ವಿಜಯ ದಶಮಿಯಂದು ಬಿಡುಗಡೆಯಾಯಿತು “ಗರುಡ ಪುರಾಣ” ಚಿತ್ರದ ಟ್ರೇಲರ್.
ನಾಡಿನೆಲ್ಲೆಡೆ ಈಗ ದಸರಾ ಸಡಗರ. ವಿಜಯ ದಶಮಿ ಶುಭದಿನದಂದು 27 ಫ್ರೇಮ್ ಕ್ರಿಯೇಷನ್ಸ್ ಲಾಂಛನದಲ್ಲಿ ಸಿಂಧು ಕೆ.ಎಂ ಮತ್ತು ಬಿ.ಎಲ್ ಯೋಗೇಶ್ ಕುಮಾರ್ ನಿರ್ಮಿಸಿರುವ, ಮಂಜುನಾಥ್ ಬಿ ನಾಗಬಾ ಕಥೆ, ಚಿತ್ರಕಥೆ ಬರೆದು ಸಂಕಲನ ಮಾಡಿ ನಿರ್ದೇಶಿಸಿರುವ “ಗರುಡ ಪುರಾಣ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಟ್ರೇಲರ್ ಸಾಕಷ್ಟು ಕುತೂಹಲ ಮೂಡಿಸಿದ್ದು, ನವೆಂಬರ್ 3 ರಂದು ಚಿತ್ರ ತೆರೆಗೆ ಬರಲಿದೆ. ಇತ್ತೀಚೆಗಷ್ಟೇ ಅಶ್ವಿನಿ ಪುನೀತ್ ರಾಜಕುಮಾರ್ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದರು. ಟೀಸರ್ ಕೂಡ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗಿ ಮೆಚ್ಚುಗೆ ಪಡೆದುಕೊಂಡಿದೆ.
ಜನಪ್ರಿಯ “ಕಾಂತಾರ” ಸೇರಿದಂತೆ ಅನೇಕ ಚಿತ್ರಗಳಿಗೆ ಆನ್ ಲೈನ್ ಎಡಿಟರ್ ಆಗಿ ಕಾರ್ಯನಿರ್ವಹಿಸಿರುವ ಮಂಜುನಾಥ್ ಬಿ ನಾಗಬಾ ಈ ಚಿತ್ರದ ಮೂಲಕ ನಿರ್ದೇಶಕರಾಗಿ ಚಿತ್ರರಂಗ ಪ್ರವೇಶಿಸಿದ್ದಾರೆ.
ಚಿತ್ರದ ಒಂದು ಭಾಗಕ್ಕೆ ಗರುಡ ಪುರಾಣದ ಕೆಲವು ಅಂಶಗಳು ಹೊಂದಿಕೆಯಾಗುತ್ತದೆ. ಹಾಗಾಗಿ “ಗರುಡ ಪುರಾಣ” ಚಿತ್ರಕ್ಕೆ ಶೀರ್ಷಿಕೆ ಇಡಲಾಗಿದೆ.
ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ
“ಗರುಡ ಪುರಾಣ” ಚಿತ್ರದ ನಾಯಕನಾಗೂ ಮಂಜುನಾಥ್ ಬಿ ನಾಗಬಾ ನಟಿಸಿದ್ದಾರೆ, ದಿಶಾ ಶೆಟ್ಟಿ ನಾಯಕಿಯಾಗಿ ಅಭಿನಯಿಸಿದ್ದಾರೆ. “ಭಜರಂಗಿ” ಖ್ಯಾತಿಯ ಚೆಲುವರಾಜು, ಸಂತೋಷ್ ಕರ್ಕಿ, ಕೆಂಚಣ್ಣ, ರಾಜಕುಮಾರ್, ಮಹೇಂದ್ರ ಗೌಡ ಮುಂತಾದವರು ತಾರಾಬಳಗದಲ್ಲಿದ್ದಾರೆ.
ಪುನೀತ್ ಆರ್ಯ ಈ ಚಿತ್ರದ ಹಾಡುಗಳನ್ನು ಬರೆದಿದ್ದು, ರಾಕೇಶ್ ಆಚಾರ್ಯ ಸಂಗೀತ ನೀಡಿದ್ದಾರೆ. ಸುನೀಲ್ ನರಸಿಂಹಮೂರ್ತಿ “ಗರುಡ ಪುರಾಣ” ಚಿತ್ರದ ಛಾಯಾಗ್ರಾಹಕರು.