ಪ್ರೇಕ್ಷಕರ ಪ್ರೀತಿಯೊಂದಿಗೆ 50ನೇ ದಿನದ ಸಂಭ್ರಮದಲ್ಲಿ ‘ಅಮೆರಿಕಾ ಅಮೆರಿಕಾ–2’ !
ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ಚಿತ್ರಕ್ಕೆ ಪ್ರೇಕ್ಷಕರ ಮೆಚ್ಚುಗೆ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿರುವ ಹಿರಿಯ ನಿರ್ದೇಶಕ ಡಾ. ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ–2’ ಚಿತ್ರವು 50ನೇ ದಿನದ ಸಂಭ್ರಮವನ್ನು ಆಚರಿಸಿಕೊಂಡಿದೆ. ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಚಿತ್ರತಂಡದ ಸದಸ್ಯರು, ಕಲಾವಿದರು ಹಾಗೂ ಗಣ್ಯರು ಭಾಗವಹಿಸಿ ಚಿತ್ರದ ಯಶಸ್ಸಿನ ಸಂತಸವನ್ನು ಹಂಚಿಕೊಂಡರು. ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಯ ಕೃಷ್ಣೇಗೌಡ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಸಂಭ್ರಮಾಚರಣೆಗೆ ಸಾಥ್ ನೀಡಿದರು. ಬಹುನಿರೀಕ್ಷೆ…
