ಅದ್ದೂರಿ ಸೆಟ್ ನಲ್ಲಿ ಪ್ರಜ್ವಲ್ ದೇವರಾಜ್ ಅಭಿನಯದ “ಚೀತಾ” ಚಿತ್ರದ ಚಿತ್ರೀಕರಣ . ಇದು ನೃತ್ಯ ನಿರ್ದೇಶಕ ರಾಜ ಕಲೈ ಕುಮಾರ್ ನಿರ್ದೇಶನದ ಮೊದಲ ಚಿತ್ರ .ಅದ್ದೂರಿ ಸೆಟ್ ನಲ್ಲಿ ಪ್ರಜ್ವಲ್ ದೇವರಾಜ್ ಅಭಿನಯದ “ಚೀತಾ” ಚಿತ್ರದ ಚಿತ್ರೀಕರಣ .

ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರತಿಭಾ ನರೇಶ್ ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕ ರಾಜ ಕಲೈ ಕುಮಾರ್ ಪ್ರಥಮ ನಿರ್ದೇಶನದ ಹಾಗೂ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸುತ್ತಿರುವ “ಚೀತಾ” ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ಸಾಗಿದೆ. ಈ ಚಿತ್ರಕ್ಕಾಗಿ ನಗರದ ಹೆಚ್ ಎಂ ಟಿ ಫ್ಯಾಕ್ಟರಿ ಆವರಣದಲ್ಲಿ ಬೃಹತ್ ಮಾರ್ಕೆಟ್ ಸೆಟ್ ಹಾಕಲಾಗಿದೆ. ಮಾಧ್ಯಮದವರನ್ನು ಚಿತ್ರೀಕರಣ ಸ್ಥಳಕ್ಕೆ ಆಹ್ವಾನಿಸಿದ್ದ ಚಿತ್ರತಂಡದ ಸದಸ್ಯರು “ಚೀತಾ” ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದರು.

ಕಳೆದ 23 ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಡ್ಯಾನ್ಸರ್ ಆಗಿ, ಡ್ಯಾನ್ಸ್ ಮಾಸ್ಟರ್ ಆಗಿ ಕಾರ್ಯ ನಿರ್ವಹಿಸಿದ್ದೇನೆ ಎಂದು ಮಾತನಾಡಿದ ನಿರ್ದೇಶಕ ರಾಜ ಕಲೈ ಕುಮಾರ್, ಇದು ನನ್ನ ನಿರ್ದೇಶನದ ಮೊದಲ ಚಿತ್ರ. ನಾನು ಮೊದಲು ನೃತ್ಯ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದು ಪ್ರಜ್ವಲ್ ಅವರ ಜೊತೆ. ಈಗ ನನ್ನ ಮೊದಲ ನಿರ್ದೇಶನದ ಚಿತ್ರಕ್ಕೂ ಅವರೆ ನಾಯಕ. “ಚೀತಾ”, ಮಾರ್ಕೆಟ್ ನಲ್ಲೇ ನಡೆಯುವ ಕಥೆ. ಮಾರುಕಟ್ಟೆಯಲ್ಲೇ ಹುಟ್ಟಿಬೆಳೆದ ಹುಡುಗನೊಬ್ಬನ ಕಥೆಯೂ ಹೌದು. ಪ್ರಜ್ವಲ್ ಅವರದು ಈ ಚಿತ್ರದಲ್ಲಿ ಮಾರುಕಟ್ಟೆಯಲ್ಲಿ ನಡೆಯುವ ಅವ್ಯವಹಾರಗಳ ವಿರುದ್ದ ಹೋರಾಟ ಮಾಡುವ ಹೋರಾಟಗಾರನ ಪಾತ್ರ. ಅಲ್ಲೇ ಬೆಳೆದು ಅಲ್ಲೇ ಇರುವ ಆ ಹುಡುಗನ ಕಂಡರೆ ಅಲ್ಲಿನ ಜನರಿಗೆ ಅಚ್ಚುಮೆಚ್ಚು. ಈಗಿನ ಜನರಿಗೆ ಬೇಕಾಗುವ ಎಲ್ಲಾ ರೀತಿಯ ಅಂಶಗಳು ಈ ಚಿತ್ರದಲ್ಲಿದೆ.

