ಗೌರಿ ಹಬ್ಬದಂದು ಗಣೇಶನ ಸನ್ನಿಧಿಯಲ್ಲಿ ಝೈದ್ ಖಾನ್ ಅಭಿನಯದ “ಕಲ್ಟ್” ಚಿತ್ರಕ್ಕೆ ಚಾಲನೆ . ಅನಿಲ್ ಕುಮಾರ್ ನಿರ್ದೇಶನದ ಈ ಚಿತ್ರದ ನಾಯಕಿಯರಾಗಿ ರಚಿತಾರಾಮ್ ಹಾಗೂ ಮಲೈಕಾ .

ಗೌರಿ ಹಬ್ಬದಂದು ಗಣೇಶನ ಸನ್ನಿಧಿಯಲ್ಲಿ ಝೈದ್ ಖಾನ್ ಅಭಿನಯದ “ಕಲ್ಟ್” ಚಿತ್ರಕ್ಕೆ ಚಾಲನೆ . ಅನಿಲ್ ಕುಮಾರ್ ನಿರ್ದೇಶನದ ಈ ಚಿತ್ರದ ನಾಯಕಿಯರಾಗಿ ರಚಿತಾರಾಮ್ ಹಾಗೂ ಮಲೈಕಾ .

“ಬನಾರಸ್” ಚಿತ್ರದ ನಂತರ ಝೈದ್ ಖಾನ್ ನಾಯಕರಾಗಿ ನಟಿಸುತ್ತಿರುವ ಹಾಗೂ ಈ ವರ್ಷದ ಭರ್ಜರಿ ಹಿಟ್ “ಉಪಾಧ್ಯಕ್ಷ” ಚಿತ್ರದ ನಿರ್ದೇಶಕ ಅನಿಲ್ ಕುಮಾರ್ ನಿರ್ದೇಶನದ “ಕಲ್ಟ್” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಮಹಾಲಕ್ಷ್ಮಿ ಲೇಔಟ್ ನಲ್ಲಿರುವ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ಗೌರಿಹಬ್ಬದ ಶುಭದಿನದಂದು ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ನಿರ್ದೇಶಕ ಅನಿಲ್ ಕುಮಾರ್ ಅವರ ಶ್ರೀಮತಿ ಆರಂಭ ಫಲಕ ತೋರಿದರು. ಝೈದ್ ಖಾನ್ ಅವರ ಅಜ್ಜಿ(ಸಚಿವ ಜಮೀರ್ ಅಹಮದ್ ಖಾನ್ ಅವರ ತಾಯಿ) ಕ್ಯಾಮೆರಾ ಚಾಲನೆ ಮಾಡಿದರು….

ದೀಕ್ಷಿತ್ ಶೆಟ್ಟಿ ಅಭಿನಯದ “ಬ್ಯಾಂಕ್ of ಭಾಗ್ಯಲಕ್ಷ್ಮಿ” ಚಿತ್ರದ ಅನಿಮೇಷನ್‌ ಟೀಸರ್ ಗೆ ಮೆಚ್ಚುಗೆಯ ಮಹಾಪೂರ .

ದೀಕ್ಷಿತ್ ಶೆಟ್ಟಿ ಅಭಿನಯದ “ಬ್ಯಾಂಕ್ of ಭಾಗ್ಯಲಕ್ಷ್ಮಿ” ಚಿತ್ರದ ಅನಿಮೇಷನ್‌ ಟೀಸರ್ ಗೆ ಮೆಚ್ಚುಗೆಯ ಮಹಾಪೂರ .

ರಂಗಿ ತರಂಗ’, ‘ಅವನೇ ಶ್ರೀಮನ್ನಾರಾಯಣ’ ದಂತಹ ಯಶಸ್ವಿ ಚಿತ್ರಗಳ ನಿರ್ಮಾಪಕ ಹೆಚ್.ಕೆ ಪ್ರಕಾಶ್ ನಿರ್ಮಾಣದ, “ದಿಯಾ” ಸೇರಿದಂತೆ ಅನೇಕ ಯಶಸ್ವಿ ಸಿನಿಮಾಗಳ ಮೂಲಕ ಜನಪ್ರಿಯರಾಗಿರುವ ದೀಕ್ಷಿತ್ ಶೆಟ್ಟಿ ನಾಯಕರಾಗಿ ನಟಿಸಿರುವ ಹಾಗೂ ಅಭಿಷೇಕ್ ಎಂ ನಿರ್ದೇಶನದ “ಬ್ಯಾಂಕ್ ಆಫ್ ಭಾಗ್ಯಲಕ್ಷ್ಮೀ” ಚಿತ್ರದ ಅನಿಮೇಷನ್‌ ಟೀಸರ್ ಇತ್ತೀಚಿಗೆ ಬಿಡುಗಡೆಯಾಗಿದೆ. ಕನ್ನಡ ಚಿತ್ರರಂಗದಲ್ಲೇ ಹೊಸ ಪ್ರಯೋಗ ಎನ್ನಬಹುದಾದ ಈ ಟೀಸರ್ ಮೂಲಕ ಚಿತ್ರದ ಕಥೆ ಹೇಳುವ ಪ್ರಯತ್ನ ಮಾಡಲಾಗಿದೆ. ಈ ಅನಿಮೇಷನ್‌ ಟೀಸರ್ ಗಾಗಿ ಏಳೆಂಟು ಜನ ನುರಿತ ತಂತ್ರಜ್ಞರು…