ವಿಷ್ಣು ಮಂಚು ಅಭಿನಯದ ‘ಕಣ್ಣಪ್ಪ – ದಿ ಗ್ರೇಟ್‍ ಎಪಿಕ್ ಇಂಡಿಯನ್‍ ಟೇಲ್‍’ ಚಿತ್ರಕ್ಕೆ ಶಿವಣ್ಣ ಎಂಟ್ರಿ

ವಿಷ್ಣು ಮಂಚು ಅಭಿನಯದ ಮಹತ್ವಾಕಾಂಕ್ಷೆಯ ಚಿತ್ರವಾದ ‘ಕಣ್ಣಪ್ಪ – ದಿ ಗ್ರೇಟ್‍ ಎಪಿಕ್ ಇಂಡಿಯನ್‍ ಟೇಲ್‍’ ಕುರಿತು ಈಗಾಗಲೇ ಪ್ರೇಕ್ಷಕರ ವಲಯದಲ್ಲಿ ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆಗಳಿವೆ. ಅದಕ್ಕೆ ಒಂದು ಪ್ರಮುಖ ಕಾರಣ ಚಿತ್ರದ ತಾರಾಗಣ. ‘ಪ್ಯಾನ್‍ ಇಂಡಿಯಾ ಸೂಪರ್ ಸ್ಟಾರ್ ಪ್ರಭಾಸ್‍ ಮತ್ತು ಮಲಯಾಳಂ ಚಿತ್ರರಂಗದ ಜನಪ್ರಿಯ ನಟ ಮೋಹನ್‍ ಲಾಲ್‍, ಈ ಚಿತ್ರದಲ್ಲಿ ನಟಿಸುತ್ತಿರುವುದು ಈಗಾಗಲೇ ಸುದ್ದಿಯಾಗಿದೆ. ಈಗ ನಮ್ಮ ಶಿವರಾಜಕುಮಾರ್ ಸಹ ಈ ಚಿತ್ರಕ್ಕೆ ಸೇರ್ಪಡೆಯಾಗಿದ್ದಾರೆ.
ಶಿವರಾಜ್‍ಕುಮಾರ್ ಅವರಿಗೂ, ಕಣ್ಣಪ್ಪನಿಗೂ ಬಹಳ ಹಳೆಯ ನಂಟು. ಹಲವು ವರ್ಷಗಳ ಹಿಂದೆ ಶಿವರಾಜ್‍ಕುಮಾರ್ ಅವರು, ‘ಶಿವ ಮೆಚ್ಚಿದ ಕಣ್ಣಪ್ಪ’ ಚಿತ್ರದಲ್ಲಿ ಮೊದಲು ದಿಣ್ಣನಾಗಿ, ಆ ನಂತರ ಶಿವನ ಅನುಗ್ರಹಕ್ಕೆ ಪಾತ್ರವಾಗುವ ಕಣ್ಣಪ್ಪನ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈಗ ಅದೇ ಪಾತ್ರವನ್ನು ತೆಲುಗಿನಲ್ಲಿ ವಿಷ್ಣು ಮಂಚು ಮಾಡುತ್ತಿದ್ದಾರೆ ಎನ್ನುವುದು ವಿಶೇಷ.

‘ಕಣ್ಣಪ್ಪ’ ಚಿತ್ರದಲ್ಲಿ ಶಿವರಾಜ್‍ಕುಮಾರ್ ಅವರ ಪಾತ್ರವೇನು? ಎಂಬ ವಿಷಯವನ್ನು ಚಿತ್ರತಂಡ ಸದ್ಯಕ್ಕೆ ರಹಸ್ಯವಾಗಿಟ್ಟಿದೆ. ಆದರೆ, ಶಿವಣ್ಣ ಅವರ ಪಾತ್ರ ಇಡೀ ಚಿತ್ರದ ಹೈಲೈಟ್‍ ಆಗಲಿದ್ದು, ಅಭಿಮಾನಿಗಳಿಗೆ ಬಹಳ ಇಷ್ಟವಾಗಲಿದೆ ಎಂಬುದು ಚಿತ್ರತಂಡದ ಅಭಿಪ್ರಾಯ.

ಈ ಹಿಂದೆ ಸ್ಟಾರ್ ಪ್ಲಸ್‍ ವಾಹಿನಿಗಾಗಿ ‘ಮಹಾಭಾರತ’ ಸರಣಿಯನ್ನು ನಿರ್ದೇಶಿಸಿದ್ದ ಮುಕೇಶ್‍ ಕುಮಾರ್ ‍ಸಿಂಗ್‍, ಈ ಪೌರಾಣಿಕ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಹಿರಿಯ ನಟ ಮತ್ತು ನಿರ್ಮಾಪಕ ಡಾ. ಮೋಹನ್‍ ಬಾಬು ನಿರ್ಮಿಸುತ್ತಿರುವ ಶಿವನ ಅಚಲ ಭಕ್ತನಾದ ಕಣ್ಣಪ್ಪನ ಕಾಲಾತೀತ ಕಥೆಯ ಚಿತ್ರೀಕರಣ ಈಗಾಗಲೇ ನ್ಯೂಜಿಲ್ಯಾಂಡ್‍ನಲ್ಲಿ ಪ್ರಾರಂಭವಾಗಿದೆ.

