“ಮಹಾನ್” ಚಿತ್ರದಲ್ಲಿ ಡಾ||ಶಿವರಾಜಕುಮಾರ್. ‌ವಿಜಯ ರಾಘವೇಂದ್ರ ಅಭಿನಯದ ಈ ಚಿತ್ರದ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ ಕರುನಾಡ ಚಕ್ರವರ್ತಿ .

ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬುದ್ದೂರು ನಿರ್ಮಿಸುತ್ತಿರುವ, ಪಿ.ಸಿ.ಶೇಖರ್ ನಿರ್ದೇಶಿಸುತ್ತಿರುವ “ಮಹಾನ್” ಚಿತ್ರದ ವಿಶೇಷಪಾತ್ರದಲ್ಲಿ ಕರುನಾಡ ಚಕ್ರವರ್ತಿ ಡಾ||ಶಿವರಾಜಕುಮಾರ್ ಅಭಿನಯಿಸಿದ್ದಾರೆ. ವಿಜಯ್ ರಾಘವೇಂದ್ರ ಈ ಚಿತ್ರದ ನಾಯಕರಾಗಿ ನಟಿಸಿದ್ದಾರೆ. ಬಹಳ ವರ್ಷಗಳ ನಂತರ ಶಿವರಾಜಕುಮಾರ್ ಹಾಗೂ ವಿಜಯ ರಾಘವೇಂದ್ರ ಒಂದೇ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ

“ಮಹಾನ್” ರೈತರ ಕುರಿತಾದ ಕಥಾಹಂದರ ಹೊಂದಿರುವ ಚಿತ್ರ. ಈ ಚಿತ್ರದಲ್ಲಿ ಬರುವ ಪ್ರತಿಯೊಂದು ಪಾತ್ರವೂ ಮುಖ್ಯ ಪಾತ್ರಗಳಾಗಿರುತ್ತದೆ. ಮನೆಯಲ್ಲಿ ನಾವೇನಾದರೂ ತಪ್ಪು ಮಾಡಿದರೆ, ನಮಗೆ ಬುದ್ದಿ ಹೇಳಲು ತಂದೆ – ತಾಯಿ ಇರುತ್ತಾರೆ. ಅಂತಹುದೇ ಪರಿಸ್ಥಿತಿ ಸಮಾಜದಲ್ಲಿ ನಿರ್ಮಾಣವಾದಾಗ ಅಲ್ಲಿನ ತೊಂದರೆಗಳನ್ನು ತಿದ್ದಲು “ಮಹಾನ್” ವ್ಯಕ್ತಿಯ ಅಗತ್ಯವಿರುತ್ತದೆ. ಅಂತಹ “ಮಹಾನ್” ವ್ಯಕ್ತಿಯ ಪಾತ್ರದಲ್ಲಿ ಡಾ||ಶಿವರಾಜಕುಮಾರ್ ಅಭಿನಯಿಸಿದ್ದಾರೆ. “ಮಹಾನ್” ಚಿತ್ರದಲ್ಲಿ ಹಿರಿಯ ವಕೀಲರಾಗಿ ಶಿವರಾಜಕುಮಾರ್ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ಈ ಪಾತ್ರ ತುಂಬಾ ಪ್ರಮುಖವಾದದ್ದು. ಎಲ್ಲಾ ನಿರ್ದೇಶಕರಿಗೂ ಶಿವರಾಜಕುಮಾರ್ ಅವರ ಚಿತ್ರ ನಿರ್ದೇಶನ ಮಾಡುವ ಆಸೆ ಇರುತ್ತದೆ. ನನಗೂ ಅದು ಬಹಳ ದಿನಗಳ ಹಂಬಲ. ಆ ಆಸೆ ಈಗ ಈಡೇರಿದೆ. ಶಿವರಾಜಕುಮಾರ್ ಅವರ ಅಭಿನಯ ಪ್ರಕಾಶ್ ಬುದ್ದೂರು ಅವರಿಗು ತುಂಬಾ ಸಂತೋಷ ತಂದಿದೆ. ಇಡೀ “ಮಹಾನ್” ಚಿತ್ರತಂಡ ಶಿವರಾಜಕುಮಾರ್ ಅವರಿಗೆ ತುಂಬು ಹೃದಯದ ಧನ್ಯವಾದಗಳು ಎಂದು ನಿರ್ದೇಶಕ ಪಿ‌.ಸಿ.ಶೇಖರ್ ತಿಳಿಸಿದ್ದಾರೆ. .

“ಮಹಾನ್” ಬಹು ತಾರಾಬಳಗದ ಚಿತ್ರವಾಗಿದ್ದು, ಡಾ||ಶಿವರಾಜಕುಮಾರ್, ವಿಜಯ ರಾಘವೇಂದ್ರ, ರಾಧಿಕಾ ನಾರಾಯಣ್, ಮಿತ್ರ, ನಮ್ರತಾ ಗೌಡ, ವರ್ಷ ಬೊಳ್ಳಮ್ಮ, ಕಿರಣ್ ಶ್ರೀನಿವಾಸ್ ಸಹ ಆಭಿನಯಿಸಿದ್ದಾರೆ.

Similar Posts

0 0 votes
Article Rating
Subscribe
Notify of
guest
0 Comments
Oldest
Newest Most Voted