ಟ್ರೇಲರ್ ನಲ್ಲೇ ಎಲ್ಲರ ಗಮನ ಸೆಳೆದಿರುವ “ಪಿಚ್ಚರ್”, ಆಗಸ್ಟ್ 7 ರಿಂದ ಚಿತ್ರಮಂದಿರಗಳಲ್ಲಿ.

ಕನ್ನಡ ಹಾಗೂ ತುಳು ಭಾಷೆಗಳಲ್ಲಿ ನಿರ್ಮಾಣವಾಗಿದೆ ಶಿಲ್ಪಾ ಗಣೇಶ್ ನಿರ್ಮಾಣ ಹಾಗೂ ಸಂದೀಪ ಬೆದ್ರ ನಿರ್ದೇಶನದ ಈ ಚಿತ್ರ .

ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳ ನಿರ್ಮಾಪಕಿ ಶಿಲ್ಪಾ ಗಣೇಶ್ ಅವರು ನಿರ್ಮಿಸಿರುವ, ಸಂದೀಪ ಬೆದ್ರ ಚೊಚ್ಚಲ ನಿರ್ದೇಶನದ ಹಾಗೂ ನಿತ್ಯಪ್ರಕಾಶ್ ಬಂಟ್ವಾಳ ನಾಯಕನಾಗಿ ನಟಿಸಿರುವ “ಪಿಚ್ಚರ್” ಚಿತ್ರ ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ. ಕನ್ನಡ ಹಾಗೂ ತುಳು ಎರಡು ಭಾಷೆಗಳಲ್ಲೂ ನಿರ್ಮಾಣವಾಗಿರುವ ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದ್ದು, ಟ್ರೇಲರ್ ಗೆ ನಿರೀಕ್ಷೆಗೂ ಮೀರಿ ಮೆಚ್ಚುಗೆ ದೊರಕಿದೆ ಹಾಗೂ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯೂ ಆಗುತ್ತಿದೆ. ಈಗಾಗಲೇ ಹಾಡುಗಳು ಹಾಗೂ ಟ್ರೇಲರ್ ಮೂಲಕ ಎಲ್ಲರ ಗಮನ ಸೆಳೆದಿರುವ ಈ ಚಿತ್ರ ಆಗಸ್ಟ್ 7 ರಂದು ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ.

ಕೌಟುಂಬಿಕ, ಕಾಮಿಡಿ ಕಥಾಹಂದರದ ಜೊತೆಗೆ ಮನೋರಂಜನೆಯೇ ಪ್ರಧಾನವಾಗಿರುವ ಈ ಚಿತ್ರವನ್ನು ಸಂದೀಪ್ ಬೆದ್ರ ನಿರ್ದೇಶಿಸಿದ್ದಾರೆ. ಇದು ಅವರ ಚೊಚ್ಚಲ ನಿರ್ದೇಶನದ ಚಿತ್ರ. ಸಂತೋಷ್ ರೈ ಪಾತಾಜೆ ಹಾಗೂ ಚಂದ್ರಶೇಖರ್ ಕೆ.ಎಸ್ ಅವರ ಛಾಯಾಗ್ರಹಣ, ರಾಜು ಆರ್ಯನ್ ಸಂಕಲನ, ಧನಂಜಯ್.ಬಿ – ಶ್ರೀರಾಜು ನೃತ್ಯ ನಿರ್ದೇಶನ, ರಾಧೇಶ್ – ಸಂತೋಷ್ ಪೂಜಾರಿ ಕಲಾ ನಿರ್ದೇಶನ ಹಾಗೂ ಥ್ರಿಲ್ಲರ್ ಮಂಜು ಅವರ ಸಾಹಸ ನಿರ್ದೇಶನವಿರುವ ಈ ಚಿತ್ರಕ್ಕೆ ಮೋಹನ್ ಭಟ್ಕಳ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಸ್ಯಾಮುಯೆಲ್ ಅಭಿ ಸಂಗೀತ ನೀಡಿರುವ ಈ ಚಿತ್ರದಲ್ಲಿ ನಾಲ್ಕು ಹಾಡುಗಳಿದೆ. ನಿರ್ಮಾಪಕಿ ಶಿಲ್ಪಾ ಗಣೇಶ್ ಅವರು ಈ ಚಿತ್ರದ “ಗೋಕುಲದ ರಾಧೆ” ಹಾಡನ್ನು ಹಾಡಿರುವುದು ವಿಶೇಷ.

ನಿತ್ಯಪ್ರಕಾಶ್ ಬಂಟ್ವಾಳ “ಪಿಚ್ಚರ್” ಚಿತ್ರದ ನಾಯಕನಾಗಿದ್ದು, ನಾಯಕಿಯಾಗಿ ಅಮೃತ ಸುದು ಅಭಿನಯಿಸಿದ್ದಾರೆ. ದೇವದಾಸ್ ಕಾಪಿಕಾಡ್, ನವೀನ್ ಡಿ ಪಡೀಲ್, ಅರವಿಂದ್ ಬೋಳಾರ್, ಭೋಜರಾಜ್ ವಾಮಂಜೂರ್, ಸಾಯಿಕೃಷ್ಣ, ವಜ್ರಧೀರ್ ಜೈನ್, ಸದಾಶಿವ ಅಮಿನ್, ಪ್ರಸನ್ನ ಶೆಟ್ಟಿ ಬೈಲೂರ್, ಸಂದೀಪ್ ಶೆಟ್ಟಿ ಮಾಣಿ, ಉಮೇಶ್ ಪೂಜಾರ್, ಜಯಶೀಲ ಮರೊಲಿ, ರೂಪ ವರ್ಕಾಡಿ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

Similar Posts

0 0 votes
Article Rating
Subscribe
Notify of
guest
0 Comments
Oldest
Newest Most Voted