿ ಚಿತ್ರಕ್ಕೆ ಮಾತಿನ ಜೋಡಣೆ (ಡಬ್ಬಿಂಗ್) ನಡೆಯುತ್ತಿದೆ. ನಾಯಕ ಅನಿರುದ್ದ್ ಮಾತಿನ ಮೂಲಕ ತಮ್ಮ ಪಾತ್ರಕ್ಕೆ ಜೀವ ತುಂಬುತಿದ್ದಾರೆ. ಡಾರ್ಕ್ ಕಾಮಿಡಿ ಜಾನರ್ ನ ಈ ಚಿತ್ರದಲ್ಲಿ ಅನಿರುದ್ಧ್ ಶೆಫ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪಾತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದಾರೆ.ದಮ್ತಿ ಪಿಕ್ಚರ್ಸ್ ಲಾಂಛನದಲ್ಲಿ ರೂಪ ಡಿ.ಎನ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ…

  • ಮೈಸೂರಿನ ನಂದಗೋಕುಲ ಗೃಹ ನಿರ್ಮಾಣ ಸಹಕಾರ ಸಂಘದಿಂದ ಚಿತ್ರತಂಡದ ಸದಸ್ಯರಿಗೆ ಕಡಿಮೆ ಬೆಲೆಗೆ ನಿವೇಶನ ನೀಡುವ ಯೋಜನೆ .

    ನಂದಗೋಕುಲ ಗೃಹ ನಿರ್ಮಾಣ ಸಹಕಾರ ಸಂಘ, ಮೈಸೂರಿನಲ್ಲಿ ಚಿತ್ರನಗರಿ ಬಡವಾಣೆ ಮತ್ತು ಗಂಧದ ಗುಡಿ ಫಮಲ್ಯಾಂಡ್ ನಿರ್ಮಿಸುವ ಪ್ರಯತ್ನದಲ್ಲಿದ್ದು, ಆ ಮೂಲಕ ಚಲನಚಿತ್ರರಂಗದ ಎಲ್ಲಾ ವರ್ಗದವರಿಗೆ ಹಾಗೂ ಸಾರ್ವಜನಿಕರಿಗೆ ಒಂದೇ ಸೂರಿನಡಿ ಕಡಿಮೆ ಬೆಲೆಗೆ ನಿವೇಶನ ನೀಡುವ ಯೋಜನೆ ಹಾಕಿಕೊಂಡಿದೆ. ಈ ಕುರಿತು ಮೈಸೂರು, ಮಂಡ್ಯ, ಕೊಡಗು, ಹಾಸನ‌ ಹಾಗೂ ಚಾಮರಾಜನಗರ ಐದು ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಸರ್ಕಾರದಿಂದ ಮಾನ್ಯತೆ ಪಡೆದುಕೊಳ್ಳಲಾಗಿದೆ. ಮೈಸೂರು – ಬನ್ನೂರು ರಸ್ತೆಯಲ್ಲಿ ಈಗಾಗಲೇ 50 ಎಕರೆ ಜಾಗವನ್ನು ನೋಡಲಾಗಿದೆ. ಯಾವು‌ದೇ ಅಡೆತಡೆಗಳಿಲ್ಲದೆ…

  • ಗಣರಾಜ್ಯೋತ್ಸವದಂದು ಬಿಡುಗಡೆಯಾಗಲಿದೆ ಅದಿತಿ ಪ್ರಭುದೇವ ಅಭಿನಯದ “ಅಲೆಕ್ಸಾ”.

    ವಿ.ಚಂದ್ರು ನಿರ್ಮಾಣದ, ಜೀವ ನಿರ್ದೇಶನದ ಹಾಗೂ ಅದಿತಿ ಪ್ರಭುದೇವ ನಾಯಕಿಯಾಗಿ, ಪವನ್ ತೇಜ್ ನಾಯಕನಾಗಿ ನಟಿಸಿರುವ “ಅಲೆಕ್ಸಾ” ಚಿತ್ರ ಜನವರಿ 26 ಗಣರಾಜ್ಯೋತ್ಸವದಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಮೊದಲು “ಅಲೆಕ್ಸಾ” ಚಿತ್ರವನ್ನು ಡಿಸೆಂಬರ್ 29 ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು. ಅಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ “ಕಾಟೇರ” ಚಿತ್ರ ಬಿಡುಗಡೆಯಾಗುತ್ತಿರುವುದರಿಂದ ನಮ್ಮ ಚಿತ್ರದ ಬಿಡುಗಡೆಯನ್ನು ಜನವರಿ 26ಕ್ಕೆ ಮುಂದೂಡಿರುವುದಾಗಿ ನಿರ್ದೇಶಕ ಜೀವ ತಿಳಿಸಿದ್ದಾರೆ. ಕ್ರೈಂ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕರೆ…

  • “X&Y” ಚಿತ್ರದ “ಆoಬು ಆಟೋ ” ಎಂಬ ಆಪ್ತಮಿತ್ರ.