Similar Posts

  • ಉದ್ಯಾನನಗರಿಯಲ್ಲಿ “ಗನ್ಸ್ ಅಂಡ್ ರೋಸಸ್”

    ಭೂಗತ ಜಗತ್ತಿನ ಕಥೆಯ ಜೊತೆಗೆ ಪ್ರೇಮ ಕಥಾನಕವನ್ನು ಹೊಂದಿರುವ “ಗನ್ಸ್ ಅಂಡ್ ರೋಸಸ್” ಚಿತ್ರಕ್ಕೆ ಉದ್ಯಾನನಗರಿ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಬೆಂಗಳೂರಿನ ಕೆಂಗೇರಿ ಸುತ್ತಮುತ್ತ, ಕಂಠೀರವ ಸ್ಟುಡಿಯೋ, ಉಲ್ಲಾಳದ ವಿಶ್ವೇಶ್ವರಯ್ಯ ಲೇಔಟ್ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಬೆಂಗಳೂರು ನಗರದಲ್ಲೇ ನಡೆಯುವ ಕಥೆಯಾಗಿರುವುದರಿಂದ ಬೆಂಗಳೂರಿನಲ್ಲೇ ಚಿತ್ರೀಕರಣ ನಡೆಯುತ್ತಿದೆ. ಈವರೆಗೂ ಮಾತಿನ ಭಾಗದ ಚಿತ್ರೀಕರಣ, ಸಾಹಸ ಸನ್ನಿವೇಶದ ಚಿತ್ರೀಕರಣ ನಡೆದಿದೆ. ಥ್ರಿಲ್ಲರ್ ಮಂಜು ಈ ಚಿತ್ರದ ಸಾಹಸ ನಿರ್ದೇಶಕರು. ರಾಜಕೀಯದಲ್ಲಿ ಸಕ್ರಿಯರಾಗಿರುವ ಉದ್ಯಮಿ ಹೆಚ್ ಆರ್ ನಟರಾಜ್…

  • ‘ಗಣಪತ್‍’ ಚಿತ್ರದ ಟ್ರೇಲರ್‍ ಬಿಡುಗಡೆ!

    ಟೈಗರ್‍ ಶ್ರಾಫ್‍ ಅಭಿಮಾನಿಗಳು ಬಹಳ ಕುತೂಹಲದಿಂದ ಕಾಯುತ್ತಿರುವ ಬಹುನೀಕ್ಷಿತ ಪ್ಯಾನ್ ಇಂಡಿಯಾ ಚಿತ್ರವಾದ ‘ಗಣಪತ್‍’ನ ಟ್ರೇಲರ್‍ ಬಿಡುಗಡೆಯಾಗಿದೆ. ಟೈಗರ್‍ ಶ್ರಾಫ್‍ನ ಹೊಸ ಅವತಾರ, ಕೃತಿ ಸನಾನ್ ಅವರ ಸಾಹಸ ಮತ್ತು ಅಮಿತಾಭ್ ಬಚ್ಚನ್‍ ಅವರ ಉಪಸ್ಥಿತಿ … ಇವೆಲ್ಲವೂ ಚಿತ್ರದ ಮೇಲಿರುವ ಕುತೂಹಲವನ್ನು ಇನ್ನಷ್ಟು ಹೆಚ್ಚಾಗಿಸಿದೆ.ಇದುವರೆಗೂ ಹತ್ತು ಹಲವು ಜನಪ್ರಿಯ ಮತ್ತು ಯಶಸ್ವಿ ಚಿತ್ರಗಳನ್ನು ನಿರ್ಮಿಸಿರುವ ಬಾಲಿವುಡ್‍ನ ಖ್ಯಾತ ನಿರ್ಮಾಣ ಸಂಸ್ಥೆಯಾದ ಪೂಜಾ ಎಂಟರ್‍ಟೈನ್‍ಮೆಂಟ್‍, ಇದೀಗ ‘ಗಣಪತ್‍’ ಚಿತ್ರದ ಮೂಲಕ ನಿರ್ಮಾಣ ಮೌಲ್ಯಗಳನ್ನು ಇನ್ನಷ್ಟು ಹೆಚ್ಚಿಸಿದೆ. ಹೊಸ…

  • ಮೇ 9 ಕ್ಕೆ ಬಿಡುಗಡೆಯಾಗಲಿದೆ ನವರಸನ್ ನಿರ್ಮಾಣದ “ಸೂತ್ರಧಾರಿ

    ಚಂದನ್ ಶೆಟ್ಟಿ ಈ ಚಿತ್ರದ ಪ್ರಮುಖ ಪಾತ್ರಧಾರಿ . ಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ಚಿತ್ರರಂಗದ ಸಾಕಷ್ಟು ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವ ನವರಸನ್ ನಿರ್ಮಾಣ‌ದ, ಕಿರಣ್ ಕುಮಾರ್ ಚೊಚ್ಚಲ ನಿರ್ದೇಶನದ ಹಾಗೂ ತಮ್ಮ ಗಾಯನದ ಮೂಲಕ ಜನಪ್ರಿಯರಾಗಿರುವ ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ “ಸೂತ್ರಧಾರಿ” ಚಿತ್ರ ಮೇ 9 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ನಿರ್ಮಾಪಕರಾದ ಚೇತನ್ ಗೌಡ, ಮುನೇಗೌಡ ಹಾಗೂ ರಾಜೇಶ್ ಅವರು “ಸೂತ್ರಧಾರಿ” ಚಿತ್ರದ ಬಿಡುಗಡೆ ದಿನಾಂಕ ಅನಾವರಣ ಮಾಡಿ, ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು….

