ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್ ನಾಮ ನಿರ್ದೇಶನ:ದರ್ಶನ್, ರಕ್ಷಿತ್ ಚಿತ್ರಗಳಿಗೆ ಸಿಂಹಪಾಲುಕಾಟೇರ ಚಿತ್ರ 15, ಸಪ್ತಸಾಗರದಾಚೆ ಎಲ್ಲೋ ಚಿತ್ರಕ್ಕೆ 13.
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿಯ 5ನೇ ವರ್ಷದ ಪ್ರಶಸ್ತಿಗಳ ನಾಮ ನಿರ್ದೇಶನ ಘೋಷಣೆ ಮತ್ತು ಟ್ರೋಫಿ ಅನಾವರಣ ಕಾರ್ಯಕ್ರಮ ಜನವರಿ 16ರಂದು ಬೆಂಗಳೂರಿನಲ್ಲಿ ನಡೆಯಿತು. ಖ್ಯಾತ ನಿರ್ದೇಶಕ ಇಂದ್ರಜಿತ್ ಲಂಕೇಶ್ ಮತ್ತು ನಟಿ ಅಮೂಲ್ಯ ಟ್ರೋಫಿಯನ್ನು ಅನಾವರಣಗೊಳಿಸಿದರು. ಇದೇ ಸಂದರ್ಭದಲ್ಲಿ 5ನೇ ವರ್ಷದ ಪ್ರಶಸ್ತಿಗಳಿಗಾಗಿ ನಾಮ ನಿರ್ದೇಶನ ಆಯ್ಕೆಗಳನ್ನು ಘೋಷಣೆ ಮಾಡಿದ್ದು ದರ್ಶನ್ ನಟನೆಯ ಕಾಟೇರ ಚಿತ್ರವು ಅತೀ ಹೆಚ್ಚು ವಿಭಾಗಗಳಲ್ಲಿ ನಾಮ ನಿರ್ದೇಶನಗೊಂಡಿದ್ದು, ರಕ್ಷಿತ್ ನಟನೆಯ ಸಪ್ತ ಸಾಗರದಾಚೆ ಎಲ್ಲೋ ಎರಡನೇ ಸ್ಥಾನವನ್ನು ಅಲಂಕರಿಸಿದೆ. ಅತ್ಯುತ್ತಮ…