ನವೆಂಬರ್ 22 ರಂದು ಪ್ರಜ್ವಲ್ ದೇವರಾಜ್ ಅಭಿನಯದ “ಮಾಫಿಯಾ” ಚಿತ್ರತಂಡದಿಂದ ಬಿಗ್ ಅನೌನ್ಸ್ ಮೆಂಟ್. .
ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸಿರುವ, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ, ಅದಿತಿ ಪ್ರಭುದೇವ ನಾಯಕಿಯಾಗಿ ನಟಿಸಿರುವ ಹಾಗೂ ಲೋಹಿತ್ ಹೆಚ್ ನಿರ್ದೇಶಿಸಿರುವ ಬಹು ನಿರೀಕ್ಷಿತ “ಮಾಫಿಯಾ” ಚಿತ್ರತಂಡದಿಂದ ನವೆಂಬರ್ 22 ರ ಬುಧವಾರ ಸಂಜೆ 5 ಗಂಟೆ 5 ನಿಮಿಷಕ್ಕೆ ಬಿಗ್ ಅನೌನ್ಸ್ ಮೆಂಟ್ ಆಗಲಿದೆ. ಆರಂಭದಿಂದಲೂ ಕುತೂಹಲ ಮೂಡಿಸಿರುವ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು ಸದ್ಯದಲ್ಲೇ ತೆರೆಗೆ ಬರಲಿದೆ.