ರೆಟ್ರೋ ಸ್ಟೈಲ್’ನಲ್ಲಿ ಮೂಡಿ ಬಂದ “ಹೇಳು ಗೆಳತಿ”. ಚರಣ್‌ರಾಜ್ ಕಂಠಸಿರಿಗೆ ಕೇಳುಗರು ಫಿದಾ

ರೆಟ್ರೋ ಸ್ಟೈಲ್’ನಲ್ಲಿ ಮೂಡಿ ಬಂದ “ಹೇಳು ಗೆಳತಿ”. ಚರಣ್‌ರಾಜ್ ಕಂಠಸಿರಿಗೆ ಕೇಳುಗರು ಫಿದಾ

ವಿಹಾನ್, ಅಂಕಿತಾ ಅಮರ್ ಪ್ರಮುಖ ಭೂಮಿಕೆಯಲ್ಲಿರುವ ಇಬ್ಬನಿ ತಬ್ಬಿದ ಇಳೆಯಲಿ ಸಿನಿಮಾದ ಮತ್ತೊಂದು ಹಾಡು ಬಿಡುಗಡೆಯಾಗಿದೆ. ಚಂದ್ರಜಿತ್ ಬೆಳಿಯಪ್ಪ ನಿರ್ದೇಶನವಿರುವ ಈ ಸಿನಿಮಾದ ‘ಹೇಳು ಗೆಳತಿ’ ಎಂಬ ಮೆಲೋಡಿ ಹಾಡನ್ನು ಇತ್ತೀಚೆಗಷ್ಟೇ ಬಿಡುಗಡೆ ಮಾಡಿದೆ ಚಿತ್ರತಂಡ. ಈ ಹಿಂದೆ ಹರಿಬಿಟ್ಟಿದ್ದ ಹಾಡುಗಳಿಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿತ್ತು. ಇದೀಗ ‘ಹೇಳು ಗೆಳತಿ’ ಹಾಡಿಗೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂಬುದು ತಂಡದ ಅನಿಸಿಕೆ. ರೆಟ್ರೋ ಹಿನ್ನೆಲೆಯಲ್ಲಿ ಮೂಡಿ ಬಂದಿರುವ ಈ ಮಾಧುರ್ಯಭರಿತ ಗೀತೆಯನ್ನು ಪರವಃ ಮ್ಯೂಸಿಕ್ ಯೂಟ್ಯೂಬ್ ಚಾನಲ್‌ನಲ್ಲಿ ಬಿಡುಗಡೆ…