ಕಲಾ ನಿರ್ದೇಶಕ ಶಿವಕುಮಾರ್ ಬೃಹತ್ ಮಾರುಕಟ್ಟೆ ಸೆಟ್ ಹಾಕಿದ್ದಾರೆ. ಸುಮಾರು ಎರಡು ತಿಂಗಳ ಕಾಲ ಇನ್ನೂರಕ್ಕೂ ಅಧಿಕ ಜನರ ಪರಿಶ್ರಮದಲ್ಲಿ ಈ ಅದ್ದೂರಿ ಸೆಟ್ ನಿರ್ಮಾಣವಾಗಿದೆ. ಹೆಚ್ಚಿನ ಚಿತ್ರೀಕರಣ ಇದೇ ಜಾಗದಲ್ಲಿ ನಡೆಯುತ್ತದೆ. ಒಂದು ವಾರಗಳ ಕಾಲ ಮಾತ್ರ ಮೈಸೂರಿನಲ್ಲಿ ಚಿತ್ರೀಕರಣ ಮಾಡಲಿದ್ದೇವೆ. ಹಿರಿಯ ನೃತ್ಯ ನಿರ್ದೇಶಕ ಚಿನ್ನಿಪ್ರಕಾಶ್ ಅವರು ನಮ್ಮ ಚಿತ್ರದ ಪ್ರಮುಖಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ನಾಯಕಿಯಾಗಿ ಮೇಘ ಶೆಟ್ಟಿ ನಟಿಸುತ್ತಿದ್ದಾರೆ. ಗುರು ಜಗ್ಗೇಶ್, ಶೃತಿ ಹರಿಹರನ್, ರಂಗಾಯಣ ರಘು, ಶಿವರಾಜ್ ಕೆ ಆರ್ ಪೇಟೆ, ಸಿದ್ಲಿಂಗು ಶ್ರೀಧರ್, ಟೆನ್ನಿಸ್ ಕೃಷ್ಣ, ” ವಾಮನ” ಚಿತ್ರದ ನಿರ್ದೇಶಕ ಶಂಕರ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ದಿನ ನಿತ್ಯ ಸುಮಾರು ೧೫೦ ರಿಂದ ೨೦೦ ಜನ ಚಿತ್ರೀಕರಣದಲ್ಲಿ ಭಾಗಿಯಾಗಿರುತ್ತೇವೆ. ಯಾವುದಕ್ಕೂ ಕೊರತೆ ಬಾರದ ಹಾಗೆ ನಿರ್ಮಾಣ ಮಾಡುತ್ತಿರುವ ನಿರ್ಮಾಪಕಿ ಪ್ರತಿಭಾ ನರೇಶ್ ಅವರಿಗೆ ಹಾಗೂ ಸಹಕಾರ ನೀಡುತ್ತಿರುವ ನನ್ನ ಇಡೀ ಚಿತ್ರತಂಡಕ್ಕೆ ಧನ್ಯವಾದ ತಿಳಿಸುತ್ತೇನೆ.

ನಿರ್ದೇಶಕರು ಹೇಳಿದ ಹಾಗೆ ಮಾರ್ಕೆಟ್ ನಲ್ಲೇ ಬೆಳೆಯುವ ಹುಡುಗನ ಪಾತ್ರ ನನ್ನದು. ಹಿರಿಯ ನಟರೊಂದಿಗೆ ಕೆಲಸ ಮಾಡುತ್ತಿರುವುದು ಖುಷಿಯಾಗಿದೆ. ಮಾರ್ಕೆಟ್ ನಲ್ಲಿ ಎಲ್ಲಾ ಕೆಲಸಗಳು ವೇಗವಾಗಿ ನಡೆಯುತ್ತಿರುತ್ತದೆ. ನನ್ನ ಪಾತ್ರ ಕೂಡ ಅದೇ ರೀತಿ. ಹಾಗಾಗಿ ಚಿತ್ರಕ್ಕೆ “ಚೀತಾ” ಎಂದು ಹೆಸರಿಡಲಾಗಿದೆ. ಚಿತ್ರದ ಕಥೆಯೂ ತುಂಬಾ ಚೆನ್ನಾಗಿದೆ ಎಂದರು ನಾಯಕ ಪ್ರಜ್ವಲ್ ದೇವರಾಜ್.

