ಟ್ರೇಲರ್ ನಲ್ಲಿ ಸದ್ದು ಮಾಡುತ್ತಿದೆ ಯತಿರಾಜ್ ನಿರ್ದೇಶನದ “ಸತ್ಯಂ ಶಿವಂ” .

ಟ್ರೇಲರ್ ನಲ್ಲಿ ಸದ್ದು ಮಾಡುತ್ತಿದೆ ಯತಿರಾಜ್ ನಿರ್ದೇಶನದ “ಸತ್ಯಂ ಶಿವಂ” .

ಪತ್ರಕರ್ತ ಹಾಗೂ ಕಲಾವಿದನಾಗಿ ಗುರುತಿಸಿಕೊಂಡಿರುವ ಯತಿರಾಜ್ ನಿರ್ದೇಶನದ “ಸತ್ಯಂ ಶಿವಂ” ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಹಾಗೂ ಎರಡು ಹಾಡುಗಳ ಪ್ರದರ್ಶನ ಇತ್ತೀಚೆಗೆ ನಡೆಯಿತು. ನಿರ್ದೇಶಕ ದಯಾಳ್ ಪದ್ಮನಾಭನ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.ತಮಿಳಿನ ಖ್ಯಾತ ನಿರ್ದೇಶಕ ಕೆ ಬಾಲಚಂದರ್, ಕಲಾವಿದರ ಬಾಡಿ ಲಾಂಗ್ವೇಜ್ ನ್ನೆ ಪಾತ್ರವನ್ನಾಗಿಸಿ ಅಭಿನಯ ತೆಗೆಸುತ್ತಿದ್ದರು. ಅದೇ ಫಾರ್ಮುಲವನ್ನೆ ಯತಿರಾಜ್ ಅನುಸರಿಸಿದಂತೆ ಕಾಣುತ್ತದೆ ಎಂದು ಮಾರ್ಮಿಕವಾಗಿ ದಯಾಳ್ ಹೇಳಿದರು. ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ನಿರ್ದೇಶಕ ಯತಿರಾಜ್ , “ಸತ್ಯಂ ಶಿವಂ” ಎಂದರೆ ಎರಡು…