ಸಮ್ಮರ್ ಹಾಲಿಡೇಸ್ ಗೆ ಮನೋರಂಜನೆಯ ರಸದೌತಣ ನೀಡಲು ಬರುತ್ತಿದೆ “ಗನ್ಸ್ ಅಂಡ್ ರೋಸಸ್” .
ಹೆಚ್ ಆರ್ ನಟರಾಜ್ ನಿರ್ಮಾಣದ, ಹೆಚ್ ಎಸ್ ಶ್ರೀನಿವಾಸಕುಮಾರ್ ನಿರ್ದೇಶನದಲ್ಲಿ ಅರ್ಜುನ್ ನಾಯಕರಾಗಿ ನಟಿಸಿರುವ “ಗನ್ಸ್ ಅಂಡ್” ರೋಸಸ್ ಚಿತ್ರ ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ನಿರ್ಮಾಣವಾಗಿದೆ. ಇತ್ತೀಚೆಗೆ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರ ನೀಡಿದೆ. ಚಿತ್ರದ ಕುರಿತು ಸೆನ್ಸಾರ್ ಮಂಡಳಿ ಮೆಚ್ಚುಗೆ ಮಾತುಗಳಾಡಿದೆ. ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳ ಸೆನ್ಸಾರ್ ಕೂಡ ಇದೇ ತಿಂಗಳಲ್ಲಿ ಆಗಲಿದೆ. ಏಪ್ರಿಲ್ ನಲ್ಲಿ ಬೇಸಿಗೆ ರಜೆ ಆರಂಭವಾಗಲಿದ್ದು, ಆ ಸಮಯದಲ್ಲಿ ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಚಿತ್ರವನ್ನು ತೆರೆಗೆ ತರುವ ಸಿದ್ದತೆ ನಡೆಯುತ್ತಿದೆ.
ಶರತ್ ಅವರು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಈ ಚಿತ್ರಕ್ಕೆ ಶಶಿಕುಮಾರ್ ಸಂಗೀತ ನಿರ್ದೇಶನ, ಆರ್ ಜನಾರ್ದನ್ ಛಾಯಾಗ್ರಹಣ, ಸಂಜೀವ ರೆಡ್ಡಿ ಸಂಕಲನ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ, ಮಲ್ಲೇನಹಳ್ಳಿ ರಾಜು ನಿರ್ಮಾಣ ನಿರ್ವಹಣೆ ಮತ್ತು ಮುನಿರಾಜ್ (ಕಬ್ಜ) ಅವರ ಸಹ ನಿರ್ದೇಶನವಿದೆ.
ಕಥೆಗಾರರಾದ ಅಜಯ್ ಕುಮಾರ್ ಅವರ ಪುತ್ರ ಅರ್ಜುನ್ ನಾಯಕನಾಗಿ ನಟಿಸಿರುವ ಈ ಚಿತ್ರದ ನಾಯಕಿ ಯಶ್ಚಿಕ ನಿಷ್ಕಲ. ಕಿಶೋರ್, ಶೋಭ್ ರಾಜ್, ಅವಿನಾಶ್, ಸುಚೇಂದ್ರ ಪ್ರಸಾದ್, ಅಶ್ವಥ್ ನೀನಾಸಂ, ಹರೀಶ್, ಜೀವನ್ ರಿಚಿ, ಅರುಣಾ ಬಾಲರಾಜ್, ಡೈಮಂಡ್ ರಾಜಣ್ಣ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.