    ಇನ್ನೇನು ಬಿಡುಗಡೆಯ ಅoಚಿಗೆ ಬoದಿರುವ ಕನ್ನಡದ “X&Y” ಚಿತ್ರದಲ್ಲಿ  ಆಟೋರಿಕ್ಷಾ “ಆಂಬು ಆಟೋ ” ಆಗಿ ಬಡ್ತಿ ಪಡೆದು ಎಲ್ಲರ ಗಮನ ಸೆಳೆದಿದೆ.  ಆಂಬುಲೆನ್ಸ್ ನಲ್ಲಿರುವoತೆ ಎಲ್ಲ ಸೌಲಭ್ಯಗಳನ್ನು ಈ ಆಟೋದಲ್ಲಿ ಅಳವಡಿಸಿ ಚಿತ್ರದಲ್ಲಿ ಅದನ್ನೊಂದು ಕಲಾವಿದನೆoಬಂತೆ ಕಲಾತ್ಮಕವಾಗಿ ಬಳಸಲಾಗಿದೆ. ಈ ವಿಷಯ ತಿಳಿದ ಆಟೋ ಚಾಲಕರು ಗುಂಪು-ಗುಂಪಾಗಿ, ಚಿತ್ರ ನಿರ್ದೇಶಕ ಸತ್ಯಪ್ರಕಾಶ್ ಅವರನ್ನು ಖುದ್ದು ಭೇಟಿ ಮಾಡಿ, ‘ಸರ್ ಇಲ್ಲಿತನಕ ‘ಆಟೋರಿಕ್ಷಾ’ ನಮ್ಮ ‘ಮಿತ್ರ’ನಾಗಿತ್ತು. ಈಗದನ್ನು ‘ಆಂಬು ಆಟೋ’ ಆಗಿ ಪರಿವರ್ತಿಸಿ ಎಲ್ಲರ ‘ಆಪ್ತಮಿತ್ರ’ನಾಗಿರುವಂತೆ ಮಾಡಿದ್ದೀರಿ…

  • “ದ ಜಡ್ಜ್ ಮೆಂಟ್” ಬಗ್ಗೆ ತಂತ್ರಜ್ಞರ ಮಾತು .

    G9 communication media & entertainment ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಹಾಗೂ ಕ್ರೇಜಿಸ್ಟಾರ್ ವಿ ರವಿಚಂದ್ರನ್ ಪ್ರಮುಖಪಾತ್ರದಲ್ಲಿ ನಟಿಸಿರುವ “ದ ಜಡ್ಜ್ ಮೆಂಟ್” ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಈ ಕುರಿತು ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. ಚಿತ್ರದ ತಂತ್ರಜ್ಞರಿಗಾಗಿ ಆಯೋಜಿಸಲಾಗಿದ್ದ ಈ ಪತ್ರಿಕಾಗೋಷ್ಠಿಯಲ್ಲಿ ತಂತ್ರಜ್ಞರು ಚಿತ್ರದ ಕುರಿತು ಮಾತನಾಡಿದರು. ಮೊದಲಿಗೆ ಮಾತನಾಡಿದ ನಿರ್ದೇಶಕ ಗುರುರಾಜ ಕುಲಕರ್ಣಿ(ನಾಡಗೌಡ), ನಮ್ಮ ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣವಾಗಿದೆ. ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದೆ. ಸಂಕಲನ ಕಾರ್ಯ ನಡೆಯುತ್ತಿದೆ. ನಮ್ಮ…

  • ಮತ್ತೆ ಬಾಲಿವುಡ್ಗೆ ಇಂದ್ರಜಿತ್ ಲಂಕೇಶ್

    ‘ಜೈ ಹಿಂದ್ ಜೈ ಸಿಂಧ್’ ಚಿತ್ರದ ನಿರ್ದೇಶನ ಉತ್ತರಾಖಂಡದಲ್ಲಿ ಬಿರುಸಿನ ಚಿತ್ರೀಕರಣ ಕನ್ನಡದ ಖ್ಯಾತ ನಿರ್ದೇಶಕ ಇಂದ್ರಜಿತ್ ಲಂಕೇಶ್ ಮತ್ತೊಮ್ಮೆ ಹಿಂದಿ ಚಿತ್ರರಂಗಕ್ಕೆ ದೊಡ್ಡ ಮಟ್ಟದಲ್ಲಿಕಾಲಿಟ್ಟಿದ್ದಾರೆ. ಅವರು ಇದೀಗ ‘ಜೈ ಹಿಂದ್ ಜೈ ಸಿಂಧ್’ ಎಂಬ ಹಿಂದಿ ಚಿತ್ರವನ್ನು ಸದ್ದಿಲ್ಲದೆ ನಿರ್ದೇಶಿಸುತ್ತಿದ್ದು, ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿದಿದೆ.  ಚಿತ್ರದ ಕೊನೆಯ ಹಂತದ ಚಿತ್ರೀಕರಣ ಇದೀಗ ಉತ್ತರಾಖಂಡದಲ್ಲಿ ಭರದಿಂದ ಸಾಗಿದೆ ಶನಿವಾರ, ಡೆಹ್ರಾಡೂನ್ ನಲ್ಲಿ ‘ಜೈ ಹಿಂದ್ ಜೈ ಸಿಂಧ್’ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಸಮಾರಂಭದ ಜೊತೆಗೆ,…

0 0 votes
Article Rating
Subscribe
Notify of
guest
0 Comments
Oldest
Newest Most Voted