  • ಅಭಿಮಾನಿಗಳಿಂದ “ಘೋಸ್ಟ್” ಚಿತ್ರಕ್ಕೆ ಹಾಡಿನ ಉಡುಗೊರೆ. .

    ಪ್ರತಿಷ್ಠಿತ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಂದೇಶ್ ನಾಗರಾಜ್ ಅವರು ಅರ್ಪಿಸುವ, ಸಂದೇಶ್ ಎನ್ ನಿರ್ಮಾಣದ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಘೋಸ್ಟ್” ಚಿತ್ರ ಇದೇ ಅಕ್ಟೋಬರ್ 19 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ‌ಈ ಚಿತ್ರದ ಮತ್ತೊಂದು ವಿಶೇಷವೆಂದರೆ ಅಖಿಲ ಕರ್ನಾಟಕ ಡಾ||ಶಿವರಾಜಕುಮಾರ್ ಅಭಿಮಾನಿಗಳ ಸಂಘದವರು ಹಾಡೊಂದನ್ನು ಸಿದ್ದಪಡಿಸಿ “ಘೋಸ್ಟ್” ಚಿತ್ರಕ್ಕೆ ಉಡುಗೊರೆಯಾಗಿ ನೀಡಿದ್ದಾರೆ. ಈ ರೀತಿ ಅಭಿಮಾನಿಗಳು ಚಿತ್ರವೊಂದಕ್ಕೆ ಹಾಡಿನ ಉಡುಗೊರೆ ನೀಡಿರುವುದು ಇದೇ ಮೊದಲು. ಅಭಿಮಾನಿಗಳು ಅಭಿಮಾನದಿಂದ…

  • ಪ್ರಥಮ್ ಅಭಿನಯದ “ಫಸ್ಟ್ ನೈಟ್ ವಿತ್ ದೆವ್ವ” ಚಿತ್ರಕ್ಕೆ ಚಾಲನೆ .

    “ಬಿಗ್ ಬಾಸ್” ಮೂಲಕ ಜನಪ್ರಿಯರಾದ ನಟ ಪ್ರಥಮ್ ನಾಯಕನಾಗಿ ಅಭಿನಯಿಸುತ್ತಿರುವ, ಪಿ.ವಿ.ಆರ್ ಸ್ವಾಮಿ ಗೂಗಾರದೊಡ್ಡಿ ನಿರ್ದೇಶನದ “ಫಸ್ಟ್ ನೈಟ್ ವಿತ್ ದೆವ್ವ” ಚಿತ್ರದ ಮುಹೂರ್ತ ಸಮಾರಂಭ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಹಿರಿಯನಟ ಶ್ರೀನಿವಾಸಮೂರ್ತಿ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ನಂತರ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. “ಫಸ್ಟ್ ನೈಟ್ ವಿತ್ ದೆವ್ವ” ಹಾರಾರ್ ವಿತ್ ಕಾಮಿಡಿ ಜಾನರ್ ನ ಚಿತ್ರ ಎಂದು ಮಾತನಾಡಿದ ನಾಯಕ ಪ್ರಥಮ್, ಈ ಚಿತ್ರಕ್ಕೆ ನಾನೇ ಕಥೆ ಬರೆದಿದ್ದೇನೆ….

  • ಬಹು ನಿರೀಕ್ಷಿತ “ಮಾರುತ” ಚಿತ್ರದ ಬಿಡುಗಡೆ ಮೂರುವಾರ ಮುಂದಕ್ಕೆ

    ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿರುವ ಈ ಚಿತ್ರ ನವೆಂಬರ್ 21 ಕ್ಕೆ ಬಿಡುಗಡೆ . . ಡಾ||ಎಸ್ ನಾರಾಯಣ್ ನಿರ್ದೇಶನದ, ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖಪಾತ್ರದಲ್ಲಿ ನಟಿಸಿರುವ ಮತ್ತು ಕೆ.ಮಂಜು – ರಮೇಶ್ ಯಾದವ್ ಈಶಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸಿರುವ ಬಹು ನಿರೀಕ್ಷಿತ “ಮಾರುತ” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಈಗಾಗಲೇ ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿದೆ. ನಿಗದಿಯಂತೆ ಇದೇ ಅಕ್ಟೋಬರ್ 31 ರಂದು “ಮಾರುತ” ಚಿತ್ರ…

0 0 votes
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments