ಕಾರ್ತಿಕ್ ಮಹೇಶ್ ನಟನೆಯ “ರಾಮರಸ” ಚಿತ್ರತಂಡದಿಂದ ಅದ್ದೂರಿ ಗಣೇಶೋತ್ಸವ. ಗುರು ದೇಶಪಾಂಡೆ ನಿರ್ಮಾಣದ ಹಾಗೂ ಗಿರಿರಾಜ್ ನಿರ್ದೇಶನದ ಈ ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯ.
ಗುರು ದೇಶಪಾಂಡೆ ನಿರ್ಮಿಸುತ್ತಿರುವ, ‘ಜಟ್ಟ’ ಗಿರಿರಾಜ್ ನಿರ್ದೇಶನದ ಹಾಗೂ “ಬಿಗ್ ಬಾಸ್” ಖ್ಯಾತಿಯ ಕಾರ್ತಿಕ್ ಮಹೇಶ್ ನಾಯಕನಾಗಿ ನಟಿಸುತ್ತಿರುವ ‘ರಾಮರಸ’ ಚಿತ್ರತಂಡದಿಂದ ಅದ್ದೂರಿಯಾಗಿ ನಾಗರಭಾವಿಯ ಜಿ ಅಕಾಡೆಮಿಯಲ್ಲಿ ಗಣೇಶನ ಪೂಜೆ ನೆರವೇರಿತು. ಬೆಳಗ್ಗೆ ಗಣಪತಿಯನ್ನು ತಂದು ವೈಭವವಾಗಿ ಪೂಜಿಸಲಾಯಿತು. ಆನಂತರ ಸಂಜೆ ಅಷ್ಟೇ ವೈಭವವಾಗಿ ವಿಸರ್ಜನೆಯನ್ನು ಮಾಡಲಾಯಿತು. ನಿರ್ಮಾಪಕ ಗುರು ದೇಶಪಾಂಡೆ, ನಿರ್ದೇಶಕ ಗಿರಿರಾಜ್, ನಾಯಕ ಕಾರ್ತಿಕ್ ಮಹೇಶ್ ಹಾಗೂ ಜಿ ಅಕಾಡೆಮಿಯಲ್ಲಿ ಅಭಿನಯ ಕಲಿತು ಈ ಚಿತ್ರದಲ್ಲಿ ನಟಿಸುತ್ತಿರುವ ಕಲಾವಿದರು ಪೂಜಾ ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಾವು…