“ಕಾಂತಾರ”ಕ್ಕೆ ಪ್ರತಿಷ್ಠಿತ ಅಂತಾರಾಷ್ಟ್ರೀಯ ಪ್ರಶಸ್ತಿ. ಭಾರತದ 54ನೇ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ. ತೀರ್ಪುಗಾರರ ವಿಶೇಷ ಪ್ರಶಸ್ತಿ.

“ಕಾಂತಾರ”ಕ್ಕೆ ಪ್ರತಿಷ್ಠಿತ ಅಂತಾರಾಷ್ಟ್ರೀಯ ಪ್ರಶಸ್ತಿ. ಭಾರತದ 54ನೇ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ. ತೀರ್ಪುಗಾರರ ವಿಶೇಷ ಪ್ರಶಸ್ತಿ.

ಹೊಂಬಾಳೆ ಫಿಲಂಸ್‍ ನಿರ್ಮಾಣದ, ರಿಷಭ್‍ ಶೆಟ್ಟಿ ನಿರ್ದೇಶಿಸಿ ನಟಿಸಿರುವ ‘ಕಾಂತಾರ’ ಚಿತ್ರದ ಪೂರ್ವ ಭಾಗವಾದ ‘ಕಾಂತಾರ – ಅಧ್ಯಾಯ 1’, ಸೋಮವಾರವಷ್ಟೇ ಅದ್ಧೂರಿಯಾಗಿ ಪ್ರಾರಂಭವಾಗಿತ್ತು. ಇಂದು ಚಿತ್ರವು ಇನ್ನೊಂದು ಹೆಗ್ಗಳಿಕೆಗೆ ಪಾತ್ರವಾಗಿದೆ.ಮಂಗಳವಾರ, ಗೋವಾದಲ್ಲಿ ಮುಕ್ತಾಯವಾದ 54ನೇ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಹೊಂಬಾಳೆ ಫಿಲಂಸ್ ನಿರ್ಮಾಣದ, ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’ ಚಿತ್ರಕ್ಕೆ ತೀರ್ಪುಗಾರರ ವಿಶೇಷ ಪ್ರಶಸ್ತಿ ಸಿಕ್ಕಿದೆ. ಕನ್ನಡ ಚಿತ್ರವೊಂದು ಇದೇ ಮೊದಲ ಬಾರಿಗೆ ಇಂಥದ್ದೊಂದು ಪ್ರಶಸ್ತಿಗೆ ಭಾಜನವಾಗಿದೆ. ಈ ಬಾರಿ ಅಂತಾರಾಷ್ಟ್ರೀಯ ಸ್ಪರ್ಧಾ ವಿಭಾಗದಲ್ಲಿ…