ಫೆಬ್ರವರಿಯಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ “ಮಾಂಕ್ ದಿ ಯಂಗ್” ಚಿತ್ರ ತೆರೆಗೆ . ಸಂಕ್ರಾಂತಿ ಸಂದರ್ಭದಲ್ಲಿ ಚಿತ್ರದ ಪ್ರಚಾರ ಕಾರ್ಯಕ್ಕೆ ಚಾಲನೆ . .
ಹೊಸ ತಂಡ ಸೇರಿ ನಿರ್ಮಿಸಿರುವ, ವಿಭಿನ್ನ ಕಥಾಹಂದರ ಹೊಂದಿರುವ “ಮಾಂಕ್ ದಿ ಯಂಗ್” ಚಿತ್ರವನ್ನು ಫೆಬ್ರವರಿಯಲ್ಲಿ ಅದ್ದೂರಿಯಾಗಿ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ನಡೆಸಿದೆ. ಬಿಡುಗಡೆಗೂ ಪೂರ್ವಭಾವಿಯಾಗಿ ಸದ್ಯದಲ್ಲೇ ಬರುವ ಸಂಕ್ರಾಂತಿ ಸಂದರ್ಭದಲ್ಲಿ ಪ್ರಚಾರ ಕಾರ್ಯ ಆರಂಭವಾಗಲಿದೆ. ಈ ಸಂದರ್ಭದಲ್ಲಿ ಚಿತ್ರದ ಗ್ಲಿಂಪ್ಸ್, ಹಾಡು ಹಾಗೂ ಟ್ರೇಲರ್ ಬಿಡುಗಡೆಯಾಗಲಿದೆ. ಈ ಚಿತ್ರದ ಆಡಿಯೋ ರೈಟ್ಸ್ ಅನ್ನು ಖ್ಯಾತ ಆನಂದ್ ಆಡಿಯೋ ಸಂಸ್ಥೆ ಪಡೆದುಕೊಂಡಿದೆ. ಸ್ವಾಮಿನಾಥನ್ ರಾಮಕೃಷ್ಣ ಹಾಗೂ ಸುಪ್ರೀತ್ ಫಾಲ್ಗುಣ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಹಾಡು ಹಾಗೂ ಟೀಸರ್ ಮೂಲಕ “ಮಾಂಕ್ ದಿ ಯಂಗ್” ಜನರ ಮನಸ್ಸಿಗೆ ಹತ್ತಿರವಾಗಿದೆ.
ವಿಂಟೇಜ್, ಫ್ಯಾಂಟಸಿ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಮಾಸ್ಚಿತ್ ಸೂರ್ಯ ನಿರ್ದೇಶಿಸಿದ್ದಾರೆ.
ಸರೋವರ್ ಅವರು ನಾಯಕನಾಗಿ ನಟಿಸಿರುವ ಈ ಚಿತ್ರದ ನಾಯಕಿ ಸೌಂದರ್ಯ ಗೌಡ. ತೆಲುಗು ಹಾಗೂ ತಮಿಳಿನ ಪ್ರಸಿದ್ದ ನಟ ಬಬ್ಲೂ ಪೃಥ್ವಿರಾಜ್ ಅವರು ಈ ಚಿತ್ರದ ವಿಶೇಷಪಾತ್ರದಲ್ಲಿ ಅಭಿನಯಿಸಿದ್ದು, ಉಷಾ ಭಂಡಾರಿ, ಪ್ರಣಯ ಮೂರ್ತಿ ಮುಂತಾದವರು ತಾರಾಬಳಗದಲ್ಲಿದ್ದಾರೆ.
ನಿವೃತ್ತ ಆರ್ಮಿ ಆಫೀಸರ್ ಕರ್ನಲ್ ರಾಜೇಂದ್ರನ್, ವಿನಯ್ ಬಾಬು ರೆಡ್ಡಿ ಶೆಟ್ಟಿಹಳ್ಳಿ, ಗೋಪಿಚಂದ್, ಲಾಲ್ ಚಂದ್ ಖತಾರ್ ಮತ್ತು ಸರೋವರ್ ಐದು ಜನ ಸೇರಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ನಿರ್ಮಾಪಕರೆಲ್ಲಾ ಈ ಚಿತ್ರದಲ್ಲಿ ನಟನೆಯನ್ನೂ ಮಾಡಿರುವುದು ವಿಶೇಷ.
ಕಾರ್ತಿಕ್ ಶರ್ಮ ಛಾಯಾಗ್ರಹಣ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ, ಕ್ಲೈಮಾಕ್ಸ್ ಛಾಯಾಗ್ರಹಣ ದೀಪಕ್ ಹಾಗೂ ಧನುಷ್ ಬೆದ್ರೆ ಅವರ ಸಂಕಲನ ಹರ್ಷವರ್ಧನ್ ಏ ಎಲ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.