ನಾನು ನಿರ್ದೇಶಕರ ನಟ. ಅವರು ಹೇಳಿದ ಹಾಗೆ ಮಾಡುತ್ತಿದ್ದೇನೆ. ಹಿಂದೆ ತಮಿಳು ಚಿತ್ರವೊಂದರಲ್ಲಿ ನಟಿಸಿದ್ದೆ. ಬಹಳ ದಿನಗಳ ನಂತರ ಈ ಚಿತ್ರದಲ್ಲಿ ಅಭಿನಯಿಸುತ್ತಿರುವುದಾಗಿ ಹಿರಿಯ ನೃತ್ಯ ನಿರ್ದೇಶಕ ಚಿನ್ನಿಪ್ರಕಾಶ್ ತಿಳಿಸಿದರು.

ನಾಯಕಿ ಮೇಘ ಶೆಟ್ಟಿ ಕೂಡ ತಮ್ಮ ಪಾತ್ರದ ಕುರಿತು ಮಾಹಿತಿ ನೀಡಿದರು. ನಟರಾದ ಶಿವರಾಜ್ ಕೆ ಆರ್ ಪೇಟೆ, ಸಿದ್ಲಿಂಗು ಶ್ರೀಧರ್, ಟೆನ್ನಿಸ್ ಕೃಷ್ಣ, ಶಂಕರ್, ಬೇಬಿ ಲೇಖನ ಹಾಗೂ ಛಾಯಾಗ್ರಾಹಕ ಗುರುಪ್ರಸಾದ್ “ಚೀತಾ” ಕುರಿತು ಮಾತನಾಡಿದರು. ನಿರ್ಮಾಪಕಿ ಪ್ರತಿಭಾ ನರೇಶ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Similar Posts

  • “ಮಹಾನ್” ನಾಯಕನಾಗಿ ವಿಜಯ ರಾಘವೇಂದ್ರ

    ಯುಗಾದಿ ಸಂದರ್ಭದಲ್ಲಿ ಶೀರ್ಷಿಕೆ ಅನಾವರಣ ಮಾಡಿ‌ ಶುಭಕೋರಿದ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಕನ್ನಡದಲ್ಲಿ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ಪಿ.ಸಿ.ಶೇಖರ್ ನಿರ್ದೇಶನದ, ಪ್ರತಿಷ್ಠಿತ ಅಲೆಯನ್ಸ್ ಯೂನಿವರ್ಸಿಟಿ ವಿದ್ಯಾ ಸಂಸ್ಥೆಯ ಸಹಯೋಗದೊಂದಿಗೆ ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಅವರು ನಿರ್ಮಿಸುತ್ತಿರುವ ನೂತನ ಚಿತ್ರಕ್ಕೆ “ಮಹಾನ್” ಎಂದು ಹೆಸರಿಡಲಾಗಿದೆ. “ಚಿನ್ನಾರಿಮುತ್ತ” ವಿಜಯ ರಾಘವೇಂದ್ರ ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಶೀರ್ಷಿಕೆಯನ್ನು ಯುಗಾದಿ ಹಬ್ಬದ ಸಂದರ್ಭದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅನಾವರಣ ಮಾಡಿದರು. ಶೀರ್ಷಿಕೆ ಅನಾವರಣ ಮಾಡಿ…

  • “ಎಕ್ಸ್‌ ಅಂಡ್‌ ವೈ” ಹಿಂದೆ ಬಿದ್ದ ನಿರ್ದೇಶಕ ಡಿ. ಸತ್ಯ ಪ್ರಕಾಶ್‌.

    ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಡಿ.ಸತ್ಯ ಪ್ರಕಾಶ್‌ ಚಿತ್ರ ಸೆಟ್ಟೇರಿತು ಎಂದರೆ ಏನಾದರೊಂದಷ್ಟು ವಿಶೇಷತೆಗಳನ್ನು ಹೊಂದಿರುತ್ತದೆ ಎಂದು ಪ್ರೇಕ್ಷಕರು ಮತ್ತು ಚಿತ್ರೋದ್ಯಮದ ಮಂದಿ ಎದುರು ನೋಡುತ್ತಾರೆ. ಅದನ್ನು ಅಷ್ಟೇ ಜತನದಿಂದ ಕಾಪಾಡಿಕೊಂಡು ಬಂದಿದ್ದಾರೆ ನಿರ್ದೇಶಕ ಸತ್ಯ. ಬಹಳ ದಿನಗಳ ನಂತರ ಈಗ ಅಳೆದು ತೂಗಿ ಅತ್ಯಾಪ್ತ ಕಥೆ ಮಾಡಿಕೊಂಡು ಅದಕ್ಕೆ “ಎಕ್ಸ್ ಅಂಡ್‌ ವೈ” ಎಂದು ಶೀರ್ಷಿಕೆ ಇಟ್ಟುಕೊಂಡು ಅಖಾಡಕ್ಕೆ ಇಳಿದಿದ್ದಾರೆ. ತಮ್ಮ ಹಿಂದಿನ ಮೂರು ಚಿತ್ರಗಳಲ್ಲಿ ಮೂಡಿಸಿದ ವಿಶೇಷತೆಗಳಂತೆ ಇಲ್ಲೂ ಚಿತ್ರದ ಟೈಟಲ್‌,…

  • ಮೊದಲ ಹಾಡಿನಲ್ಲಿ ಮೋಡಿ ಮಾಡಿದ “ಪಿಚ್ಚರ್

    ಶಿಲ್ಪಾ ಗಣೇಶ್ ನಿರ್ಮಾಣ ಹಾಗೂ ಸಂದೀಪ ಬೆದ್ರ ನಿರ್ದೇಶನದ ಈ ಚಿತ್ರಕ್ಕೆ ನಿತ್ಯಪ್ರಕಾಶ್ ಬಂಟ್ವಾಳ ನಾಯಕ .ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳ ನಿರ್ಮಾಪಕಿ ಶಿಲ್ಪಾ ಗಣೇಶ್ ಅವರು ನಿರ್ಮಿಸಿರುವ, ಸಂದೀಪ ಬೆದ್ರ ಚೊಚ್ಚಲ ನಿರ್ದೇಶನದ ಹಾಗೂ ನಿತ್ಯಪ್ರಕಾಶ್ ಬಂಟ್ವಾಳ ನಾಯಕನಾಗಿ ನಟಿಸಿರುವ ಚಿತ್ರ “ಪಿಚ್ಚರ್”. ಕನ್ನಡ ಹಾಗೂ ತುಳು ಎರಡು ಭಾಷೆಗಳಲ್ಲೂ ನಿರ್ಮಾಣವಾಗಿರುವ ಈ ಚಿತ್ರದ ಮೊದಲ ಹಾಡು ಇತ್ತೀಚೆಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಕನ್ನಡದಲ್ಲಿ ಈ ಹಾಡನ್ನು ಚೇತನ್ ಕುಮಾರ್ ಬರೆದರೆ, ತುಳುವಿನಲ್ಲಿ…

  • ಹಿಟ್ ಆಯ್ತು “ರಾನಿ” ಹಾಡು ….”ಕೋಲೆ ಕೋಲೆ” ಎನ್ನುತ್ತಾ ಬಂದರು ಕಿರಣ್ ರಾಜ್.

    ಕಿರಣ್ ರಾಜ್ ನಾಯಕನಾಗಿ ನಟಿಸಿರುವ “ರಾನಿ” ಚಿತ್ರ ಪೊಸ್ಟರ್ ಹಾಗೂ ಟೀಸರ್ ಮೂಲಕ ಈಗಾಗಲೇ ಸದ್ದು ಮಾಡಿದೆ. ಮಹಾಶಿವರಾತ್ರಿಯ ದಿನದಂದು “ರಾನಿ” ಚಿತ್ರದ “ಕೋಲೆ ಕೋಲೆ” ಎನ್ನುವ ಜಾನಪದ ಶೈಲಿಯ ಮಾಸ್ ಹಾಡು ಟಿ ಸಿರೀಸ್ ಯೂಟ್ಯೂಬ್ ಚಾನಲ್ ಮೂಲಕ ಬಿಡುಗಡೆಯಾಗಿ ಪಡ್ಡೆ ಹುಡುಗರ ಮನಸ್ಸು ಗೆದ್ದಿದೆ. ಈಗಾಗಲೇ ಒಂದು ಮಿಲಿಯನ್ ಜನರು ಈ ಹಾಡನ್ನು ವೀಕ್ಷಿಸಿದ್ದಾರೆ. ಪ್ರಾರಂಬದಿಂದಲೂ ವಿಭಿನ್ನವಾಗಿ ಪ್ರಚಾರ ಮಾಡುತ್ತಿರುವ ರಾನಿ ತಂಡ ಈ ಬಾರಿ ಶಿವರಾತ್ರಿ ಹಬ್ಬದ ಪ್ರಯುಕ್ತ ಚಿತ್ರದ ನಾಯಕ ನಟ…

  • ಬಹು ನಿರೀಕ್ಷಿತ “ರೋಲೆಕ್ಸ್” ಚಿತ್ರಕ್ಕೆ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯ

    ಕಾಮಿಡಿ ಹಾಗೂ ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಕೋಮಲ್ ಕುಮಾರ್ ನಾಯಕ. ಸೋನಾಲ್ ಮೊಂತೆರೊ ನಾಯಕಿ . ಮಧು ಫಿಲಂ ಸರ್ಕ್ಯೂಟ್ಸ್ ಸಂಸ್ಥೆ ಲಾಂಛನದಲ್ಲಿ ಅಂಬಟಿ ಮಧು ಮೋಹನಕೃಷ್ಣ ಅವರು ಕನ್ನಡದಲ್ಲಿ ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿರುವ ಮೊದಲ ಚಿತ್ರ ‌‌”ರೋಲೆಕ್ಸ್”. ಈ ಹಿಂದೆ “ಬಿಲ್ ಗೇಟ್ಸ್” ಚಿತ್ರವನ್ನು ನಿರ್ದೇಶನ ಮಾಡಿದ್ದ ವಿ.ಸಿ.ಶ್ರೀನಿವಾಸ್ ಅವರು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ನಾಯಕನಾಗಿ ಕೋಮಲ್ ಕುಮಾರ್ ನಟಿಸುತ್ತಿದ್ದಾರೆ. ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಕೋಮಲ್ ಕುಮಾರ್…

  • ಜನಮನಸೂರೆಗೊಳ್ಳುತ್ತಿದೆ “BAD” ಚಿತ್ರದ ಸುಂದರ ಯುಗಳಗೀತೆ” .

    ಪಿ.ಸಿ.ಶೇಖರ್ ನಿರ್ದೇಶನದ,ಎಸ್ ಆರ್ ವೆಂಕಟೇಶ್ ಗೌಡ ನಿರ್ಮಿಸಿರುವ ಹಾಗೂ ನಕುಲ್ ಗೌಡ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ “BAD” ಚಿತ್ರಕ್ಕಾಗಿ ಖ್ಯಾತ ಸಾಹಿತಿ ಕವಿರಾಜ್ “ಮಾತಿಗೂ ಮಾತಿಗೂ” ಎಂಬ ಸುಂದರ ಯುಗಳಗೀತೆ ಬರೆದಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಹಾಡನ್ನು “ಸರಿಗಮಪ” ಖ್ಯಾತಿಯ ಪೃಥ್ವಿ ಭಟ್ ಹಾಗೂ ಸುನೀಲ್ ಗುಜಗೊಂಡ ಸುಶ್ರಾವ್ಯವಾಗಿ ಹಾಡಿದ್ದಾರೆ. ಜಂಕಾರ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿರುವ ಈ ಹಾಡು ಜನಮನಸೂರೆಗೊಳ್ಳುತ್ತಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಈಗಾಗಲೇ ಟೀಸರ್ ಹಾಗೂ ಟ್ರೇಲರ್ ಮೂಲಕ ಸದ್ದು…

0 0 votes
Article Rating
Subscribe
Notify of
guest
0 Comments
Oldest
Newest Most Voted