‘ಪ್ರೀತಿಯ ಆಯುಧ’ ಹಿಡಿದ ವಿಜಯ್‘ಲಿಯೋ’ ಚಿತ್ರದ ಮೂರನೇ ಹಾಡು ಬಿಡುಗಡೆ

‘ಪ್ರೀತಿಯ ಆಯುಧ’ ಹಿಡಿದ ವಿಜಯ್‘ಲಿಯೋ’ ಚಿತ್ರದ ಮೂರನೇ ಹಾಡು ಬಿಡುಗಡೆ

ಕಾಲಿವುಡ್ ನ ಜನಪ್ರಿಯ ನಟ ವಿಜಯ್ ಅಭಿನಯದ ‘ಲಿಯೋ’ ಚಿತ್ರವು ಅಕ್ಟೋಬರ್‍ 19ರಂದು ಜಗತ್ತಿನಾದ್ಯಂತ ಐದು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. ಈ ಮಧ್ಯೆ, ’ಪ್ರೀತಿಯ ಆಯುಧ’ ಎಂಬ ಚಿತ್ರದ ಮೂರನೇ ಹಾಡನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಗಿದೆ.ಕಾಶ್ಮೀರದ ಸುಂದರ ತಾಣಗಳಲ್ಲಿ ಚಿತ್ರೀಕರಿಸಲಾಗಿರುವ ಈ ಹಾಡಿನಲ್ಲಿ ವಿಜಯ್‍, ತ್ರಿಷಾ ಮುಂತಾದವರು ಕಾಣಿಸಿಕೊಂಡಿದ್ದು, ಜೆ.ವಿ. ಸುಧಾನ್ಶು ಮತ್ತು ಪ್ರಿಯಾ ಮಾಲಿ ಹಾಡಿದ್ದಾರೆ. ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜಿಸಿರುವ ಈ ಹಾಡಿಗೆ ವರದರಾಜ್‍ ಚಿಕ್ಕಬಳ್ಳಾಪುರ ಸಾಹಿತ್ಯ ರಚಿಸಿದ್ದಾರೆ.‘ಲಿಯೋ’ ಚಿತ್ರವನ್ನು ಸೆವೆನ್ ಸ್ಕ್ರೀನ್ ಸ್ಟುಡಿಯೋಸ್…